ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಸ್ಥಳೀಯ ಜನರಲ್ಲಿ ಭಯ ಶುರುವಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ 2018ರಲ್ಲಾದ ಪರಿಸ್ಥಿತಿ ಮತ್ತೆ ಎದುರಾಗಲಿದೆಯೇ ಎಂಬ ಆತಂಕ ಸೃಷ್ಟಿಯಾಗಿದೆ.
ಇದೀಗ ಕೊಡಗಿನಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದ್ದು, ಮೊದಲ ಹೆಜ್ಜೆಯಾಗಿ ಭಾರೀ ವಾಹನಗಳಿಗೆ ಜಿಲ್ಲೆಯಲ್ಲಿ ನಿರ್ಬಂಧ ಹೇರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ವ್ಯಾಪಕ ಮಳೆಯಾಗುತ್ತಿರುವುದರಿಂದ ಭೂಕುಸಿತ, ಗುಡ್ಡ ಕುಸಿತದ ಅಪಾಯವಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಶ್ವಾನದ ಜೊತೆ ಬೈಕ್‍ನಲ್ಲಿ ಲಡಾಕ್ ಟ್ರಿಪ್‍ಗೆ ಹೊರಟ ಯುವಕ
ಎಲ್ಲಾ ರೀತಿಯ ಮರದ ದಿಮ್ಮಿ, ಮರಳು ಸಾಗಿಸುವ ವಾಹನಗಳನ್ನು ಇಂದಿನಿಂದ ಅಕ್ಟೋಬರ್ 15ರ ವರೆಗೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. 16,200 ಕೆ.ಜಿ ಗಿಂತ ಹೆಚ್ಚಿನ ತೂಕದ ಸರಕು ಸಾಗಣೆ ವಾಹನಗಳಿಗೆ ಪ್ರವೇಶವಿಲ್ಲ. ಬುಲೆಟ್ ಟ್ಯಾಂಕರ್, ಶಿಪ್ ಕಾರ್ಗೋ ಕಂಟೈನರ್, ಲಾಂಗ್ ಚಾಸೀಸ್(ಮಲ್ಟಿ ಆ್ಯಕ್ಸೆಲ್) ವಾಹನಗಳಿಗೂ ನಿರ್ಬಂಧಿಸಲಾಗಿದೆ.
ಸದ್ಯ ಅಡುಗೆ ಅನಿಲ, ಇಂಧನ ಪೂರೈಕೆ, ಹಾಲು ಪೂರೈಕೆ, ಸರ್ಕಾರಿ ವಾಹನಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಸಿ. ಸತೀಶ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಆಪರೇಷನ್ ಅಮರನಾಥ ಚಾಲೆಂಜ್ ಆಗಿದೆ: ಕರ್ನಲ್ ವಿ.ಎಂ. ನಾಯಕ್