ಮಂಡ್ಯ: ಗಲಭೆ ಅಶಾಂತಿ ಎಲ್ಲವೂ ಮಸೀದಿಯ ಮೈಕ್ ಮೂಲಕ ಆಗುತ್ತಿದೆ. ಆದ್ದರಿಂದಲೇ ಯೋಗಿ ಸರ್ಕಾರ 60 ಸಾವಿರ ಮೈಕ್ ತೆರವುಗೊಳಿಸಿದೆ. ಆದರೆ, ನಮ್ಮ ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹಸಚಿವ ಆರಗ ಜ್ಞಾನೇಂದ್ರ ಅವರು ಏಕೆ ಗಟ್ಸ್ ತೋರಿಸುತ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮೈಕ್‌ಗಳನ್ನು ನಿಷೇಧಿಸುವ ಕೆಲಸ ನಮ್ಮ ರಾಜ್ಯದಲ್ಲಿ ಏಕೆ ಆ ಕೆಲಸ ಆಗುತ್ತಿಲ್ಲ? ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಆರಗ ಜ್ಞಾನೇಂದ್ರ ಅವರು ಏಕೆ ಯೋಗಿ ರೀತಿ ಗಡ್ಸ್ ತೋರಿಸುತ್ತಿಲ್ಲ? ಎಂದು ಪ್ರಶ್ನಿಸಿರುವ ಮುತಾಲಿಕ್, ಸುಪ್ರೀಂ ಆದೇಶ ಎಲ್ಲರಿಗೂ ಒಂದೇ. ನೀವು ಹೊಸ ನಿಯಮ ಮಾಡಬೇಕಿಲ್ಲ. ಸರ್ಕಾರ ಆದೇಶ ಪಾಲಿಸದೇ ಇರೋದ್ರಿಂದ ನಮ್ಮ ಹೋರಾಟ ನಡೆಯುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಎಸ್‍ವೈ, ಅಮಿತ್ ಶಾ, ಬಿಜೆಪಿಯ MLAಗಳು ಜೈಲಿಗೆ ಏಕೆ ಹೋಗಿದ್ರು: ಕಟೀಲ್‍ಗೆ ಡಿಕೆಶಿ ಪ್ರಶ್ನೆ
Advertisement
Advertisement
ನಾಳೆಯಿಂದಲೇ ಹಿಂದೂ ಸಂಘಟನೆಗಳಿಂದ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಣ ಹಾಗೂ ಭಕ್ತಿಗೀತೆಗಳ ಪ್ರಸಾರ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಮಂಡ್ಯದ ಕಲ್ಲಹಳ್ಳಿಯ ಹನುಮ ಮಂದಿರ ಸೇರಿದಂತೆ 3 ದೇವಾಲಯಗಳಲ್ಲಿ ಬೆಳಗ್ಗೆ 5 ಗಂಟೆಗೆ ಚಾಲನೆ ನೀಡಲಾಗುತ್ತಿದೆ. ನಾಳೆಯ ಅಭಿಯಾನ ತಡೆಯಲು ಬಂದ್ರೆ ಸಂಘರ್ಷ ಗ್ಯಾರೆಂಟಿ. ಪೊಲೀಸರು ನಮ್ಮ ಅಭಿಯಾನ ತಡೆಯುವುದಲ್ಲ, ಮಸೀದಿಗಳಲ್ಲಿ ಮೈಕ್ ಅಳವಡಿಸುವುದನ್ನು ತಡೆಯಲಿ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ವಿಶ್ವ ತಾಯಂದಿರ ದಿನಾಚರಣೆ – 600ಕ್ಕೂ ಹೆಚ್ಚು ಗರ್ಭಿಣಿಯರಿಗೆ ಸೀಮಂತ ಶಾಸ್ತ್ರ
Advertisement
ನಮ್ಮ ಸಂಘಟನೆ ಕಾರ್ಯಕರ್ತರು ರಾಜ್ಯದಾದ್ಯಂತ ದೇವಾಲಯಗಳಲ್ಲಿ ಅಭಿಯಾನ ನಡೆಸಲು ಮನವಿ ಮಾಡಿದ್ದಾರೆ. ನಾಳೆಯಿಂದ ಹನುಮಾನ್ ಚಾಲೀಸಾ, ಭಕ್ತಿಗೀತೆಗಳನ್ನು ಪ್ರಸಾರ ಮಾಡಲಾಗುತ್ತದೆ. ದೇವಾಲಯದ ಆಡಳಿತ ಮಂಡಳಿ ಹಾಗೂ ಅರ್ಚಕರು ಭಕ್ತಿಗೀತೆಗಳನ್ನು ಹಾಕ್ತಾರೆ. ಬೆಳಿಗ್ಗೆ 5 ಗಂಟೆಗೆ ಹಾಕಲು ಅಭಿಯಾನ ಆರಂಭಿಸಿದ್ದು, ದಿನಕ್ಕೆ 4 ಬಾರಿ ಮಸೀದಿ ಅಜಾನ್ ಮೊಳಗುವ ವೇಳೆ ಭಕ್ತಿಗೀತೆ ಹಾಕುವ ಬಗ್ಗೆ ನಿರ್ಧರಿಸುತ್ತೇವೆ ಎಂದಿದ್ದಾರೆ.
