ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (Jawaharlal Nehru University) ಈಗ ಮತ್ತೆ ಸುದ್ದಿಯಲ್ಲಿದ್ದು, ಕ್ಯಾಂಪಸ್‍ನ ಗೋಡೆಗಳ ಮೇಲೆ ಬ್ರಾಹ್ಮಣ ಮತ್ತು ಬನಿಯಾ ಸಮುದಾಯಗಳ ವಿರುದ್ಧ ಘೋಷಣೆಗಳನ್ನು (Anti-Brahmin Slogans) ಬರೆಯಲಾಗಿದೆ. ಕಳೆದ ರಾತ್ರಿ ಸ್ಕೂಲ್ ಆಫ್ ಇಂಟರ್‌ನ್ಯಾಶನಲ್ ಸ್ಟಡೀಸ್- II ಕಟ್ಟಡದ ಗೋಡೆಗಳ ಮೇಲೆ ವಿವಾದಾತ್ಮಕ ಬರಹಗಳು ಕಂಡು ಬಂದಿವೆ.
Advertisement
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕುಲಪತಿ ಶಾಂತಿಶ್ರೀ ಡಿ. ಪಂಡಿತ್ ವಿಭಾಗದ ಕುಂದುಕೊರತೆಗಳ ಸಮಿತಿಯ ಡೀನ್ ಅವರಿಂದ ಈ ಬಗ್ಗೆ ವರದಿ ಕೇಳಿದ್ದಾರೆ. ಅಲ್ಲದೇ ಕ್ಯಾಂಪಸ್‍ನಲ್ಲಿ ಈ ಪ್ರತ್ಯೇಕವಾದ ಪ್ರವೃತ್ತಿಯನ್ನು ಖಂಡಿಸುತ್ತೇವೆ. ಜೆಎನ್‍ಯು (JNU) ಎಲ್ಲರಿಗೂ ಸೇರಿದ್ದು, ಇಂತಹ ಘಟನೆಗಳನ್ನು ಸಹಿಸುವುದಿಲ್ಲ ಎಂದು ಕಾಲೇಜಿನ ಅಡ್ಮಿನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು
Advertisement
Advertisement
ಎರಡು ಸಮುದಾಯಗಳ ವಿರುದ್ಧದ ಬರಹಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, “ಬ್ರಾಹ್ಮಣರು ಕ್ಯಾಂಪಸ್ ತೊರೆಯಿರಿ”, “ರಕ್ತವಿದೆ”, “ಬ್ರಾಹ್ಮಣ ಭಾರತ್ ಛೋಡೋ” ಮತ್ತು “ಬ್ರಾಹ್ಮಿನೋ-ಬನಿಯಾಸ್, ನಾವು ನಿಮಗಾಗಿ ಬರುತ್ತಿದ್ದೇವೆ! ನಾವು ಸೇಡು ತೀರಿಸಿಕೊಳ್ಳುತ್ತೇವೆ” ಎಂದು ಬರೆಯಲಾಗಿದೆ. ಇದನ್ನೂ ಓದಿ: ಸಿಧು ಹತ್ಯೆಯ ಮಾಸ್ಟರ್ ಮೈಂಡ್ ಕ್ಯಾಲಿಫೋರ್ನಿಯಾದಲ್ಲಿ ಬಂಧನ
Advertisement
ಘಟನೆಯ ಹಿಂದೆ ಎಡಪಕ್ಷಗಳು ಪ್ರೇರಿತ ಸಂಘಟನೆಗಳಿದೆ ಎಂದು ಆರ್‌ಎಸ್‌ಎಸ್-ಸಂಯೋಜಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಆರೋಪಿಸಿದೆ. ಕಮ್ಯುನಿಸ್ಟ್ ಗೂಂಡಾಗಳಿಂದ ಶೈಕ್ಷಣಿಕ ಸ್ಥಳಗಳ ಅತಿರೇಕದ ಪ್ರವೃತ್ತಿಯನ್ನು ಎಬಿವಿಪಿ ಖಂಡಿಸುತ್ತದೆ. ಸ್ಕೂಲ್ ಆಫ್ ಇಂಟರ್‌ನ್ಯಾಶನಲ್ ಸ್ಟಡೀಸ್- II ಕಟ್ಟಡದಲ್ಲಿರುವ JNU ಗೋಡೆಗಳ ಮೇಲೆ ಕಮ್ಯುನಿಸ್ಟರು ನಿಂದನಾತ್ಮಕ ಬರಹಗಳನ್ನು ಬರೆದಿದ್ದಾರೆ. ಬೆದರಿಸಲು ಮುಕ್ತ ಚಿಂತನೆಯ ಪ್ರಾಧ್ಯಾಪಕರ ಕೊಠಡಿಗಳನ್ನು ವಿರೂಪಗೊಳಿಸಿದ್ದಾರೆ ಎಂದು ಎಬಿವಿಪಿ ಜೆಎನ್‍ಯು ಅಧ್ಯಕ್ಷ ರೋಹಿತ್ ಕುಮಾರ್ ಹೇಳಿದ್ದಾರೆ.