Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ: ನಾರಾ ಲೋಕೇಶ್‌ಗೆ ಡಿಕೆಶಿ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ: ನಾರಾ ಲೋಕೇಶ್‌ಗೆ ಡಿಕೆಶಿ ತಿರುಗೇಟು

Bengaluru City

ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ: ನಾರಾ ಲೋಕೇಶ್‌ಗೆ ಡಿಕೆಶಿ ತಿರುಗೇಟು

Public TV
Last updated: October 15, 2025 4:07 pm
Public TV
Share
5 Min Read
DK Shivakumar 1
SHARE

– ಬೆಂಗಳೂರಿಗೆ ಸರಿಸಮನಾದ ಮತ್ತೊಂದು ನಗರ ದೇಶದಲ್ಲಿಲ್ಲ ಎಂದ ಡಿಸಿಎಂ

ಬೆಂಗಳೂರು: ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್‌ಗೆ (Nara Lokesh) ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ತಿರುಗೇಟು ನೀಡಿದ್ದಾರೆ.

ಬೆಂಗಳೂರಿನ (Bengaluru) ವಿಚಾರವಾಗಿ ಆಂಧ್ರ ಪ್ರದೇಶ ಐಟಿ ಸಚಿವ ನಾರಾ ಲೋಕೇಶ್ ಅವರ ಹೇಳಿಕೆ ಬಗ್ಗೆ ವಿಧಾನಸೌಧದದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾರಾ ಲೋಕೇಶ್ ಆಗಲಿ, ಬೇರೆಯವರಾಗಲಿ, ಯಾರ ಹೇಳಿಕೆಗೂ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಬೆಂಗಳೂರಿನಲ್ಲಿ 25 ಲಕ್ಷ ಐಟಿ ವೃತ್ತಿಪರರು, 2 ಲಕ್ಷ ವಿದೇಶಿಗರು ಕೆಲಸ ಮಾಡುತ್ತಿದ್ದಾರೆ. ದೇಶದ ಪ್ರಗತಿಯಲ್ಲಿ ಬೆಂಗಳೂರಿನ ಕೊಡುಗೆ ಅಪಾರವಾಗಿದೆ. ಕೇಂದ್ರ ಸರ್ಕಾರಕ್ಕೆ ಸುಮಾರು 40% ತೆರಿಗೆ ಆದಾಯ ಇಲ್ಲಿಂದಲೇ ಹೋಗುತ್ತಿದೆ. ಅವರು ತಮ್ಮ ಬಗ್ಗೆ ಮಾರ್ಕೆಟಿಂಗ್ ಮಾಡಿಕೊಳ್ಳಲು ಮಾತನಾಡುತ್ತಾರೆ. ಅವರು ಏನಾದರೂ ಮಾಡಿಕೊಳ್ಳಲಿ. ಅವರಿಗೆ ಕೇಂದ್ರ ಸರ್ಕಾರವೂ ಸಹಾಯ ಮಾಡಲಿ. ಆದರೆ ಬೆಂಗಳೂರಿಗೆ ಸರಿಸಮನಾಗಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಮೂಲಸೌಕರ್ಯ ಕೆಟ್ಟದಾಗಿದೆ, ಪವರ್‌ ಕಟ್‌ ಸಮಸ್ಯೆಯಿದೆ: ಆಂಧ್ರ ಐಟಿ ಸಚಿವ

nara lokesh

ಎಷ್ಟು ವಿದೇಶಿ ನಾಯಕರು ನನ್ನನ್ನು ಸಂಪರ್ಕಿಸುತ್ತಿದ್ದಾರೆ ಎಂದು ನಮಗೆ ಗೊತ್ತಿದೆ. ನಾನು ಐಟಿ ಸಚಿವರು, ಬೃಹತ್ ಕೈಗಾರಿಕೆ ಸಚಿವರು ಕೂತು ಚರ್ಚೆ ಮಾಡುತ್ತೇವೆ. ವಿದೇಶಿ ಕಂಪನಿಗಳು ಇಷ್ಟು ದಿನ ಬೆಂಗಳೂರಿನಲ್ಲಿ ಬಾಡಿಗೆ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದವು. ಅಮೆರಿಕದಲ್ಲಿನ ಬೆಳವಣಿಗೆ ನಂತರ ಈಗ ಅವರು ಸ್ವಂತ ಜಾಗ ಖರೀದಿಗೆ ಮುಂದಾಗುತ್ತಿದ್ದಾರೆ. ತಮ್ಮದೇ ಸ್ವಂತ ಕ್ಯಾಂಪಸ್ ಹೊಂದಲು ಮುಂದಾಗಿದ್ದಾರೆ, ಇದು ಬೆಂಗಳೂರಿನ ಶಕ್ತಿ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರು | ಆರೋಗ್ಯ ಸಮಸ್ಯೆ ಮುಚ್ಚಿಟ್ಟು ಮದುವೆಯಾದ ಪತ್ನಿಗೆ ಇಂಜೆಕ್ಷನ್‌ ಕೊಟ್ಟು ಕೊಂದ ಕಿಲ್ಲರ್‌ ಡಾಕ್ಟರ್‌

ಬೆಂಗಳೂರಿನ ಮೂಲಸೌಕರ್ಯಗಳ ಬಗ್ಗೆ ಕಿರಣ್ ಮಜುಂದಾರ್ ಷಾ ಅವರು ಟ್ವೀಟ್ ಮೂಲಕ ಟೀಕೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಅವರು ಟ್ವೀಟ್ ಮಾಡುವ ಮೂಲಕ ಅವರಿಗೆ ನೆರವಾಗಿರುವ ದೇಶ ಹಾಗೂ ರಾಜ್ಯಕ್ಕೆ ಧಕ್ಕೆ ತರುತ್ತಿದ್ದಾರೆ. ಅವರ ಟೀಕೆ ತಮಗೆ ತಾವೇ ಹಾಗೂ ಈ ನಗರಕ್ಕೆ ದ್ರೋಹ ಬಗೆದುಕೊಂಡಂತೆ. ಕಳೆದ 25 ವರ್ಷಗಳಿಂದ ಅವರು ಎಲ್ಲಿದ್ದರು? ಅವರ ಬೆಳವಣಿಗೆಯಲ್ಲಿ ಹೆಚ್ಚಿನ ಕೊಡುಗೆ ನೀಡಿರುವುದು ಬೆಂಗಳೂರು. ಬೆಂಗಳೂರು ಲಕ್ಷಾಂತರ ಮಂದಿಗೆ ಉದ್ಯೋಗ ನೀಡಿ, ಉದ್ಯಮಿಗಳನ್ನು ದೊಡ್ಡ ಮಟ್ಟಕ್ಕೆ ಬೆಳೆಸಿದೆ. ಟೀಕಿಸುವವರಿಗೆ ಸರ್ಕಾರಗಳು ಎಷ್ಟು ಜಾಗ ಕೊಟ್ಟಿದೆ, ಎಷ್ಟು ನೆರವು ನೀಡಿದೆ ಎಂಬುದನ್ನು ಸ್ಮರಿಸಬೇಕು ಎಂದು ಕಿಡಿಕಾರಿದರು. ಇದನ್ನೂ ಓದಿ: ಶೀಘ್ರದಲ್ಲೇ ಡಿಂಪಲ್ ಕ್ವೀನ್‌ ಮದುವೆ – ಸುಳಿವು ಕೊಟ್ಟ ರಚಿತಾ ರಾಮ್‌

