ದೇವಸ್ಥಾನದ ಹಣ ಕದಿಯುವುದಕ್ಕೂ ಮುನ್ನ ದೇವಿ ವಿಗ್ರಹಕ್ಕೆ ನಮಸ್ಕರಿಸಿದ ಅರೆನಗ್ನ ಕಳ್ಳ

Public TV
1 Min Read
thief mp

ಭೋಪಾಲ್: ದೇವಸ್ಥಾನದಲ್ಲಿದ್ದ ಹುಂಡಿ ಹಣವನ್ನು ಕದಿಯಲು ಬಂದಿದ್ದ ಕಳ್ಳನೊಬ್ಬ ಅಪರಾಧ ಮಾಡುವುದಕ್ಕೂ ಮುನ್ನ ಗರ್ಭಗುಡಿಯನ್ನು ಪ್ರವೇಶಿಸಿ ದೇವರಿಗೆ ನಮಸ್ಕರಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮಧ್ಯಪ್ರದೇಶದ ಜಬಲ್‍ಪುರದ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಕಳ್ಳನ ಪ್ರತಿಯೊಂದು ಕೈಚಳಕವು ದೇವಸ್ಥಾನದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

CRIME 2

ಶರ್ಟ್ ಧರಿಸದೇ ಮುಖಕ್ಕೆ ಮುಸುಕನ್ನು ಹಾಕಿಕೊಂಡಿದ್ದ ಕಳ್ಳನೊಬ್ಬ ಕಳ್ಳತನ ಮಾಡುವುದಕ್ಕೂ ಮುನ್ನ ಗರ್ಭಗುಡಿಯನ್ನು ಪ್ರವೇಶಿಸಿ ದೇವತೆಯ ಮುಂದೆ ನಿಂತು ನಮಸ್ಕರಿಸಿದ್ದಾನೆ. ಅಷ್ಟೇ ಅಲ್ಲದೇ ಆ ದೇವಿಯ ಪ್ರತಿಮೆಯನ್ನು ನೋಡಿ ಕೆಲಕಾಲ ಆಶ್ಚರ್ಯಚಕಿತನಾಗಿ ಅಲ್ಲೇ ನಿಂತಿದ್ದಾನೆ. ಇದಾದ ಬಳಿಕ ದೇವಾಲಯದಲ್ಲಿರುವ ನಗದು ಸೇರಿದಂತೆ ಬೆಳ್ಳಿ, ಚಿನ್ನವನ್ನು ಕದ್ದಿದ್ದಾನೆ. ಇದನ್ನೂ ಓದಿ: ಆ. 15ರವರೆಗೆ ಟಿಕೆಟ್ ಬುಕ್ ಆಗಿದ್ದವರಿಗೆ ಮಾತ್ರ ತಿರುಪತಿ ದರ್ಶನ

ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕಳ್ಳನ ಕಾರ್ಯ ನೋಡಿ ನೆಟ್ಟಿಗರು ಹುಬ್ಬೇರಿಸಿದ್ದಾರೆ. ಈ ಘಟನೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಸೀದಿ, ಮದರಸಾದಲ್ಲಿ ಸಂವಿಧಾನ ಓದುವ ಅಭಿಯಾನ ಆರಂಭ!

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *