ನವದೆಹಲಿ: ಈ ವರ್ಷದ ದೀಪಾವಳಿಗೆ (Diwali) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬಂಪರ್ ಆಫರ್ ನೀಡಿದ್ದು, ದೇಶಾದ್ಯಂತ 75,000 ಯುವಕರಿಗೆ ಉದ್ಯೋಗವನ್ನು (Job) ಉಡುಗೊರೆಯಾಗಿ (Gift) ನೀಡಲಿದ್ದಾರೆ ಎಂದು ವರದಿ ತಿಳಿಸಿದೆ.
ದೀಪಾವಳಿಗೆ ಎರಡು ದಿನ ಮೊದಲು ಅಂದರೆ ಶನಿವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಯುವಕರೊಂದಿಗೆ ಮೋದಿ ಸಂವಾದ ನಡೆಸಲಿದ್ದಾರೆ. ಈ ವೇಳೆ ಉದ್ಯೋಗದ ಪತ್ರವನ್ನು ವಿತರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ನಗರಗಳಿಂದ ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ.
Advertisement
Advertisement
ಮೂಲಗಳ ಪ್ರಕಾರ ವಿವಿಧ ಸಚಿವಾಲಯಗಳು ಮತ್ತು ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಂದ 75,000 ಯುವಜನರಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಗುವುದು. ಅವುಗಳಲ್ಲಿ ರಕ್ಷಣಾ ಸಚಿವಾಲಯ, ರೈಲ್ವೆ ಸಚಿವಾಲಯ, ಅಂಚೆ ಇಲಾಖೆ, ಗೃಹ ಸಚಿವಾಲಯ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್, ಕಸ್ಟಮ್ಸ್ ಮತ್ತು ಬ್ಯಾಂಕಿಂಗ್ ಇತ್ಯಾದಿ ಇಲಾಖೆಯಲ್ಲಿ ಕೆಲಸ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಮ ಮಂದಿರವನ್ನು ಸ್ಫೋಟಿಸಲು PFI ಅಲ್ಲ, ರಾವಣ, ಜಿನ್ನಾ ವಂಶಸ್ಥರಿಂದಲೂ ಸಾಧ್ಯವಿಲ್ಲ: ಈಶ್ವರಪ್ಪ
Advertisement
Advertisement
ನಿರುದ್ಯೋಗ ಸಮಸ್ಯೆಯು ದೇಶದಲ್ಲಿ ಹೆಚ್ಚಾಗುತ್ತಿದ್ದರಿಂದ ದೇಶದಲ್ಲಿ ತೀವ್ರ ಕೇಂದ್ರದ ಎನ್‍ಡಿಎ ಸರ್ಕಾರ ತೀವ್ರ ಟೀಕೆಗೆ ಗುರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಕೆಲ ತಿಂಗಳ ಹಿಂದಷ್ಟೇ ಮೋದಿ, ಮುಂದಿನ 18 ತಿಂಗಳಲ್ಲಿ ಹತ್ತು ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದು ಘೋಷಿಸಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ ಹಿಡಿಯಲು ನೈತಿಕತೆಯಿಲ್ಲ: ಭಾಸ್ಕರ್ ರಾವ್