ಚಂಡೀಗಢ: ಗೋಲ್ಡನ್ ಟೆಂಪಲ್ (Golden Temple) ಬಳಿ ಬುಧವಾರ ತಡರಾತ್ರಿ ಸಂಭವಿಸಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ (Punjab) ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಳೆದ ರಾತ್ರಿ 1 ಗಂಟೆ ಸುಮಾರಿಗೆ ಅಮೃತಸರದ (Amritsar) ಹೆರಿಟೇಜ್ ಸ್ಟ್ರೀಟ್ ಬಳಿ ಈ ಸ್ಫೋಟ ಸಂಭವಿಸಿತ್ತು. ಗೋಲ್ಡನ್ ಟೆಂಪಲ್ ಬಳಿ ಕಳೆದ ಐದು ದಿನಗಳಲ್ಲಿ ಸಂಭವಿಸಿದ ಮೂರನೇ ಸ್ಫೋಟ ಇದಾಗಿತ್ತು. ಆರೋಪಿಗಳು ಈ ಮೂರು ಪ್ರಕರಣದಲ್ಲೂ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮ್ಯಾಟ್ರಿಮೋನಿಯಲ್ಲಿ ಪರಿಚಯ – ಮಹಿಳೆಯ ಚಿನ್ನಾಭರಣದೊಂದಿಗೆ ಯುವಕ ಪರಾರಿ
Advertisement
Advertisement
ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency) ಮತ್ತು ಪಂಜಾಬ್ ಪೊಲೀಸರು ಘಟನೆ ನಡೆದ ಸ್ಥಳದಿಂದ ಸ್ಫೋಟಕ್ಕೆ ಬಳಸಲಾದ ವಸ್ತುಗಳನ್ನು ಸಂಗ್ರಹಿಸಿದ್ದಾರೆ. ಮೇಲ್ನೋಟಕ್ಕೆ ತೀವ್ರ ಸ್ಫೋಟಕ ಬಳಸಿದಂತೆ ಕಾಣುತ್ತಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement
ಮೊದಲ ಸ್ಫೋಟ ಮೇ 6 ರಂದು ಮತ್ತು ಎರಡನೆಯ ಸ್ಫೋಟ ಮೇ 8 ರಂದು ಸಂಭವಿಸಿತ್ತು. ಮೇ 6 ರಂದು ನಡೆದ ಸ್ಫೋಟದಲ್ಲಿ ಒಬ್ಬರು ಗಾಯಗೊಂಡಿದ್ದರು. ಘಟನೆಯಲ್ಲಿ ಅಕ್ಕಪಕ್ಕದ ಕೆಲವು ಕಟ್ಟಡಗಳ ಕಿಟಕಿ ಗಾಜುಗಳು ಒಡೆದಿದ್ದವು. ಇದನ್ನೂ ಓದಿ: ಮಂಗಳೂರಿನಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ – ಮಿಥುನ್ ರೈ ಕಾರ್ ಮೇಲೆ ಕಲ್ಲು ತೂರಾಟ