ಬಳ್ಳಾರಿ: ಅದು ಕಾಯ್ದಿಟ್ಟ ಮೀಸಲು ಅರಣ್ಯ ಪ್ರದೇಶ. ಹೀಗಾಗಿ ಅಲ್ಲಿ ಏನೇ ಮಾಡಿದರೂ ಅರಣ್ಯ ಇಲಾಖೆಯ ಅನುಮತಿ ಕಡ್ಡಾಯವಾಗಿ ಬೇಕೇ ಬೇಕು. ಆದರೆ ವನ್ಯ ಮೃಗಾಲಯದ ಅಧಿಕಾರಿಗಳು ಅರಣ್ಯ ಇಲಾಖೆಯ ಅನುಮತಿಯೇ ಪಡೆಯದೇ ಝೂ ವೊಂದು ನಿರ್ಮಿಸಿದ್ದಾರೆ.
ಅರಣ್ಯ ಇಲಾಖೆಯ ಅನುಮತಿ ಪಡೆಯದೇ ನೂರಾರು ಎಕರೆ ಪ್ರದೇಶದಲ್ಲಿ ನಿರ್ಮಿಸಿದ ಝೂ ವನ್ನು ಸ್ವಂತ ಅರಣ್ಯ ಇಲಾಖೆ ಸಚಿವರು ಮತ್ತು ಸಿಎಂ ಸಿದ್ದರಾಮಯ್ಯನವರೇ ಉದ್ಘಾಟನೆ ಮಾಡುತ್ತಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
Advertisement
Advertisement
ಇದು ಹೊಸಪೇಟೆ ತಾಲೂಕಿನ ಕಮಲಾಪುರ ಬಳಿಯಿರುವ ಅಟಲ್ ಬಿಹಾರಿ ವಾಜಪೇಯಿ ಝೂಲಾಜಿಕಲ್ ಪಾರ್ಕ್. ಕಾಯ್ದಿಟ್ಟ ಮೀಸಲು ಅರಣ್ಯ ಪ್ರದೇಶಕ್ಕೆ ಸೇರಿದ 149 ಹೆಕ್ಟೇರ್ ಭೂಮಿಯಲ್ಲಿಗ ಮೃಗಾಲಯ ನಿರ್ಮಿಸಿದ್ದಾರೆ. ಆದರೆ ಇದಕ್ಕೆ ಇದುವರೆಗೂ ಕೇಂದ್ರ ಅರಣ್ಯ ಇಲಾಖೆ ಅನುಮತಿ ದೊರೆತಿಲ್ಲ. ಆದರೂ ತರಾತುರಿಯಲ್ಲಿ ಇಂದು ಮುಖ್ಯಮಂತ್ರಿಗಳು ಮೃಗಾಲಯವನ್ನು ಉದ್ಘಾಟಿಸುತ್ತಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದ್ದು, ಪರಿಸರವಾದಿಗಳು ಕೋರ್ಟ್ ಮೆಟ್ಟಿಲೇರಿದ್ದಾರೆ.
Advertisement
ಈ ಸಂಬಂಧ ಹೈಕೋರ್ಟ್ ಸಹ 11 ಜನರಿಗೆ ನೋಟಿಸ್ ಜಾರಿ ಮಾಡಿದೆ. ಇದೇ ನವಂಬರ್ 16 ಕ್ಕೆ ವಿಚಾರಣೆ ನಡೆಸಲಿದೆ. ಆದರೆ ಇದ್ಯಾವುದಕ್ಕೂ ಕಿಮ್ಮತ್ತು ನೀಡದೆ ಸ್ವತಃ ಅರಣ್ಯ ಸಚಿವರು ಉದ್ಘಾಟನೆ ಉಸ್ತುವಾರಿ ವಹಿಸಿದ್ದಾರೆ. ಕಮಲಾಪುರ ಝೂಗೆ ಅರಣ್ಯ ಇಲಾಖೆ ಅನುಮತಿ ಸಿಕ್ಕಿಲ್ಲ ಅನ್ನೋದನ್ನು ಮೃಗಾಲಯದ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ.