ದಾವಣಗೆರೆ: ನ್ಯಾಮತಿ ಎಸ್‍ಬಿಐ ಬ್ಯಾಂಕ್ (Bank) ಕಳುವಿಗೆ ಮೊದಲು ಕಳ್ಳರು ಪೂಜೆ ಮಾಡಿದ್ದ ದೇವಸ್ಥಾನದಲ್ಲಿ (Temple) ಈಗ ಹುಂಡಿ ಕಳ್ಳತನವಾಗಿದೆ.
ನ್ಯಾಮತಿ ಪಟ್ಟಣದ ಸುರಹೊನ್ನೇ ಬಳಿ ಇರುವ ಗಡಿ ಚೌಡಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಬೈಕ್‍ನಲ್ಲಿ ಮುಖಕ್ಕೆ ಮಾಸ್ಕ್ ಧರಿಸಿ ಬಂದ ಕಳ್ಳ ದೇವರ ಹುಂಡಿಯನ್ನು ಎತ್ತಿಕೊಂಡು ಪರಾರಿಯಾಗಿದ್ದಾನೆ. ಕಳ್ಳನ ಚಲನವಲನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ನ್ಯಾಮತಿ ಬ್ಯಾಂಕ್ ದರೋಡೆ ಪ್ರಕರಣ – ತಮಿಳುನಾಡಿನ ಪಾಳು ಬಾವಿಯಲ್ಲಿ ಚಿನ್ನಾಭರಣ ಇಟ್ಟಿದ್ದ ಗ್ಯಾಂಗ್!
ಇತ್ತೀಚೆಗೆ ನಡೆದಿದ್ದ ನ್ಯಾಮತಿ ಎಸ್‍ಬಿಐ ಬ್ಯಾಂಕ್‍ನ ಕಳ್ಳತನಕ್ಕೂ ಮುನ್ನ ಹಾಗೂ ಕಳ್ಳತನದ ಬಳಿಕ ಅರೋಪಿಗಳು ಇದೇ ದೇವಾಲಯದಲ್ಲಿ ಪೂಜೆ ನಡೆಸಿದ್ದರು. ಈಗ ಅದೇ ದೇವಸ್ಥಾನದ ಹುಂಡಿ ಕಳುವಾಗಿದ್ದು ಚರ್ಚೆಗೆ ಗ್ರಾಸವಾಗಿದೆ.
ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಈ ದರೋಡೆ ನಡೆದಿತ್ತು. ಬ್ಯಾಂಕ್ ಕಿಟಕಿಯ ಸರಳನ್ನು ಮುರಿದು, 12.96 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿಕೊಂಡು ಹೋಗುವಾಗ ಬ್ಯಾಂಕ್ ತುಂಬೆಲ್ಲಾ ಕಾರದ ಪುಡಿಯನ್ನು ಚೆಲ್ಲಿ ಎಸ್ಕೇಪ್ ಆಗಿದ್ದರು. ಈ ಎಲ್ಲಾ ಆರೋಪಿಗಳ ಬಂಧನವಾಗಿದ್ದು, ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಗ್ರಾಹಕರ ಸೋಗಿನಲ್ಲಿ ಬಂದು 1.13 ಕೋಟಿ ಮೌಲ್ಯದ ಚಿನ್ನಾಭರಣ ಕದ್ದೊಯ್ದ ಬುರ್ಖಾಧಾರಿ ಮಹಿಳೆಯರು!