ಚಿಕ್ಕಬಳ್ಳಾಪುರ: ಪೊಲೀಸ್ ಮನೆಯ ಮೇಲೆ ಕಳ್ಳರು (Thieves) ದಾಳಿ ನಡೆಸಿದ್ದು, ತಡೆಯಲು ಬಂದ ಪೊಲೀಸ್ (Police) ಹಾಗೂ ಅವರ ಮಗನಿಗೆ ಶೂಟೌಟ್ ಮಾಡಿದ ಘಟನೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಗ್ರಾಮದ ಎಎಸ್‍ಐ ನಾರಾಯಣಸ್ವಾಮಿ ಮನೆ ಮೇಲೆ ಕಳ್ಳರು ದಾಳಿ ನಡೆಸಿದ್ದಾರೆ. ಹಣ ದೋಚಲು ಯತ್ನಿಸುತ್ತಿದ್ದ ಕಳ್ಳರನ್ನು ತಡೆಯಲು ನಾರಾಯಣಸ್ವಾಮಿ ಹಾಗೂ ಅವರ ಮಗ ಪ್ರಯತ್ನಿಸಿದ್ದಾರೆ. ಈ ವೇಳೆ ಕಳ್ಳರು ಶೂಟೌಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾರಾಯಣ್‍ಸ್ವಾಮಿ ಹಾಗೂ ಅವರ ಪುತ್ರ ಶರತ್ ಎಂಬವರಿಗೆ ಗುಂಡು ತಗುಲಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ವಿದೇಶಿ ತಳಿ, ಜಾರಕಿಹೊಳಿಯನ್ನು ಉಚ್ಛಾಟಿಸಿ: ಯತ್ನಾಳ್
Advertisement
Advertisement
ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ನಾರಾಯಣಸ್ವಾಮಿ ಎಎಸ್‍ಐ ಆಗಿ ಕೆಲಸ ಮಾಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿ ಪೇರೇಸಂದ್ರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನೂ ಗಂಭೀರವಾಗಿ ಗಾಯಗೊಂಡಿರುವ ಶರತ್‍ನನ್ನು ಹಾಗೂ ಎಎಸ್‌ಐ ನಾರಾಯಣ ಸ್ವಾಮಿ ಅವರನ್ನು ಚಿಕ್ಕಬಳ್ಳಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಬಿಜೆಪಿಗೆ ಹಿರೇಕೆರೂರಿನ ಮಾಜಿ ಶಾಸಕ ಯು.ಬಿ.ಬಣಕಾರ ಗುಡ್ ಬೈ