ಮುಂಬೈ: ದಾಖಲೆಗಳ ಸರದಾರ ಸೂರ್ಯಕುಮಾರ್ ಯಾದವ್ (Suryakumar Yadav) ಭರ್ಜರಿ ಶತಕ ಸಿಡಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.
𝓢𝓮𝓷𝓼𝓪𝓽𝓲𝓸𝓷𝓪𝓵 𝓢𝓾𝓻𝔂𝓪 👏👏
3⃣rd T20I ton for @surya_14kumar & what an outstanding knock this has been 🧨 🧨#INDvSL @mastercardindia pic.twitter.com/kM1CEmqw3A
— BCCI (@BCCI) January 7, 2023
ಈ ಹಿಂದೆ ಕಿವೀಸ್ ಪಡೆಯ ದ್ವಿಪಕ್ಷೀಯ ಸರಣಿಯ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ಬೌಲರ್‌ಗಳನ್ನು ಬೆಂಡೆತ್ತಿದ್ದ ಸೂರ್ಯ ಈಗ ಲಂಕಾ ಬೌಲರ್‌ಗಳ ಬೆವರಿಳಿಸಿದ್ದಾರೆ. ಇದನ್ನೂ ಓದಿ: 11 ಬೌಂಡರಿ, 7 ಸಿಕ್ಸ್ – ಶತಕ ಸಿಡಿಸಿದ ದಾಖಲೆ ವೀರ ಸೂರ್ಯ
ಶನಿವಾರ ಗುಜರಾತ್‌ನ ರಾಜ್‌ಕೋಟ್ ಕ್ರೀಡಾಂಗಣದಲ್ಲಿ ನಡೆದ ಶ್ರೀಲಂಕಾ ನಡುವಿನ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ 45 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸುವ ಮೂಲಕ ಸೂರ್ಯಕುಮಾರ್ ತನ್ನ ದಾಖಲೆಯನ್ನು ತಾನೇ ಮುರಿದಿದ್ದಾರೆ. ಕಿವೀಸ್ ಪಡೆ ಎದುರು 49 ಎಸೆತಗಳಲ್ಲಿ ಶತಕ ಸಿಡಿಸಿದ್ದ ಸೂರ್ಯ ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ 219.60 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿ 45 ಎಸೆತಗಳಲ್ಲೇ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ (Rohit Sharma) ನಂತರ ಅತೀ ಕಡಿಮೆ ಎಸೆತಗಳಲ್ಲಿ ಶತಕ ಸಿಡಿಸಿದ 2ನೇ ಭಾರತೀಯನೆಂಬ ಖ್ಯಾತಿ ಪಡೆದಿದ್ದಾರೆ.
ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿ 51 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ ಅಜೇಯ 112 ರನ್ ಚಚ್ಚಿದ್ದಾರೆ. ಸಿಂಹಳೀಯರ ವಿರುದ್ಧ ಆರಂಭದಿಂದಲೇ ಅಬ್ಬರಿಸಲು ಮುಂದಾದ ಸೂರ್ಯಕುಮಾರ್ ಮೊದಲ 26 ಎಸೆತಗಳಲ್ಲಿ 50 ರನ್ ಸಿಡಿಸಿದ್ರೆ, ಮುಂದಿನ 25 ಎಸೆತಗಳಲ್ಲಿ 62 ರನ್ ಚಚ್ಚಿದ್ದಾರೆ. 9 ಸಿಕ್ಸರ್, 7 ಬೌಂಡರಿಗಳೂ ಇದರಲ್ಲಿ ಸೇರಿವೆ.
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ (Cricket) ಇದು ಸೂರ್ಯಕುಮಾರ್ ಯಾದವ್ ಅವರ 3ನೇ ಶತಕವಾಗಿದೆ. 2022ರ ಆವೃತ್ತಿಯ ಜುಲೈನಲ್ಲಿ ಇಂಗ್ಲೆಂಡ್ (England) ವಿರುದ್ಧ ನಡೆದ ಟಿ20 ಸರಣಿಯಲ್ಲಿ 48 ಎಸೆತಗಳಲ್ಲಿ ಸೂರ್ಯಕುಮಾರ್ ಭರ್ಜರಿ ಶತಕ ಬಾರಿಸಿದ್ದರು. ಇದರಲ್ಲಿ 14 ಬೌಂಡರಿ ಮತ್ತು 6 ಸಿಕ್ಸ್‌ಗಳು ದಾಖಲಾಗಿದ್ದವು. 2022ರಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಟಿ20ಯಲ್ಲಿ 49 ಎಸೆತಗಳಲ್ಲಿ ಶತಕ ಸಿಡಿಸಿದ್ದರು ಇದರಲ್ಲಿ 11 ಬೌಂಡರಿ, 7 ಸಿಕ್ಸರ್ ದಾಖಲಾಗಿದ್ದವು. ಇದೀಗ ಶ್ರೀಲಂಕಾ ವಿರುದ್ಧ 45 ಎಸೆತಗಳಲ್ಲಿ 8 ಸಿಕ್ಸರ್, 6 ಬೌಂಡರಿಗಳೊಂದಿಗೆ ಸ್ಫೋಟಕ ಶತಕ ಸಿಡಿಸಿ ದಾಖಲೆಯ ಪುಟ ಸೇರಿದ್ದಾರೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 2018ರ ಆವೃತ್ತಿಯಲ್ಲಿ ಶ್ರೀಲಂಕಾ ವಿರುದ್ಧ 35 ಎಸೆತಗಳಲ್ಲಿ ಶತಕ ಸಿಡಿಸಿದ್ದು, ಈವರೆಗಿನ ದಾಖಲೆಯಾಗಿದೆ.
A mighty batting display from #TeamIndia with Suryakumar Yadav dominating the show with an outstanding 1⃣1⃣2⃣* 🙌 🙌
Sri Lanka innings underway.
Scorecard 👉 https://t.co/hTaQA8AHr4 #INDvSL pic.twitter.com/x8TsVLOwGd
— BCCI (@BCCI) January 7, 2023
ಟಿ20ನಲ್ಲಿ ಸೂರ್ಯಕುಮಾರ್ ಸಿಡಿಸಿದ 3ನೇ ಶತಕವಾಗಿದ್ದು, ರೋಹಿತ್ ಶರ್ಮಾ (Rohit Sharma) ನಂತರ ಅತೀ ಕಡಿಮೆ ಎಸೆತಗಳಲ್ಲಿ ಶತಕ ಸಿಡಿಸಿದ 2ನೇ ಭಾರತೀಯನೆಂಬ ಖ್ಯಾತಿ ಪಡೆದಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k