ದುಬೈ: ಯುಎಇನಲ್ಲಿ ನಡೆಯುತ್ತಿರುವ ಏಷ್ಯಾಕಪ್‍ನಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್‍ನಲ್ಲಿ ಅಬ್ಬರಿಸುತ್ತಿದ್ದಾರೆ. ಹಾಂಕಾಂಗ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಬೊಂಬಾಟ್ ಬ್ಯಾಟಿಂಗ್‍ನಿಂದಾಗಿ ಭಾರತ ಭರ್ಜರಿ ಜಯ ಸಾಧಿಸಿತ್ತು. ಇದೆಲ್ಲದರ ನಡುವೆ ಕೊಹ್ಲಿ 6 ವರ್ಷಗಳ ಬಳಿಕ ಬೌಲಿಂಗ್ ಮಾಡಿ ಗಮನಸೆಳೆದರು.
Advertisement
ಹೌದು ನಿನ್ನೆ ಹಾಂಕಾಂಗ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ 40 ರನ್‍ಗಳ ಭರ್ಜರಿ ಜಯ ದಾಖಲಿಸಿತ್ತು. ಈ ಮೂಲಕ ಏಷ್ಯಾಕಪ್‍ನ ಸೂಪರ್ ಫೋರ್ ಹಂತಕ್ಕೆ ಭಾರತ ಪ್ರವೇಶ ಪಡೆದಿದೆ. ಈ ಪಂದ್ಯದಲ್ಲಿ ಒಂದು ಕಡೆ ಬ್ಯಾಟಿಂಗ್‍ನಲ್ಲಿ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಮಿಂಚಿ ಭಾರತದ ಜಯದ ನಾಗಾಲೋಟವನ್ನು ಮುಂದುವರಿಸಲು ಸಹಕಾರಿಯಾದರು. ಆ ಬಳಿಕ ಹಾಂಕಾಂಗ್, ಭಾರತ ನೀಡಿದ ಬೃಹತ್ ಗುರಿ ಬೆನ್ನಟ್ಟುತ್ತಿದ್ದಂತೆ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿ ಗಮನಸೆಳೆದರು. ಭಾರತ ಪರ 17ನೇ ಓವರ್ ಎಸೆಯಲು ಬಂದ ಕೊಹ್ಲಿ 6 ರನ್ ನೀಡಿ ಓವರ್ ಮುಗಿಸಿದರು. ಇದನ್ನೂ ಓದಿ: ಪಂದ್ಯ ಸೋತ್ರೂ ರೋಮ್ಯಾಂಟಿಕ್ ಮೂಡ್- ಗೆಳತಿಗೆ ಪ್ರಪೋಸ್ ಮಾಡಿದ ಕ್ರಿಕೆಟಿಗ
Advertisement
Advertisement
ಈ ಪಂದ್ಯದಲ್ಲಿ ಭಾರತದ ಅಗ್ರಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳಾದ ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಬಿರುಗಾಳಿ ಎಬ್ಬಿಸಿದರು. ಬೌಂಡರಿ, ಸಿಕ್ಸರ್‌ಗಳ ಅಬ್ಬರೊಂದಿಗೆ ಇಬ್ಬರು ತಲಾ ಅರ್ಧಶತಕ ಸಿಡಿಸಿ ಮೂರನೇ ವಿಕೆಟ್‍ಗೆ ಅಜೇಯ 98 ರನ್ (42 ಎಸೆತ) ಜೊತೆಯಾಟವಾಡಿ ಬೃಹತ್ ಮೊತ್ತಕ್ಕೆ ಕಾರಣರಾದರು. ವಿರಾಟ್ ಕೊಹ್ಲಿ ಅಜೇಯ 59 ರನ್ (44 ಎಸೆತ, 1 ಬೌಂಡರಿ, 3 ಸಿಕ್ಸ್) ಮತ್ತು ಸೂರ್ಯಕುಮಾರ್ ಯಾದವ್ 68 ರನ್ (26 ಎಸೆತ, 6 ಬೌಂಡರಿ, 6 ಸಿಕ್ಸ್) ಚಚ್ಚಿ ಅಬ್ಬರಿಸಿ ಬೊಬ್ಬಿರಿದರು. ಇದರ ಪರಿಣಾಮವಾಗಿ ನಿಗದಿತ ಓವರ್‌ಗಳಲ್ಲಿ ಭಾರತ 2 ವಿಕೆಟ್ ನಷ್ಟಕ್ಕೆ 192 ರನ್‍ಗಳ ಬೃಹತ್ ಮೊತ್ತ ಕಲೆಹಾಕಿತು. ಇದನ್ನೂ ಓದಿ: ಕೊಹ್ಲಿ, ಸೂರ್ಯ ಬ್ಯಾಟಿಂಗ್ ಬಿರುಗಾಳಿಗೆ ಕ್ರಿಕೆಟ್ ಶಿಶುಗಳು ಕಂಗಾಲು – ಸೂಪರ್ ಫೋರ್‌ಗೆ ಎಂಟ್ರಿ
Advertisement
https://twitter.com/_C_S___/status/1565025558605352965
ಆ ಬಳಿಕ ಭಾರತ ನೀಡಿದ ಬೃಹತ್ ಮೊತ್ತವನ್ನು ಬೆನ್ನಟ್ಟುವ ಹುಮ್ಮಸ್ಸಿನಲ್ಲಿ ಕಣಕ್ಕಿಳಿದ ಹಾಂಕಾಂಗ್ 20 ಓವರ್‌ಗಳ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 152 ರನ್ ಪೇರಿಸಿ ಸೋಲುಕಂಡಿತು.