ಚಿತ್ರದುರ್ಗ: ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ಚಿತ್ರದುರ್ಗದ (Chitradurga) ಚಳ್ಳಕೆರೆ ನಗರದ ಬೆಂಗಳೂರು ರಸ್ತೆಯಲ್ಲಿ ನಡೆದಿದೆ.
ನರಹರಿ ನಗರದ ರವಿಕುಮಾರ್ ಹಣ ಕಳೆದುಕೊಂಡ ವ್ಯಕ್ತಿ. ರವಿಕುಮಾರ್ ಚಳ್ಳಕೆರೆಯ ಕರ್ನಾಟಕ ಬ್ಯಾಂಕ್‌ನಿಂದ 1.40 ಲಕ್ಷ ರೂ. ಹಣವನ್ನು ಡ್ರಾ ಮಾಡಿದ್ದರು. ಬಳಿಕ ಸ್ಕೂಟಿ ನಿಲ್ಲಿಸಿ ಕಿರಾಣಿ ಅಂಗಡಿಗೆ ಹೋಗಿ ಬರುವಷ್ಟರಲ್ಲಿ ಕಳ್ಳರು ಹಣವನ್ನು ಕದ್ದಿದ್ದಾರೆ. ಇದನ್ನೂ ಓದಿ: ಕೊಪ್ಪಳ | ವಿದೇಶಿ, ದೇಶಿ ಪ್ರವಾಸಿಗರ ಮೇಲೆ ಹಲ್ಲೆ
Advertisement
Advertisement
ಮೂವರು ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸ್ಕೂಟಿ ಕಾಣದಂತೆ ಅಡ್ಡ ನಿಂತು, ಹಣವನ್ನು ಕದ್ದು ಕಳ್ಳರು ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅಭಿವೃದ್ಧಿಯ ಬಜೆಟ್ ಇದು, ಗ್ಯಾರಂಟಿ ಮೀರಿ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇನೆ: ಸಿಎಂ
Advertisement
ಕಳ್ಳರ ಚಲನವಲನ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಸಿಸಿಟಿವಿ ಕ್ಯಾಮೆರಾದ ದೃಶ್ಯವನ್ನಾಧರಿಸಿ ಕಳ್ಳರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: Karnataka Budget 2025 LIVE: ರಾಜ್ಯ ಬಜೆಟ್ ಮಂಡನೆ ಆರಂಭ
Advertisement
ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.