ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್‌ಭೂಮ್ ಜಿಲ್ಲೆಯ ರಾಮ್‌ಪುರಹಾಟ್‌ನಲ್ಲಿ ಮನೆಗಳಿಗೆ ಬೆಂಕಿ ಹೊತ್ತಿ ಎಂಟು ಮಂದಿ ಸಜೀವ ದಹನ ಪ್ರಕರಣವನ್ನು ಹಿಂಸಾಚಾರ ಎಂದು ಬಿಜೆಪಿ ಕಾರ್ಯಕರ್ತರು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಆರೋಪಕ್ಕೆ ವಿರೋಧ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಇದು ಉತ್ತರ ಪ್ರದೇಶ ಅಲ್ಲ, ಬಂಗಾಳ. ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಿಯೋಗವನ್ನು ಕಳಿಹಿಸಿದ್ದೆವು. ಭೇಟಿಗೆ ನಮ್ಮ ನಿಯೋಗಕ್ಕೆ ಅವಕಾಶವನ್ನೇ ನೀಡಲಿಲ್ಲ. ಆದರೆ ನಮ್ಮ ರಾಜ್ಯಕ್ಕೆ ಬರುವ ಯಾರನ್ನೂ ನಾವು ತಡೆಯುವುದಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ದಿದಿ ನಾಡಿನಲ್ಲೇ ಹಿಂಸಾಚಾರ – ಹೆದರಿ ಮನೆ ತೊರೆಯುತ್ತಿರುವ ಜನರು
Advertisement
Advertisement
ಗುಜರಾತ್, ರಾಜಸ್ಥಾನ ರಾಜ್ಯಗಳಲ್ಲೂ ಇಂತಹ ಘಟನೆಗಳು ನಡೆದಿವೆ. ಹಾಗಂತ ನಾನು ರಾಮ್‌ಪುರಹಾಟ್‌ನಲ್ಲಿ ನಡೆದ ಘಟನೆಯನ್ನು ಸಮರ್ಥಿಸುತ್ತಿಲ್ಲ. ನ್ಯಾಯಯುತವಾಗಿ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
Advertisement
ಪಶ್ಚಿಮ ಬಂಗಾಳದಲ್ಲಿರುವುದು ನಮ್ಮ ಸರ್ಕಾರ. ರಾಜ್ಯದ ಜನರ ಬಗ್ಗೆ ನಮಗೆ ಕಾಳಜಿ ಇದೆ. ಯಾರೊಬ್ಬರೂ ನೋವು ಅನುಭವಿಸುವುದನ್ನು ನಾವು ಎಂದಿಗೂ ಬಯಸುವುದಿಲ್ಲ. ರಾಮ್‌ಪುರಹಾಟ್ ಘಟನೆ ದುರದೃಷ್ಟಕರ. ಕೂಡಲೇ ಒಸಿ, ಡಿಪಿಒ ಅವರನ್ನು ವಜಾ ಮಾಡಿದ್ದೇನೆ. ನಾನು ನಾಳೆ ರಾಮ್‌ಪುರಹಾಟ್‌ಗೆ ಹೋಗುತ್ತೇನೆ ಎಂದು ಹೇಳಿದ್ದಾರೆ.
Advertisement
ಪಶ್ಚಿಮ ಬಂಗಾಳದ ಬಿರ್‌ಭೂಮ್ ಜಿಲ್ಲೆಯ ರಾಮ್‌ಪುರಹಾಟ್ ಎಂಬಲ್ಲಿ ಮಂಗಳವಾರ ನಸುಕಿನಲ್ಲಿ ಮನೆಗಳಿಗೆ ಬೆಂಕಿಹತ್ತಿ ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರು ಜೀವಂತವಾಗಿ ಸುಟ್ಟುಹೋಗಿದ್ದಾರೆ. ಘಟನೆ ಸಂಬಂಧ 11 ಜನರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಟಿಎಂಸಿ ಮುಖಂಡನ ಹತ್ಯೆ – ಹಲವು ಮನೆಗಳಿಗೆ ಬೆಂಕಿ, 10 ಮಂದಿ ಸಜೀವ ದಹನ
ಈ ಘಟನೆಗೆ ಕೆಲವೇ ಗಂಟೆಗಳ ಮುನ್ನ, ಸ್ಥಳೀಯ ಪಂಚಾಯಿತಿ ಮುಖಂಡನ ಹತ್ಯೆಯಾಗಿತ್ತು ಎಂದು ಡಿಜಿಪಿ ಮನೋಜ್ ಮಾಳವೀಯ ಅವರು ಹೇಳಿದ್ದಾರೆ. ಪಂಚಾಯಿತಿ ಮುಖಂಡ ಟಿಎಂಸಿ ಪಕ್ಷದವರು. ಟಿಎಂಸಿಯ ಎರಡು ಗುಂಪುಗಳ ನಡುವಣ ದ್ವೇಷವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಆದರೆ, ಇದನ್ನು ಪೊಲೀಸರು ದೃಢಪಡಿಸಿಲ್ಲ.