ಮುಂಬೈ: 2019ರಲ್ಲಿ ಅಧಿಕಾರಕ್ಕೆ ಬಂದ ಉದ್ಧವ್ ಠಾಕ್ರೆ ಸರ್ಕಾರ ಉರುಳಿಸಲು ಶಪಥ ಮಾಡಿದ್ದ ಬಿಜೆಪಿ ನಾನಾ ತೊಂದರೆ ಕೊಟ್ಟಿತ್ತು. ಆದರೆ ಈ ಸರ್ಕಾರಕ್ಕೆ ನಾವು ತೊಂದರೆ ಕೊಡುವುದಿಲ್ಲ ಎಂದು ಶಿವಸೇನಾ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.
ನಾನು ಈ ಸರ್ಕಾರವನ್ನು ಅಭಿನಂದಿಸುತ್ತೇನೆ. ಉದ್ಧವ್ ಠಾಕ್ರೆ ಸರ್ಕಾರ ಬಂದಾಗ ಮೊದಲಿನಿಂದಲೂ ಅವರಿಗೆ ತೊಂದರೆ ಕೊಡಲಾಗುತ್ತಿತ್ತು. ಆದರೆ ನಾವು ಹಾಗೆ ಮಾಡುವುದಿಲ್ಲ. ನಾವು ಈ ಸರ್ಕಾರಕ್ಕೆ ತೊಂದರೆ ಕೊಡುವುದಿಲ್ಲ. ಸರ್ಕಾರ ಜನಪರ ಕೆಲಸ ಮಾಡಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಟ್ವಿಟ್ಟರ್ ಪ್ರೊಫೈಲ್ ಚೇಂಜ್ ಮಾಡಿದ ಶಿಂಧೆ – ಬಾಳ್ ಠಾಕ್ರೆ ಫೋಟೋ ಜೊತೆಗೆ ಕೊಟ್ಟ ಸಂದೇಶವೇನು?
Advertisement
Advertisement
ನಮ್ಮ ಸಂಘಟನೆ ದುರ್ಬಲಗೊಂಡಿದೆ ಎಂದು ನನಗನಿಸುವುದಿಲ್ಲ. ಯಾರೂ ಅಸಮಾಧಾನಗೊಂಡಿಲ್ಲ ಎಂದು ಮೈತ್ರಿಕೂಟ ಪತನದ ಕುರಿತು ಪ್ರತಿಕ್ರಿಯಿಸಿದ್ದಾರೆ.
Advertisement
ಇಡಿ ವಿಚಾರಣೆ ಕುರಿತು ಮಾತನಾಡಿದ ಅವರು, ಇದು ಸಂಪೂರ್ಣ ರಾಜಕೀಯ ಎಂಬುದು ಎಲ್ಲರಿಗೂ ಗೊತ್ತು. ಕೇಂದ್ರೀಯ ಸಂಸ್ಥೆ ನನ್ನನ್ನು ಕರೆಸಿದೆ. ನಾನು ನಾಗರಿಕ ಮತ್ತು ಸಂಸದನೂ ಆಗಿದ್ದೇನೆ. ಹಾಗಾಗಿ ನಾನು ಇಡಿ ವಿಚಾರಣೆಗೆ ಹೋಗುತ್ತೇನೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ನೂತನ ಸಿಎಂ ಏಕನಾಥ್ ಶಿಂಧೆ, ಡಿಸಿಎಂ ದೇವೇಂದ್ರ ಫಡ್ನವೀಸ್‍ಗೆ ಉದ್ಧವ್ ಠಾಕ್ರೆ ವಿಶ್
Advertisement
ಶಿವಸೇನಾ ಪಕ್ಷದ ಶಿಂಧೆ ಬಣ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದೆ. ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿದ್ದು, ದೇವೇಂದ್ರ ಫಡ್ನವೀಸ್ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.