ಮುಂಬೈ: ಕಳ್ಳತನಕ್ಕೆ ಬಂದ ಮನೆಯಲ್ಲಿ ಕಳವಿಗೆ ವಸ್ತು ಸಿಗದಿದ್ದಕ್ಕೆ ಮನೆಯೊಡತಿಗೆ ಕಿಸ್ ಕೊಟ್ಟು ಕಳ್ಳ ಪರಾರಿಯಾದ ವಿಚಿತ್ರ ಘಟನೆ ಮುಂಬೈನಲ್ಲಿ (Mumbai) ಮಲಾಡ್ (Malad) ಪ್ರದೇಶದಲ್ಲಿ ನಡೆದಿದೆ.
ಜ.03 ರಂದು ಈ ಘಟನೆ ನಡೆದಿದೆ. ಮಹಿಳೆಯೊಬ್ಬರು ಮನೆಯಲ್ಲಿ ಒಬ್ಬರೇ ಇರುವಾಗ ಆರೋಪಿ ಒಳನುಗ್ಗಿದ್ದಾನೆ. ಬಳಿಕ ಒಳಗಿನಿಂದ ಬಾಗಿಲನ್ನು ಲಾಕ್ ಮಾಡಿದ್ದಾನೆ. ಮನೆಯಲ್ಲಿದ್ದ ಮಹಿಳೆಯನ್ನು ನೋಡಿದ್ದೇ ತಡ ಆರೋಪಿ ಆಕೆಯ ಬಾಯಿಯನ್ನು ಮುಚ್ಚಿ, ಮನೆಯಲ್ಲಿರುವ ಮೊಬೈಲ್ ಫೋನ್, ಎಟಿಎಂ ಕಾರ್ಡ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ನೀಡುವಂತೆ ಕೇಳಿಕೊಂಡಿದ್ದಾನೆ. ಆಗ ಮಹಿಳೆ ನನ್ನ ಬಳಿ ಯಾವುದೇ ಬೆಲೆಬಾಳುವ ವಸ್ತುಗಳು ಇಲ್ಲ ಎಂದು ತಿಳಿಸಿದ್ದಾಳೆ. ಈ ವೇಳೆ ಇದನ್ನು ಕೇಳಿಸಿಕೊಂಡ ಆರೋಪಿ ಆಕೆಗೆ ಮುತ್ತು ಕೊಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.ಇದನ್ನೂ ಓದಿ: 60% ಕಮಿಷನ್ ಆರೋಪಕ್ಕೆ ಗುತ್ತಿಗೆದಾರರ ಬಾಕಿ ಹಣದ ಪಟ್ಟಿ ರಿಲೀಸ್ ಮಾಡಿದ ಹೆಚ್‌ಡಿಕೆ
Advertisement
Advertisement
ಈ ಕುರಿತು ಮಹಿಳೆ ಕುರಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
Advertisement
ಪೊಲೀಸ್ ಅಧಿಕಾರಿಗಳ ಮಾಹಿತಿ ಪ್ರಕಾರ, ಇದಕ್ಕೂ ಮೊದಲು ಆರೋಪಿಯ ಮೇಲೆ ಯಾವುದೇ ರೀತಿಯ ಕ್ರಿಮಿನಲ್ ದಾಖಲೆ ಇಲ್ಲ. ಸದ್ಯ ಅದೇ ಕಾಲೊನಿಯಲ್ಲಿ ಕುಟುಂಬಸ್ಥರೊಂದಿಗೆ ವಾಸಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಸರ್ಕಾರ ಕೊಟ್ಟ ಹಣ ಖರ್ಚು ಮಾಡದ ಅಧಿಕಾರಿಗಳ ವಿರುದ್ಧ ಸಿಎಂ ಕೆಂಡಾಮಂಡಲ