ರಾಮನಗರ: ದಿನೇ ದಿನೇ ಕೊರೊನಾ ಪ್ರಕರಣ ಭಾರತದಲ್ಲಿ ಹೆಚ್ಚಾಗುತ್ತಿದೆ. ಬೆಂಗಳೂರು ಸೇರಿದಂತೆ ದೆಹಲಿ, ಮಹಾರಾಷ್ಟ್ರದಲ್ಲೂ ಕೇಸ್‌ಗಳು ಜಾಸ್ತಿ ಆಗುತ್ತಿದೆ. ಆದರೆ ಬೆಂಗಳೂರಿಗೆ ವಿಶೇಷ ಕ್ರಮ ತೆಗೆದುಕೊಳ್ಳುವುದು ಅತ್ಯಂತ ಅವಶ್ಯಕ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.
ಇತ್ತೀಚೆಗಿನ ಕೊರೊನಾ ಪ್ರಕರಣಗಳನ್ನು ಗಮನಿಸುವುದಾದರೆ ಒಂದೇ ದಿನ ಬೆಂಗಳೂರಿನಲ್ಲಿ ಶೇ.1.90 ರಷ್ಟು ಏರಿಕೆಯಾಗಿದ್ದು, 1,290 ಕೇಸ್ ಪತ್ತೆ ಆಗಿದೆ. ಈಗಾಗಲೇ ಶೇ.90 ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರು ಏರ್‌ಪೋರ್ಟ್ ಸೇರಿದಂತೆ ಅನೇಕ ಕಡೆ ನಿಗಾ ವಹಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ನಾಯಕ ಮನೋಜ್ ತಿವಾರಿಗೆ ಕೊರೊನಾ ಪಾಸಿಟಿವ್
Advertisement
Advertisement
ಓಮಿಕ್ರಾನ್ ವೇಗವಾಗಿ ಹರಡುತ್ತಿದೆ. ಭಾರತದಲ್ಲೂ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದೆ. ದೆಹಲಿ, ಮಹಾರಾಷ್ಟ್ರದಲ್ಲಿ ಕೇಸ್ ಹೆಚ್ಚಾಗುತ್ತಿದೆ. ನಮ್ಮ ಸರ್ಕಾರ ಈ ವಿಚಾರವಾಗಿ ವಿಶೇಷ ಕಾಳಜಿ ವಹಿಸುತ್ತಿದೆ. ರಾಜ್ಯಕ್ಕೆ ಮೂರನೇ ಅಲೆ ಈಗಾಗಲೇ ಬಂದಿದೆ. ಇದು ಮೂರನೇ ಅಲೆಯ ಪ್ರಾರಂಭದ ಹಂತ ಎಂದು ಸಚಿವರು ಹೇಳಿದ್ದಾರೆ.
Advertisement
Advertisement
15-18 ವರ್ಷದ ಮಕ್ಕಳ ಲಸಿಕೆ ಅಭಿಯಾನದಲ್ಲಿ ನಿನ್ನೆ ರಾಜ್ಯದಲ್ಲಿ 4,22,152 ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಶೇ.66 ಲಸಿಕೆ ಅಭಿಯಾನ ಪೂರ್ಣಗೊಂಡಿದ್ದು, ಇನ್ನೂ 10-15 ದಿನಗಳ ಒಳಗೆ ಎಲ್ಲಾ ಮಕ್ಕಳಿಗೆ ಲಸಿಕೆ ಕೊಡುತ್ತೇವೆ. ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಿಂದ ಅನೇಕ ರಾಜ್ಯಗಳ ಶಾಲೆ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಮೈಕ್ರೋ ಝೋನ್ ಹೆಚ್ಚಳ ಮಾಡುವ ಬಗ್ಗೆ ಜನರಿಗೆ ಸಮಸ್ಯೆ ಆಗದಂತೆ ಟಫ್ ರೂಲ್ಸ್ ಜಾರಿ ಮಾಡುವುದರ ಬಗ್ಗೆ ಇಗ್ಗೆ ಇಂದು ಚರ್ಚೆ ನಡೆಯಲಿದೆ ಎಂದರು.
ಕೊರೊನಾ ವೇಗವಾಗಿ ಹರಡುತ್ತಿದೆ. ಕಾಂಗ್ರೆಸ್‌ನವರು ಪಾದಯಾತ್ರೆ ಮಾಡಲಿ. ಆದರೆ ಈಗ ಅದಕ್ಕೆ ಸೂಕ್ತ ಸಮಯವಲ್ಲ. ಈ ಪಾದಯಾತ್ರೆಗೆ ಎಲ್ಲಾ ಜಿಲ್ಲೆಯಿಂದ ಜನ ಬರುತ್ತಾರೆ. ಆಗ ಮತ್ತೆ ಕೊರೊನಾ ಕೇಸ್ ಹೆಚ್ಚಾದ್ರೆ ಕಾಂಗ್ರೆಸ್ ಜವಾಬ್ದಾರಿ ಹೊರಬೇಕಾಗುತ್ತದೆ. ಸರ್ಕಾರದ ನಿಯಮವನ್ನು ಎಲ್ಲರೂ ಪಾಲನೆ ಮಾಡಬೇಕು. ಜನರ ಹಿತ ದೃಷ್ಟಿಯಿಂದ ಸರ್ಕಾರ ನಿಯಮ ಮಾಡುತ್ತದೆ. ಅದನ್ನು ಕಾಂಗ್ರೆಸ್ ಅರ್ಥ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ಪಾದಯಾತ್ರೆ ವಿಚಾರವಾಗಿ ಸಚಿವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.
ನಿನ್ನೆ ರಾಮನಗರದಲ್ಲಿ ನಡೆದ ಘಟನೆಯ ವಿಚಾರವಾಗಿ ನಿನ್ನೆಯೆ ಪ್ರತಿಕ್ರಿಯೆ ಕೊಟ್ಟಿದ್ದೇನೆ. ಮತ್ತೆ ಆ ವಿಚಾರವನ್ನು ಬೆಳೆಸಲು ಇಷ್ಟಪಡುವುದಿಲ್ಲ ಎಂದು ಸುಧಾಕರ್ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಪಾಸಿಟಿವ್ ಕಂಡುಬಂದ 66 ಮಂದಿಯನ್ನು ಪ್ರತ್ಯೇಕವಾಗಿ ಇರಿಸಿಲ್ಲವೆಂದು ಹಡಗಿನಲ್ಲೇ ಪ್ರತಿಭಟನೆ