– ಕಾಂಗ್ರೆಸ್ ವಿಸರ್ಜನೆ ಮಾಡಿ ಎಂದು ಗಾಂಧೀಜಿ ಆವಾಗ್ಲೇ ಹೇಳಿದ್ದರು
– ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮ ಕುರಿತು ಹೆಚ್‌ಡಿಕೆ ಟೀಕೆ
ಮಂಡ್ಯ: ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗಾಂಧಿ (Gandhiji) ಹೆಸರಿನಲ್ಲಿ ಕಾರ್ಯಕ್ರಮ ಮಾಡುತ್ತಿದೆ. ಆದ್ರೆ ಕಟೌಟ್‌ಗಳಲ್ಲಿ ಗಾಂಧೀಜಿ ಫೋಟೋನೇ ನೋಡಲಿಲ್ಲ. ನಕಲಿ ಗಾಂಧಿಗಳ ಫೋಟೋ ಆಕಾಶದೆತ್ತರಕ್ಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಟೀಕಿಸಿದರು.
ಮಂಡ್ಯದಲ್ಲಿ (Mandya) ದಿಶಾ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಕೆಂಡಾಮಂಡಲರಾದರು.
Advertisement
Advertisement
ರಾಮರಾಜ್ಯ ಪರಿಕಲ್ಪನೆ ರಾಜ್ಯದಲ್ಲಿದ್ಯಾ?
ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ (Belagavi Session Centenary) ಕಾರ್ಯಕ್ರಮ ಕುರಿತು ಮಾತನಾಡಿದ ಹೆಚ್‌ಡಿಕೆ, ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗಾಂಧಿ ಹೆಸರಲ್ಲಿ ಕಾರ್ಯಕ್ರಮ ಮಾಡುತ್ತಿದೆ. ಆದ್ರೆ ಕಟೌಟ್‌ಗಳಲ್ಲಿ ಗಾಂಧೀಜಿ ಫೋಟೋನೇ ನೋಡಲಿಲ್ಲ. ನಕಲಿ ಗಾಂಧಿಗಳ ಫೋಟೋ ಆಕಾಶದೆತ್ತರಕ್ಕೆ ಹಾಕಿದ್ದಾರೆ. ಗಾಂಧೀಜಿ ಹೆಸರಲ್ಲಿ ಕಾರ್ಯಕ್ರಮ ಮಾಡಲು ನನ್ನ ತಕರಾರಿಲ್ಲ. ಸಂಘಟಿತ ಹೋರಾಟದ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಗಾಂಧೀಜಿ. ಆದ್ರೆ ಅವರ ರಾಮರಾಜ್ಯ ಪರಿಕಲ್ಪನೆ ಇವತ್ತು ರಾಜ್ಯದಲ್ಲಿದ್ಯಾ? ಎಂದು ಪ್ರಶ್ನಿಸಿದರು.
Advertisement
Advertisement
2.75 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದೆ:
ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಹಣ ಬಿಡುಗಡೆ ಆಗಿಲ್ಲ. ಸರಿಯಾದ ಚಿಕಿತ್ಸೆ ಇಲ್ಲದೇ ಬಾಣಂತಿಯರು, ಮಕ್ಕಳು ಸಾಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳಿಲ್ಲ. 2.75 ಲಕ್ಷ ಸರ್ಕಾರಿ ನೌಕರಿ ಖಾಲಿ ಇಟ್ಟುಕೊಂಡಿದ್ದಾರೆ. ಪ್ರತಿನಿತ್ಯ ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಏನು ಹೇಳ್ತೀರಿ? ಎಂದು ಆಕ್ರೋಶ ಹೊರಹಾಕಿದ್ರು.
