ಹಾವೇರಿ: ವರದಾ ನದಿಗೆ (Varada River) ಅಡ್ಡಲಾಗಿ ನಿರ್ಮಿಸಿದ್ದ ಸುಮಾರು 14ಕ್ಕೂ ಅಧಿಕ ಬ್ರಿಡ್ಜ್ ಕಂ ಬ್ಯಾರೇಜ್‌ನ 98 ಗೇಟ್‌ಗಳನ್ನು ಕಳ್ಳರು ಕಳ್ಳತನ ಮಾಡಿರುವ ಘಟನೆ ಹಾವೇರಿ (Haveri) ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ.
ವರದಾ ನದಿಗೆ ಅಡ್ಡಲಾಗಿ ಸುಮಾರು 14ಕ್ಕೂ ಅಧಿಕ ಬ್ರಿಡ್ಜ್ ಕಂ ಬ್ಯಾರೇಜ್‌ಗಳನ್ನು ನಿರ್ಮಾಣ ಮಾಡಲಾಗಿತ್ತು. ಕಳೆದ 6 ತಿಂಗಳಿನಿAದ ನಿರಂತರವಾಗಿ ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್‌ಗಳನ್ನು ಖದೀಮರು ಕಳ್ಳತನ ಮಾಡುತ್ತಿದ್ದಾರೆ. ಈ ಬಾರಿ ಸುಮಾರು ಒಂದುವರೆ ಲಕ್ಷ ಮೌಲ್ಯದ ಗೇಟ್‌ಗಳನ್ನ ಕಳ್ಳತನ ಮಾಡಿದ್ದಾರೆ. ಇದನ್ನೂ ಓದಿ: Uttar Pradesh | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಇಬ್ಬರು ದುರ್ಮರಣ, ಐವರಿಗೆ ಗಾಯ
ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಬ್ರಿಡ್ಜ್ ಕಂ ಬ್ಯಾರೇಜ್‌ಗೆ ಅಳವಡಿಸಿದ್ದ ಗೇಟ್‌ಗಳನ್ನ ಗೋದಾಮಿನಲ್ಲಿ ಇಡುತ್ತಿದ್ದರು. ಈ ಬಾರಿಯೂ ಇದೇ ರೀತಿ ಇಟ್ಟಿದ್ದರು. ಆದರೆ ಈಗ ಖದೀಮರ ಗ್ಯಾಂಗೊಂದು ರಾತ್ರೋರಾತ್ರಿ ಗೋದಾಮಿನಲ್ಲಿದ್ದ ಒಂದುವರೆ ಲಕ್ಷ ಮೌಲ್ಯದ 98 ಗೇಟ್‌ಗಳನ್ನು ಕದ್ದು ಪರಾರಿಯಾಗಿದೆ. ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತ – ವ್ಯಕ್ತಿ ಸಾವು
ಕಳೆದ ಆರೇಳು ತಿಂಗಳಿನಲ್ಲಿ ಹಾವೇರಿ ಜಿಲ್ಲೆಯಲ್ಲಿಯೇ ಮೂರು ಕಡೆ ಬ್ಯಾರೇಜ್ ಗೇಟ್ ಕಳ್ಳತನ ಆಗಿವೆ. ಕೂಸನೂರು, ಶೇಷಗಿರಿ ಸೇರಿದಂತೆ ಹಲವು ಕಡೆಯ ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್‌ಗಳನ್ನ ಖದೀಮರು ಕಳ್ಳತನ ಮಾಡಿದ್ದಾರೆ. ಸಣ್ಣನೀರಾವರಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಗೋದಾಮನ್ನು ಕಾಯುಲು ಯಾರನ್ನಾದರು ನೇಮಕ ಮಾಡಬೇಕು. ಅಲ್ಲದೇ ಕೂಡಲೇ ಪೊಲೀಸರು ಖದೀಮರನ್ನ ಪತ್ತೆ ಹಚ್ಚಬೇಕು. ಇಲ್ಲಾವಾದರೆ ಬೇಸಿಗೆಯಲ್ಲಿ ರೈತರಿಗೆ ಸಮಸ್ಯೆಯಾಗುತ್ತದೆ ಎಂದು ಆಕ್ರೋಶ ಹೊರಹಾಕಿದ್ದಾರೆ.