ಮಡಿಕೇರಿ: ಕೊಡಗಿನಲ್ಲಿ ಜೂನ್ 13 ರವರೆಗೆ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.
ಈ ಮಾಹಿತಿ ಆಧರಿಸಿ ಜಿಲ್ಲೆಯ ಜನರಿಗೆ ಸುರಕ್ಷಿತವಾಗಿರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಅಲ್ಲದೆ ಮುನ್ನೆಚ್ಚರಿಕೆಯಿಂದಿರಿ, ತುರ್ತು ಪರಿಸ್ಥಿತಿಯಲ್ಲಿ ಕಂಟ್ರೋಲ್ ರೂಮ್‍ಗೆ ಮಾಹಿತಿ ನೀಡಿ ಎಂದು ಸಾರ್ವಜನಿಕರಲ್ಲಿ ಕೊಡಗು ಡಿಸಿ ಅನೀಸ್ ಕಣ್ಮನಿ ಜಾಯ್ ಅವರು ಮನವಿ ಮಾಡಿದ್ದಾರೆ.
Advertisement
Advertisement
ಅಲ್ಲದೆ ಜೂನ್ 13ರವರೆಗೆ ಮಳೆರಾಯನ ಆರ್ಭಟ ಜೋರಾಗಿರುವ ಸಾಧ್ಯತೆ ಇದ್ದರೂ, ಜೂನ್ 14 ರಿಂದ 29 ರವರೆಗೆ ಮಳೆಯ ಪ್ರಮಾಣ ಕಡಿಮೆಯಾಗಿರುತ್ತದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಹೀಗಾಗಿ ಜಿಲ್ಲೆಯಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ ಹಿನ್ನೆಲೆ ಸಾರ್ವಜನಿಕರು ಹಾಗೂ ಪ್ರವಾಸಿಗರ ಹಿತದೃಷ್ಟಿಯಿಂದ ಈ ಸೂಚನೆ ರವಾನಿಸಲಾಗಿದೆ.