ಮುಂಬೈ: ಕಾಂಗ್ರೆಸ್ ಪಕ್ಷ ದೇಶದ ಎರಡನೇ ದೊಡ್ಡ ಪಕ್ಷವಾಗಿದೆ. ಇದು ಇಲ್ಲದೇ ರಾಷ್ಟ್ರ ರಾಜಕಾರಣದಲ್ಲಿ ತೃತೀಯ ರಂಗ ರಚಿಸಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ(ಎನ್‍ಸಿಪಿ) ಮುಖ್ಯಸ್ಥ ಶರದ್ ಪವಾರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ದೇಶದ ಎರಡನೇ ದೊಡ್ಡ ಪಕ್ಷವಾಗಿದೆ. ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸುವಾಗ ಕಾಂಗ್ರೆಸ್ ಅನ್ನು ನಿರ್ಲಕ್ಷಿಸುವುದು ಸರಿಯಲ್ಲ. ಇದರಿಂದಾಗಿ ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು ಅವರನ್ನು ಗಣನೆಗೆ ತೆಗೆದುಕೊಳ್ಳುವುದು ಮುಖ್ಯವಾಗಿದೆ ಎಂದರು.
Advertisement
Advertisement
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಕೆಲವು ವಿರೋಧ ಪಕ್ಷದ ನಾಯಕರು 2024 ರ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳ ಒಗ್ಗಟ್ಟಿಗೆ ಈಗಾಗಲೇ ಕರೆ ನೀಡಿದ್ದಾರೆ. ಇದನ್ನೂ ಓದಿ: ಇತ್ತೀಚೆಗೆ ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳು ತುಂಬಾ ನೋವುಂಟು ಮಾಡಿದೆ : ಯದುವೀರ್ ಒಡೆಯರ್
Advertisement
Advertisement
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಬಿಜೆಪಿಯೇತರ ನಾಯಕರು ಮತ್ತು ಇತರ ವಿರೋಧ ಪಕ್ಷದ ನಾಯಕರಿಗೆ ಇತ್ತೀಚೆಗೆ ಬರೆದ ಪತ್ರದ ಕುರಿತು ಪ್ರತಿಕ್ರಿಯಿಸಿದ ಪವಾರ್, ಬಿಜೆಪಿ ವಿರುದ್ಧ ಹೋರಾಡಲು ಒಂದಾಗುವಂತೆ ಒತ್ತಾಯಿಸಿದರು. ಈ ವಿಷಯದ ಬಗ್ಗೆ ನಾವು ಮಾತುಕತೆ ನಡೆಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಬಿರ್ಭೊಮ್ ಹಿಂಸಾಚಾರ – ಪ್ರತಿಭಟನೆ ವೇಳೆ ಸುವೆಂದು ಅಧಿಕಾರಿಗೆ ಗಾಯ
ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಈ ಹಿಂದೆ ಶರದ್ ಪವಾರ್ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಪ್ರತಿಪಕ್ಷಗಳ ಒಗ್ಗಟ್ಟಿನ ಪ್ರಯತ್ನಗಳ ಭಾಗವಾಗಿ ಭೇಟಿ ಮಾಡಿದ್ದರು.