ಕಾಂಗ್ರೆಸ್ ವಿಸರ್ಜನೆ ಮಾಡಿ ಎಂದು ಗಾಂಧೀಜಿ ಆವಾಗಲೇ ಹೇಳಿದ್ದರು. ಏಕೆಂದರೆ ಈಗ ಇರೋದು ಆಲಿಬಾಬ ಮತ್ತು 40 ಮಂದಿ ಕಳ್ಳರಿದ್ದಾರಲ್ಲ, ಆ ರೀತಿಯ ಕಾಂಗ್ರೆಸ್. ಜನಪರ ಕೆಲಸ ಮಾಡುವ ಕಾಂಗ್ರೆಸ್ ಅಲ್ಲ. ಗ್ಯಾರಂಟಿ ಗ್ಯಾರಂಟಿ ಅಂತಾರೆ ಏನ್ ಗ್ಯಾರಂಟಿ ಕೊಡ್ತಿದ್ದಾರೆ? ಮಹಿಳೆಯರಿಗೆ 2 ಸಾವಿರ ರೂ. ಕೊಡ್ತಿದ್ದಾರೆ, ಇನ್ನೂ 2 ಸಾವಿರ ಕೊಡಲಿ. ಆದ್ರೆ ಟ್ಯಾಕ್ಸ್ ಯಾವ ರೀತಿ ಹಾಕ್ತಿದ್ದಾರೆ? 2 ಲಕ್ಷ ಕೋಟಿ ಸಾಲ ಮಾಡಿ ಗ್ಯಾರಂಟಿ ಕೊಡೋದಕ್ಕೆ ನೀವೆ ಬೇಕಾ? ಆ ಸಾಲ ತೀರಿಸುವವರು ಯಾರು? ಜನಸಾಮಾನ್ಯರೆ ತೀರಿಸಬೇಕಲ್ವಾ? ಗಾಂಧೀಜಿ ಹೆಸರು ಹೇಳಿದ್ರೆ ಆಗಲ್ಲ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು ಎಂದು ವಾಗ್ದಾಳಿನಡೆಸಿದರು.
ಇನ್ನೂ ಸರ್ಕಾರದಿಂದ ಪೊಲೀಸ್ ಇಲಾಖೆ ದುರ್ಬಳಕೆ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವರು, ನಮ್ಮ ರಾಜ್ಯದ ಪೊಲೀಸ್ ಇಲಾಖೆ ಮೇಲೆ ದೇಶವೇ ಗೌರವ, ನಂಬಿಕೆ ಇಟ್ಟಿತ್ತು. ಎಲ್ಲರೂ ಪೊಲೀಸ್ ವ್ಯವಸ್ಥೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು. ಅಂತಹ ಪೊಲೀಸ್ ಇಲಾಖೆಯನ್ನ ಯಾವ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ? ರಾಜ್ಯದ ಆಡಳಿತ ವ್ಯವಸ್ಥೆ ಏನಾಗಿದೆ? ಆಸ್ಪತ್ರೆಗಳಲ್ಲಿ ವೈದ್ಯರಿಲ್ಲ, ಗ್ಲೂಕೋಸ್, ಮೆಡಿಸನ್ ಡಿಫಾಲ್ಟ್ ಅಂತ ನೀವೇ ಹೇಳ್ಕೊಂಡಿದ್ದೀರಿ. ದೇಶದಲ್ಲಿ ಹೆಣ್ಣು ಮಕ್ಕಳಿಗೆ ಕಾಂಗ್ರೆಸ್ ಬಿಟ್ಟರೇ ಯಾರು ಗೌರವ ಕೊಡಲ್ಲ ಅಂತೀರಿ. ಪಾಪ ಬಾಣಂತಿಯರ ಸಾವು ಆದಾಗ ಪಶ್ಚಾತಾಪ ಪಟ್ರಾ? ಏನು ಆಗಿಯೇ ಇಲ್ಲ ಅನ್ನೋ ರೀತಿ ಓಡಾಡಿಕೊಂಡಿದ್ದಾರೆ, ಬರೀ ವೀರಾವೇಶದ ಮಾತುಗಳಷ್ಟೇ ಇವರದ್ದು ಎಂದು ಕುಟುಕಿದ್ದಾರೆ.