ತುಮಕೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಬಹುದು ಎಂಬ ಊಹಾಪೋಹಗಳು ಹಬ್ಬಿರುವ ಬೆನ್ನಲ್ಲೇ ಮಾಜಿ ಶಾಸಕ ಬಿ. ಸುರೇಶ್ ಗೌಡ ಆಗಸ್ಟ್ 15ರ ಒಳಗಾಗಿ ಎಲ್ಲವೂ ಆಗಬಹುದು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸಿಎಂ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿರುವ ಮುಖ್ಯಮಂತ್ರಿ ಒಳ್ಳೆಯ ಕೆಲಸವನ್ನು ಮಾಡುತ್ತಿದ್ದಾರೆ. ಅವರ 1 ವರ್ಷದ ಅವಧಿಯಲ್ಲಿ ಕೆರೆ ಕಟ್ಟೆಗಳು ತುಂಬಿವೆ. ಆದರೆ ಪಕ್ಷ ಏನು ನಿರ್ಧಾರ ತೆಗೆದು ಕೊಳ್ಳುತ್ತದೆಯೋ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.
Advertisement
Advertisement
ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಆಗುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಆ ಬಗ್ಗೆ ನನಗೆ ಗೊತ್ತಿಲ್ಲ. ನಾನು ಅವರನ್ನು ಭೇಟಿಯಾಗಿದ್ದೆ. ಅವರು ಅದರ ಬಗ್ಗೆ ಮಾತನಾಡಿಲ್ಲ. ಅದು ಮಾಧ್ಯಮದ ಸೃಷ್ಟಿ. ಆದರೆ ಅವರು ಮುಖ್ಯಮಂತ್ರಿ ಆದರೆ ಸಂತೋಷ ಎಂದು ತಿಳಿಸಿದರು. ಇದನ್ನೂ ಓದಿ: ನನ್ನ ಚುನಾವಣಾ ಸ್ಪರ್ಧೆ ಬಗ್ಗೆ ಪಕ್ಷ ತೀರ್ಮಾನಿಸುತ್ತೆ: ವಿಜಯೇಂದ್ರ
Advertisement
ಬಿಜೆಪಿ ಪಕ್ಷ ವಿಧಾನಸಭಾ ಚುನಾವಣೆಗೆ 6-7 ತಿಂಗಳುಗಳು ಇರಬೇಕಾದರೆಯೇ ಮುಖ್ಯಮಂತ್ರಿ ಬದಲಾವಣೆ ಮಾಡಿದ ಉದಾಹರಣೆ ಇದೆ. ಆಗಸ್ಟ್ 15ರ ಒಳಗೆ ಎಲ್ಲವೂ ಆಗಬಹುದು ಎನ್ನುವ ಅಭಿಪ್ರಾಯ ನನ್ನದು ಎಂದರು.
Advertisement
ಬಿಜೆಪಿ 2023ರಲ್ಲಿ ಪುನಃ ಅಧಿಕಾರ ಹಿಡಿಯುವ ಉದ್ದೇಶದಿಂದ ಪಕ್ಷದಲ್ಲಿ ಕೆಲವು ಬದಲಾವಣೆಗಳು ಆಗಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸ್ಥಾನಕ್ಕೆ ಕಂಟಕ ಬರುವ ಸಾಧ್ಯತೆಗಳನ್ನು ಪುಷ್ಟೀಕರಿಸಿದರು. ಇದನ್ನೂ ಓದಿ: ಧ್ವಜದ ಬಗ್ಗೆ ಸಿದ್ದರಾಮಯ್ಯ ಮಾತು ಕೇಳಿ ದುಃಖವಾಗುತ್ತಿದೆ: ನಾಗೇಶ್ ಕಿಡಿ