ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲಿಯೇ ಚಾಕು ಇರಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಚೇತರಿಸಿಕೊಂಡಿದ್ದಾರೆ.
ಕೈಗೆ ಬ್ಯಾಂಡೇಜ್ ಸುತ್ತಿಕೊಂಡು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಎಲ್ಲರೂ ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ ಅವರೆಲ್ಲರಿಗೆ ನಾನು ಧನ್ಯವಾದ ಹೇಳಲು ಇಚ್ಛಿಸುತ್ತೇನೆ. ಹಲ್ಲೆಗೊಳಗಾದ ದಿನದ ಘಟನೆ ಬಗ್ಗೆ ಮಾತನಾಡಲು ಇದು ಸೂಕ್ತ ಸಮಯ ಅಲ್ಲ. ನನ್ನ ಆರೋಗ್ಯದ ಬಗ್ಗೆ ಪ್ರಾರ್ಥನೆ ಮಾಡಿದವರೆಲ್ಲರಿಗೂ ಧನ್ಯವಾದ ಎಂದು ಹೇಳಿ ಅಂತ ತನ್ನ ಕಾರಿನಲ್ಲಿ ತೆರಳಿದ್ರು.
Advertisement
Advertisement
ನಗರದ ಅಂಬೇಡ್ಕರ್ ರಸ್ತೆಯಲ್ಲಿರುವ ತನ್ನ ಕಚೇರಿಯಲ್ಲಿ ಮಾರ್ಚ್ 3ರಂದು ಮಧ್ಯಾಹ್ನ ಆರೋಪಿ ತೇಜರಾಜ್ ಶರ್ಮಾ ಎಂಬಾತ ಕಚೇರಿಗೆ ನುಗ್ಗಿ ಲೋಕಾಯುಕ್ತರೊಂದಿಗೆ ಮಾತುಕತೆ ನಡೆಸಿದ್ದಾನೆ. ಬಳಿಕ ಅವರ ಎದೆ, ತೊಡೆಭಾಗ, ಹೊಟ್ಟೆ ಹಾಗೂ ಕೈ ಹೀಗೆ ಮೂರು ಬಾರಿ ಇರಿದಿದ್ದಾನೆ. ಕೂಡಲೇ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಇತ್ತ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.