ರಾಮನಗರ: ಕುಮಾರಸ್ವಾಮಿ (H.D.Kumaraswamy) ಮಾಡಿರುವ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಎಂಬ ಡಿಕೆಶಿ (D.K.Shivakumar) ಹೇಳಿಕೆಗೆ ಮಾಜಿ ಸಿಎಂ ಹೆಚ್‌ಡಿಕೆ ತಿರುಗೇಟು ನೀಡಿದ್ದಾರೆ.
ರಾಮನಗರದ (Ramanagara) ದಾಸೇಗೌಡನದೊಡ್ಡಿಯಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಈಗಾಗಲೇ ಕೊಳ್ಳೆ ಹೊಡೆದಾಗಿದೆ. ಅವರ ಜೀವನ ಏನು ಅಂತ ಗೊತ್ತಿದೆ. ದೇಶದ ವ್ಯವಸ್ಥೆಯಲ್ಲಿ ಕಳ್ಳರು ಒಂದೇ, ಸುಳ್ಳರು ಒಂದೇ ಆಗಿದ್ದಾರೆ. ಆದರೆ ಭಗವಂತ ಇದ್ದಾನೆ. ಅಂತಿಮವಾಗಿ ಎಲ್ಲಾ ತೀರ್ಮಾನ ಮಾಡ್ತಾನೆ. ಈ ಸಮಾಜದಲ್ಲಿ ಹಣದ ಮದ ಇದ್ದವರು ಎಲ್ಲವನ್ನೂ ಕೊಂಡುಕೊಳ್ತೀನಿ ಅಂದುಕೊಂಡಿದ್ದಾರೆ. ಎಲ್ಲದಕ್ಕೂ ಒಂದು ಅಂತಿಮ ಇದ್ದೇ ಇದೆ ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: Exclusive: ನಾನು ಬ್ಲೂ ಫಿಲಂ ತೋರಿಸಿದ್ರೆ ರಾಜಕೀಯ ನಿವೃತ್ತಿ: ಡಿಕೆಶಿ
ತಮ್ಮ ವಿರುದ್ಧ ಮತ್ತೆ ಪೋಸ್ಟರ್ ಅಂಟಿಸಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಅಂಟಿಸಿಕೊಳ್ಳಲಿ ಯಾರು ಬೇಡ ಅಂತಾರೆ. ನನಗೆ ಯಾರು ಏನೂ ಮಾಡೋಕಾಗಲ್ಲ. ಸರ್ಕಾರದ ತಪ್ಪುಗಳನ್ನ ಏಕಾಂಗಿಯಾಗಿ ಪ್ರಶ್ನೆ ಮಾಡೋದು ಕುಮಾರಸ್ವಾಮಿ ಒಬ್ಬನೆ. ಎಲ್ಲರೂ ಮೌನಕ್ಕೆ ಶರಣಾಗಿದ್ದಾಗ ಅಕ್ರಮ ಸಂಪತ್ತು, ವರ್ಗಾವಣೆ ದಂಧೆ ಬಗ್ಗೆ ಧ್ವನಿ ಎತ್ತಿದ್ದು ನಾನು. ನಾನು ಇಲ್ಲಿವರೆಗೂ ಏನು ಹೇಳಿದ್ದೇನೋ ಸರ್ಕಾರ ಒಂದಕ್ಕೂ ಉತ್ತರ ಕೊಟ್ಟಿಲ್ಲ ಎಂದು ಕಿಡಿಕಾರಿದ್ದಾರೆ.
ರಾಜ್ಯಕ್ಕೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಆಗಮನ ಬಗ್ಗೆ ಮಾತನಾಡಿ, ಜನರ ಕಷ್ಟ-ಸುಖ ನೋಡಲು ಬರಲಿಲ್ಲ. ಈಗ ಜನರ ಹಣ ಲೂಟಿ ಮಾಡುವ ನಿಗಮ ಮಂಡಳಿ ನೇಮಕ ಮಾಡೋಕೆ ಬರ್ತಿದ್ದಾರಾ? ನಿಗಮ ಮಂಡಳಿ ರಚನೆ ಮಾಡಿ ಜನರ ಕಷ್ಟ ಕೇಳ್ತೀರಾ? ಅದ್ಯಾವುದೋ ಸಿಎಂ ಕ್ಷೇತ್ರದಲ್ಲಿ ಶಾಲಾ ಕಟ್ಟಡ ಕಟ್ಟಲು ದುಡ್ಡಿಲ್ಲ ಅಂತ ಸಿಎಸ್ಆರ್ ಫಂಡ್ ಕೇಳ್ತಿದ್ದೀರಾ? ಸಿಎಂ ಕ್ಷೇತ್ರದಲ್ಲಿ 2.5 ಲಕ್ಷಕ್ಕೆ ಯಾವ್ದೋ ಖಾಸಗಿ ಕಂಪನಿ ವಿರುದ್ಧ ಅರ್ಜಿ ಇಡ್ಕೊಂಡು ನಿಂತವ್ರೆ. ಸಿಎಂ ಮನೆ ನವೀಕರಣ ಮಾಡಲು ಕೋಟ್ಯಂತರ ಹಣ ಖರ್ಚು ಮಾಡ್ತೀರಿ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ಅಷ್ಟೇ ಸತ್ಯ: ಸವದತ್ತಿ ಶಾಸಕ