ರಸ್ತೆಗುಂಡಿ ಮುಚ್ಚುವ ಬಗ್ಗೆ ಮಾತನಾಡಿ, ನಾವು ನಮ್ಮ ಕೈಯಲ್ಲಾದಷ್ಟು ಮಾಡುತ್ತಿದ್ದೇವೆ. ನಾವು ಮಹದೇವಪುರ ಹಾಗೂ ಕೆ.ಆರ್ ಪುರವನ್ನೇ ಪ್ರತ್ಯೇಕ ಪಾಲಿಕೆ ಮಾಡಿದ್ದು, ಇಲ್ಲೇ ಐಟಿ ಹಬ್ ಇವೆ. ಕೇವಲ 50 ವಾರ್ಡ್‌ಗಳನ್ನು ಹೊಂದಿರುವ ಈ ಪಾಲಿಕೆ ತನ್ನ ಆದಾಯವನ್ನು ತಾನೇ ಬಳಸಿಕೊಳ್ಳಬಹುದಾಗಿದೆ. ಬೇರೆ ಪ್ರದೇಶಗಳ ಜೊತೆ ಹಂಚಿಕೊಳ್ಳುವ ಪ್ರಮೇಯವಿಲ್ಲ. ಈ ಭಾಗದ ಜನಸಂಖ್ಯೆ, ಅವರ ಸಮಸ್ಯೆಗಳೇನು ಎಂದು ನಮಗೆ ಅರಿವಿದೆ. ಅವರಿಗೆ ನೆರವಾಗಬೇಕು ಎಂದು ನಾವು ಈ ಕ್ರಮ ಕೈಗೊಂಡಿದ್ದೇವೆ. ಐಟಿಯಿಂದ ಬರುವ ಒಂದೂವರೆ ಸಾವಿರ ಕೋಟಿ ಆದಾಯವನ್ನು ಈ ವಾರ್ಡ್‌ಗಳ ಅಭಿವೃದ್ಧಿಗೆ ಬಳಸಬಹುದಾಗಿದೆ. ಆ ಮೂಲಕ ಆ ಭಾಗದ ಅಭಿವೃದ್ಧಿಗೆ ನಾವು ಕ್ರಮ ಕೈಗೊಂಡಿದ್ದೇವೆ. ಇದಕ್ಕಾಗಿಯೇ ನಾವು ಜಿಬಿಎ ಮಾಡಿ ಆ ಮೂಲಕ ಬೆಂಗಳೂರಿನಲ್ಲಿ ಐದು ಪಾಲಿಕೆಗಳನ್ನು ರಚಿಸಿದ್ದೇವೆ. ಇನ್ನು ಎಲ್ಲಾ ಸಂಸ್ಥೆಗಳು ತಮ್ಮ ಸಿಎಎಸ್‌ಆರ್ ನಿಧಿಯನ್ನು ಏನು ಮಾಡುತ್ತಿವೆ ಎಂದು ಬಹಿರಂಗಪಡಿಸಲಿ ಎಂದರು. ಇದನ್ನೂ ಓದಿ: Bengaluru | ನೀರಿನ ಟ್ಯಾಂಕರ್ ಹರಿದು ಬಾಲಕಿ ಸಾವು

DK Shivakumar 4

ನಾನು ಯಾರನ್ನೂ ಪ್ರಶ್ನೆ ಮಾಡುವುದಿಲ್ಲ. ಎಲ್ಲರೂ ಸ್ವಲ್ಪ ತಾಳ್ಮೆಯಿಂದ ಇರಬೇಕು. ನಿಮಗೆ ಟ್ವೀಟ್ ಮಾಡಿ ನಮ್ಮನ್ನು ಬೆದರಿಸುವುದೇ ಮುಖ್ಯವಾದರೆ, ಅದು ಅವರಿಗೆ ಬಿಟ್ಟ ವಿಚಾರ. ನಮ್ಮದು ಪ್ರಗತಿಪರ ಸರ್ಕಾರ. ಪ್ರಧಾನಮಂತ್ರಿಗಳೇ ಬೆಂಗಳೂರನ್ನು ಜಾಗತಿಕ ನಗರ ಎಂದು ಹೇಳಿರುವಾಗ ಇವರು ಪ್ರಧಾನಮಂತ್ರಿ ಹೇಳಿಕೆಗೆ ತದ್ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ಇದು ಚೀನಾ ಇಲ್ಲ, ಪ್ರಜಾಪ್ರಭುತ್ವ ರಾಜ್ಯ. ಚೀನಾದಲ್ಲಿ ಅವರು ತಮಗೆ ಬೇಕಾದ ರಸ್ತೆ ಕಿತ್ತು, ಬೇಕಾದ ಹಾಗೆ ಮಾಡಬಹುದು. ಆದರೆ ಕರ್ನಾಟಕದಲ್ಲಿ ಆ ರೀತಿ ಮಾಡಲು ಆಗುವುದಿಲ್ಲ. ರಸ್ತೆ ಅಗಲೀಕರಣಕ್ಕೆ ಅವರು ತಮ್ಮ ಜಾಗವನ್ನು ಬಿಟ್ಟುಕೊಡುವರೇ? ಯಾರೊಬ್ಬರೂ ನೀಡುವುದಿಲ್ಲ. ಎಲ್ಲದಕ್ಕೂ ತನ್ನದೇ ಆದ ಇತಿಮಿತಿಗಳಿರುತ್ತವೆ. ಅವರು ಎಲ್ಲಿ ಬೆಳೆದಿದ್ದಾರೆ, ಎಲ್ಲಿ ಕೆಲಸ ಮಾಡಿದ್ದಾರೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಅವರು ತಾವು ಬೆಳೆದು ಬಂದ ದಾರಿಯನ್ನು ಮರೆಯಬಾರದು. ಅವರ ಮೂಲ ಹಾಗೂ ಬೆಳೆದು ಬಂದ ಹಾದಿ ಬೆಂಗಳೂರು ಎಂದು ತಿಳಿಸಿದರು. ಇದನ್ನೂ ಓದಿ: Bihar Elections | 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಜೆಡಿಯು

ಗೂಗಲ್ ಎಐ ಹಬ್ ಆಂಧ್ರ ಪ್ರದೇಶ ಪಾಲಾಗಿರುವ ಕುರಿತು ಪ್ರತಿಕ್ರಿಯಿಸಿ, ಆಂಧ್ರ ಪ್ರದೇಶಕ್ಕೆ ಹೋಗುವವರಿಗೆ ನಾವು ಬೇಡ ಎನ್ನಲು ಸಾಧ್ಯವೇ? ಅವರು ಹೆಚ್ಚಿನ ವಿನಾಯಿತಿ ಕೊಡುತ್ತಾರೆ ಎಂದು ಹೋಗುವುದಾದರೆ ಹೋಗಲಿ. ಅವರಿಗೂ ಎಲ್ಲ ಕಡೆ ನೋಡಿ ಅನುಭವವಾಗಲಿ ಎಂದು ತಿಳಿಸಿದರು. ಇದನ್ನೂ ಓದಿ: ಹಾಸನಾಂಬೆ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ನಮ್ಮ ರಾಜ್ಯಕ್ಕೆ 1 ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಕೈತಪ್ಪಿದೆ ಎಂದು ಕೇಳಿದಾಗ, ವಿದೇಶಿ ಪ್ರತಿನಿಧಿಗಳು ನನ್ನನ್ನು, ಪ್ರಿಯಾಂಕ್ ಖರ್ಗೆ, ಎಂ.ಬಿ. ಪಾಟೀಲ್ ಅವರನ್ನು ನಿರಂತರವಾಗಿ ಭೇಟಿ ಮಾಡುತ್ತಲೇ ಇದ್ದಾರೆ. 12ರಂದು ಸಿಂಗಾಪುರದ ಉದ್ಯಮಿಗಳ ನಿಯೋಗ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅನೇಕ ಖಾಸಗಿ ವಿವಿಗಳು, ಸಂಸ್ಥೆಗಳು ಬೆಂಗಳೂರಿನಲ್ಲಿ ತಮ್ಮ ಸಂಸ್ಥೆ ಆರಂಭಿಸಲು ಬರುತ್ತಿದ್ದಾರೆ. ಬೆಂಗಳೂರನ್ನು ಯಾರೂ ಬಿಟ್ಟು ಹೋಗುವುದಿಲ್ಲ. ನಾವು ದೊಡ್ಡ ದೊಡ್ಡ ವಿನಾಯಿತಿ ನೀಡುತ್ತೇವೆ ಎಂದು ಜಾಹೀರಾತು ಹಾಕಿ ನಾವು ಯಾರನ್ನೂ ಕರೆಯುವ ಅಗತ್ಯವಿಲ್ಲ. ಬೆಂಗಳೂರಿನಲ್ಲಿರುವ ಎಲ್ಲಾ ಸೌಲಭ್ಯಗಳು ಹೂಡಿಕೆದಾರರನ್ನು ಆಕರ್ಷಿಸುತ್ತಿದೆ ಎಂದರು. ಇದನ್ನೂ ಓದಿ: ತಮಿಳುನಾಡಿನಲ್ಲಿ ಹಿಂದಿ ಹೋರ್ಡಿಂಗ್ಸ್‌, ಸಿನಿಮಾ, ಹಾಡುಗಳ ನಿಷೇಧ?