Advertisement
ಬೆಳಗ್ಗೆ 5 ಗಂಟೆಗೆ ಮೈಕ್ ಹಾಕಲು ಅವಕಾಶ ಇಲ್ಲವೆಂದು ಸುಪ್ರೀಂಕೋರ್ಟ್ ಆದೇಶವೇ ಹೇಳಿದೆ. ಆದರೆ ಮಸೀದಿಗಳಲ್ಲಿ ಬೆಳಗ್ಗಿನ ಜಾವ ಆಜಾನ್ ಕೂಗುತ್ತಾರೆ. ನಾವು ಸರ್ಕಾರಕ್ಕೆ ಎಚ್ಚರಿಕೆ ನೀಡಲು ಆದೇಶ ಉಲ್ಲಂಘಿಸುತ್ತಿದ್ದೇವೆ. ನಾಳೆ ಬಳಿಕ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಒಳ್ಳೆಯದನ್ನೂ ಮಾಡಿದ್ದೀನಿ, ಅದನ್ನೂ ತೋರಿಸಿ – ಕ್ಯಾಮೆರಾ ಮುಂದೆ ಕೈ ಮುಗಿದ ಕಿಂಗ್‍ಪಿನ್ ಆರ್.ಡಿ.ಪಾಟೀಲ್
ಸರ್ಕಾರದಿಂದಲೇ ಬೆದರಿಕೆ: ರಾಜ್ಯದ್ಯಾಂತ ಸುಮಾರು ಸಾವಿರ ದೇವಾಲಯಗಳನ್ನು ಸಂಪರ್ಕಿಸಿದ್ದೇವೆ. ದೇವಾಲಯದ ಅರ್ಚಕರು, ಟ್ರಸ್ಟ್ನವರು ಸಂತೋಷದಿAದಲೇ ಒಪ್ಪಿದ್ದಾರೆ. ಬೆಳಗ್ಗಿನ ಜಾವ ಭಕ್ತಿ ಗೀತೆ, ಹನುಮಾನ್ ಚಾಲೀಸಾ ಹಾಕಲು ಮುಂದಾಗಿದ್ದಾರೆ. ಎಲ್ಲರಲ್ಲೂ ಸಂತೋಷ ಇದೆ, ಆಕ್ರೋಶವೂ ಇದೆ. ಏಕೆಂದರೆ ಮುಸ್ಲಿಂರ ಉದ್ಧಟತನ ಹೆಚ್ಚಾಗಿದ್ದರೂ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದೇ. ನಮ್ಮ ಅಭಿಯಾನವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ನಾವು ಸಂಪರ್ಕಿಸಿದ ದೇವಾಲಯಗಳಿಗೆ ಹೋಗಿ ಹೆದರಿಸುತ್ತಿದ್ದಾರೆ. ಈ ದಾದ ಗಿರಿ ನಡೆಯಲ್ಲ, ಮುಸ್ಲಿಮರ ಮೈಕಿಗೆ ನಿಮ್ಮ ದಾದಾಗಿರಿ ತೋರಿಸಿ ಎಂದು ಸವಾಲು ಹಾಕಿದ್ದಾರೆ.