ಪಂಜಾಬ್‍ನನ್ನು ಕಾಂಗ್ರೆಸ್ ಲೂಟಿ ಮಾಡುತ್ತಿದೆ: ಅರವಿಂದ್ ಕೇಜ್ರಿವಾಲ್

Public TV
1 Min Read
arvind kejriwal

ಚಂಡೀಗಢ: ಪಂಜಾಬ್‍ನಲ್ಲಿ ಪ್ರಾಮಾಣಿಕವಾದಂತಹ ಸರ್ಕಾರವನ್ನು ರಚಿಸಲು ಮತ್ತು ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ತಮ್ಮ ಪಕ್ಷಕ್ಕೆ ಮತ ನೀಡುವಂತೆ ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.

ಫೆಬ್ರವರಿ 20ರಂದು ವಿಧಾನಸಭಾ ಚುನಾವಣೆಯ ಪ್ರಚಾರದ ಕೊನೆಯ ದಿನವಾಗಿದ್ದು, ಎಎಪಿಯ ಪ್ರತಿಸ್ಪರ್ಧಿಗಳು ಕಾಂಗ್ರೆಸ್ ಅನ್ನು ಸೋಲಿಸಲು ಕೈಜೋಡಿಸಿದ್ದಾರೆ. ಆದರೆ ಪಂಜಾಬ್‍ನ ಜನರು ತಮ್ಮ ಪಕ್ಷವನ್ನು ಅಧಿಕಾರಕ್ಕೆ ತರಲು ಮನಸ್ಸು ಮಾಡಬೇಕೆಂದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ಮೋದಿಯನ್ನು ಹತ್ಯೆ ಮಾಡಲೆಂದೇ ಉಗ್ರರಿಂದ ಆಸ್ಪತ್ರೆಯಲ್ಲಿ ಬಾಂಬ್‌ ಸ್ಫೋಟ!

congress logo

ಕಳೆದ 70 ವರ್ಷಗಳಿಂದ ಕಾಂಗ್ರೆಸ್ಸಿಗರು ಪಂಜಾಬ್ ಅನ್ನು ಲೂಟಿ ಮಾಡುತ್ತಿದ್ದಾರೆ ಮತ್ತು ಅದನ್ನು ಮುಂದುವರೆಸುತ್ತಾ ಬರುತ್ತಿದ್ದಾರೆ. ಪಂಜಾಬ್‍ನಲ್ಲಿ ಎಎಪಿ ಸರ್ಕಾರ ರಚಿಸಿದರೆ, ಅದನ್ನು ಶಾಶ್ವತವಾಗಿ ತಡೆಯಲಾಗುತ್ತದೆ ಎಂಬ ಭಯದಿಂದಾಗಿ ಎಎಪಿಯನ್ನು ತಡೆಯಲು ಒಗ್ಗೂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಎಲ್ಲ ಜನರು ಒಗ್ಗೂಡಿ ಅವರ ಲೂಟಿ ಮತ್ತು ಭ್ರಷ್ಟಾಚಾರದ ರಾಜಕಾರಣವನ್ನು ಕೊನೆಗಾಣಿಸಬೇಕೆಂದು ಜನರಿಗೆ ವಿನಂತಿಸಿದರು. ಎಎಪಿ ಅಧಿಕಾರಕ್ಕೆ ಬರಲಿದೆ ಮತ್ತು ಪಂಜಾಬ್‍ನಲ್ಲಿ ಪ್ರಾಮಾಣಿಕ ಸರ್ಕಾರ ರಚನೆಯಾಗುತ್ತದೆ. ಸಂಪನ್ಮೂಲಗಳ ಲೂಟಿ ಕೊನೆಗೊಳ್ಳಲಿದೆ. ಪಂಜಾಬ್‍ನ ಹಣವನ್ನು ಈಗ ರಾಜ್ಯದ ಜನತೆಗಾಗಿ ಖರ್ಚು ಮಾಡಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಉಗ್ರ ಸಂಘಟನೆಗೆ ರಹಸ್ಯ ಮಾಹಿತಿ ಸೋರಿಕೆ – IPS ಅಧಿಕಾರಿ ಅರೆಸ್ಟ್

CM Arvind Kejriwal

ಈ ಬಾರಿ ಪಂಜಾಬ್ ಉಳಿಸಲು ನಾವು ಮತ ಹಾಕಬೇಕು. ನಿಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಮತ ಚಲಾಯಿಸಿ. ಪಂಜಾಬ್‍ನಿಂದ ಭ್ರಷ್ಟಾಚಾರ ಮತ್ತು ಮಾಫಿಯಾವನ್ನು ಕೊನೆಗೊಳಿಸಲು ಮತ ಚಲಾಯಿಸಿ ಎಂದು ಹೇಳುತ್ತಾ, ಕೇಜ್ರಿವಾಲ್ ಅವರು ಜಲಾಲಾಬಾದ್ ಮತ್ತು ಅಬೋಹರ್ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು.

Share This Article
Leave a Comment

Leave a Reply

Your email address will not be published. Required fields are marked *