ವಿಜಯಪುರ: ಜೆಡಿಎಸ್ ಆಯೋಜಿಸಿರುವ ಉತ್ತರ ಕರ್ನಾಟಕ ಕನ್ನಡಿಗರ ಸ್ವಾಭಿಮಾನ ಯಾತ್ರೆ ಸಮಾವೇಶದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಜೆಡಿಎಸ್ ಕಾರ್ಯಕರ್ತನ ಕಿಸೆ ಕತ್ತರಿಸಿ ಹಣ ಕದಿಯಲು ಯತ್ನಿಸಿದ ಕಳ್ಳನನ್ನು ಸಾರ್ವಜನಿಕರು ಹಿಡಿದು ಥಳಿಸಿದ್ದಾರೆ.
ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆಯುತ್ತಿದ್ದ ಯಾತ್ರೆಯ ಸಮಾವೇಶದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಇದನ್ನೇ ಅವಕಾಶವಾಗಿ ಬಳಸಿಕೊಂಡಿರುವ ಕಳ್ಳನೊಬ್ಬ ಸಾರ್ವಜನಿಕರೊಬ್ಬರ ಜೇಬಿನಲ್ಲಿದ್ದ 50 ಸಾವಿರ ರೂ. ಹಣವನ್ನು ಕದಿಯಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಕಳ್ಳನ ಕೈಚಳಕವನ್ನು ಗಮನಿಸಿದ ಸಾರ್ವಜನಿಕರು ಆತನನ್ನು ಹಿಡಿದು ಥಳಿಸಿದ್ದಾರೆ.
ತಕ್ಷಣ ಸ್ಥಳದಲ್ಲಿದ್ದ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.