ಕಾಂಗ್ರೆಸ್ ಶಾಸಕರಿಗೆ ಅನುದಾನ ನೀಡಿದ್ದು, ನಮಗೆ ನೀಡಿಲ್ಲ ಎಂದು ಜೆಡಿಎಸ್ ಶಾಸಕರು ನ್ಯಾಯಾಲಯದಲ್ಲಿ ಅರ್ಜಿ ಹಾಕಿರುವ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರ ನೀಡಲಿದ್ದಾರೆ. ಯಾರಿಗೆ ಎಷ್ಟು ಅನುದಾನ ನೀಡಬೇಕು ಎಂದು ಸಿಎಂ ತೀರ್ಮಾನ ಮಾಡಿದ್ದಾರೆ. ಈ ವಿಚಾರದಲ್ಲಿ ನಮಗೆ ಪಾಠ ಹೇಳಿಕೊಟ್ಟವರು ಬಿಜೆಪಿಯವರಲ್ಲವೇ? ನಾವು ಅವರಷ್ಟು ಕ್ರೂರಿಗಳಲ್ಲ. ನಾವು ಹೃದಯ ಶ್ರೀಮಂತಿಕೆ ಪ್ರದರ್ಶಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ಹೃದಯಸ್ತಂಭನದಿಂದ ನಿಧನ

ನೀವು ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಲಯದ ಮೆಟ್ಟಿಲು ಹತ್ತಿದಂತೆ ಅವರು ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ, ಅವರು ಅರ್ಜಿ ಹಾಕಿ ಕೇಳಲಿ. ಅದರಲ್ಲಿ ತಪ್ಪೇನಿಲ್ಲ. ನಾವು ಕೇಂದ್ರ ಸರ್ಕಾರದ ಬಳಿ ನಮ್ಮ ಹಕ್ಕು ಕೇಳುತ್ತಿದ್ದೇವೆ. ಬೆಂಗಳೂರಿಗೆ ಅನುದಾನ ನೀಡುತ್ತಿಲ್ಲ ಎಂದು ಬಿಜೆಪಿ ಶಾಸಕರು ಹಾಗೂ ಸಂಸದರು ಕೇಂದ್ರ ಸರ್ಕಾರದ ಮೇಲೆ ಇದೇ ರೀತಿ ನ್ಯಾಯಾಲಯದಲ್ಲಿ ಅರ್ಜಿ ಹಾಕಲಿ. ಅವರು ಅರ್ಜಿಯನ್ನೇ ಕೊಟ್ಟಿಲ್ಲ, ಇನ್ನು ಕೋರ್ಟ್ ಮೆಟ್ಟಿಲೇರುತ್ತಾರಾ ಎಂದು ತಿಳಿಸಿದರು. ಇದನ್ನೂ ಓದಿ: ಬೀದರ್ | 45 ಲಕ್ಷ ಮೌಲ್ಯದ ಮಾದಕ ವಸ್ತು ಸೀಜ್ – ಇಬ್ಬರು ಅರೆಸ್ಟ್

TAGGED:bengalurucongressDK Shivakumarnara lokeshಕಾಂಗ್ರೆಸ್ಡಿಕೆ ಶಿವಕುಮಾರ್ನಾರಾ ಲೋಕೇಶ್‌ಬೆಂಗಳೂರು
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Sunilkumar
Bagalkot

ಅಹಿಂದಕ್ಕೆ ಅನ್ಯಾಯ ಎಸಗಿದ ಕಾಂಗ್ರೆಸ್‌ ಸರ್ಕಾರವನ್ನು ತಿರಸ್ಕರಿಸಿ: ಸುನಿಲ್‌ ಕುಮಾರ್‌

Public TV
By Public TV
7 minutes ago
Shreyas Iyer
Cricket

IPL 2026 | ಜಿಟಿ ವಿರುದ್ಧ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ದಂಡ

Public TV
By Public TV
18 minutes ago
Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
27 minutes ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
36 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
2 hours ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?