ChitradurgaDistrictsKarnatakaLatestMain Post

ಮೊಬೈಲ್ ಕದಿಯಲು ರೋಗಿಯಾದ ಕಳ್ಳ – ಖದೀಮನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ಚಿತ್ರದುರ್ಗ: ರೋಗಿಯ ನೆಪದಲ್ಲಿ ಕಳ್ಳನೋರ್ವ ಆಸ್ಪತ್ರೆಗೆ ದಾಖಲಾಗಿ ಮೊಬೈಲ್ ಕದ್ದು ಎಸ್ಕೇಪ್ ಆಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ.

ರಾತ್ರಿ ವೇಳೆ ಹಿರಿಯೂರಿನ ಸರ್ಕಾರಿ ಆಸ್ಪತ್ರೆಗೆ ಅನಾರೋಗ್ಯದ ನೆಪದಲ್ಲಿ ದಾಖಲಾಗಿದ್ದ ಕಳ್ಳ ರೋಗಿಯಂತೆ ಬೆಡ್ ಮೇಲೆ ಮಲಗಿ ಪಕ್ಕದ ಬೆಡ್‍ನಲ್ಲಿದ್ದ ರೋಗಿಯ ಮೊಬೈಲ್ ಕದ್ದು ಪರಾರಿಯಾಗಿದ್ದಾನೆ. ಕಳ್ಳನ ಬೆಡ್ ಪಕ್ಕದಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಯೋಗೇಶ್  ಮಲಗಿದ್ದ ವೇಳೆ‌ ಬೆಳಗಿನ ಜಾವ ಮೊಬೈಲ್ ಎಗರಿಸಿ ಕಳ್ಳ ಎಸ್ಕೇಪ್ ಆಗಿದ್ದಾನೆ. ಆದರೆ ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.  ಇದನ್ನೂ ಓದಿ: ಮನೆಯಲ್ಲಿದ್ರೆ ಮಕ್ಕಳ ಸಂಖ್ಯೆ ಹೆಚ್ಚಾಗುತ್ತೆ ಅನ್ನೋ ಭಯವಿದೆ: ಸೈಫ್ ಆಲಿ ಖಾನ್

ಸರ್ಕಾರಿ ಆಸ್ಪತ್ರೆಯ ಚಿಕಿತ್ಸೆ ಹಾಗೂ ಸೌಲಭ್ಯಗಳ ಬಗ್ಗೆ ಮೂಗು ಮುರಿಯುತ್ತಿದ್ದ ರೋಗಿಗಳಿಗೆ ಇದೀಗ ಸರ್ಕಾರಿ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಶುರುವಾಗಿದೆ. ಕಳ್ಳನ ಕೈಚಳಕದಿಂದ ರೋಗಿಗಳಲ್ಲಿ ಭಾರೀ ಆತಂಕ ಮನೆ ಮಾಡಿದೆ. ಈ ಪ್ರಕರಣ ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ:  ವಿದ್ಯಾರ್ಥಿನಿಯರಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯವೆಸಗಲು ಶಿಕ್ಷಕ ಯತ್ನ

Leave a Reply

Your email address will not be published. Required fields are marked *

Back to top button