ಬೆಂಗಳೂರು: ನಗರದ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ (Oath Ceremony) ಕಾರ್ಯಕ್ರಮದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿದ ಪ್ರಸಂಗ ನಡೆದಿದೆ.
ಸರಗಳ್ಳರು ತಮ್ಮ ಕೈ ಚಳಕ ತೋರಿದ್ದು, ಸರ ಕಿತ್ತು ಓಡ್ತಿದ್ದವರನ್ನು ಬೆನ್ನಟ್ಟಿ ಪೊಲೀಸರು ಹಿಡಿದಿದ್ದಾರೆ. ಸಾರ್ವಜನಿಕರ ಸಹಾಯದೊಂದಿಗೆ ಇಬ್ಬರು ಕಳ್ಳರನ್ನ ಪೊಲೀಸರು ಸೆರೆಹಿಡಿದಿದ್ದಾರೆ.
ಪ್ರಮಾಣವಚನ ಕಾರ್ಯಕ್ರಮ ಮುಗಿದು ಜನ ಹೊರಬರುತ್ತಿದ್ದಂತೆಯೇ ಕಳ್ಳತನ (Theft) ನಡೆದಿದೆ. ಸದ್ಯ ಇಬ್ಬರೂ ಕಳ್ಳರನ್ನು ಸಂಪಂಗಿ ರಾಮನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಸಿಎಂ, ಡಿಸಿಎಂ ಜೊತೆ 8 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ
ಇಂದು ಮಧ್ಯಾಹ್ನ ಸಿಎಂ ಇದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಜೊತೆ 8 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಸಮಾರಂಭದಲ್ಲಿ ಪ್ರಮುಖವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್, ತಮಿಳುನಾಡು ಸಿಎಂ ಸ್ಟಾಲಿನ್, ನಟ ಕಮಲ್ ಹಾಸನ್, ನಟ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ರಾಜೇಂದ್ರ ಸಿಂಗ್ ಬಾಬು, ದುನಿಯಾ ವಿಜಯ್, ನಟಿ ರಮ್ಯಾ, ಭಾವನಾ, ಉಮಾಶ್ರೀ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದಾರೆ.