ಕಾರವಾರ : ಚಿನ್ನದಂಗಡಿಯಲ್ಲಿ ಗ್ರಾಹಕನ ಸೋಗಿನಲ್ಲಿ ಆಭರಣ ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸಿದ ಪೊಲೀಸರು 4ಲಕ್ಷ ಮೌಲ್ಯದ ಸ್ವತ್ತುಗಳು ವಶಕ್ಕೆ ಪಡೆಯಲಾಗಿದೆ.
ಸೆಪ್ಟೆಂಬರ್ 17 ರಂದು ಶಿರಸಿ ನಗರದ ರತ್ನದೀಪ ಜ್ಯುವೆಲರಿ ಶಾಪ್ ನಲ್ಲಿ ಗ್ರಾಹಕನ ಸೋಗಿನಲ್ಲಿ ಬಂದು ಕಳ್ಳತನ ಮಾಡಿದ್ದ ಪ್ರಕರಣವನ್ನು ಶಿರಸಿ ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಿಜೆಪಿಯನ್ನು ತುಕ್ಡೆ ತುಕ್ಡೆ ಮಾಡುತ್ತೇನೆ: ಕನ್ಹಯ್ಯ ಕುಮಾರ್
ಬೆಳವಾಗಿಯ ನಾವೇಕರ ಗಲ್ಲಿಯ ನಿಲೇಶ್ ರೇವಣಕರ (32) ಹಾಗೂ ಕಾರವಾರದ ಹಬ್ಬುವಾಡದ ರಾಘವೇಂದ್ರ ದೈವಜ್ಞ (35) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿ ನಿಲೇಶ್ ರತ್ನದೀಪ ಜ್ಯುವೆಲರ್ಸನಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು, ಚಿನ್ನದ ಸರವನ್ನು ಕಸಿದುಕೊಂಡು ಕಾರಿನಲ್ಲಿ ಪರಾರಿಯಾಗಿದ್ದ. ಇದು ಅಂಗಡಿಯ ಸಿಸಿಟಿಯಲ್ಲಿ ದಾಖಲಾಗಿತ್ತು. ನಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.
ಬಂಧಿತ ಆರೋಪಿಗಳಿಂದ ಪೊಲೀಸರು 22.28 ಗ್ರಾಂ ಬಂಗಾರದ ತೂಕದ ಚಿನ್ನದ ಎರಡು ಸರ ಹಾಗೂ ಮಾರುತಿ ಸ್ವಿಪ್ಟ್ ಕಾರು ಸೇರಿ ಒಟ್ಟೂ 4ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಿರಿಯ ಅಧಿಕಾರಿಗಳ ಮಾರ್ಗದರ್ಶನಲ್ಲಿ ಪಿಎಸ್‍ಐ ರಾಜಕುಮಾರ, ಪಿಎಸ್‍ಐ ಮೋಹಿನಿ ಶೆಟ್ಟಿ ಹಾಗೂ ಸಿಬ್ಬಂದಿಗಳಾದ ಚೇತನ್ ಕುಮಾರ್, ಕೊಟೇಶ ಮುಂತಾದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.