ಗಾಂಧಿನಗರ: ದೇಶದಲ್ಲೇ ನೀವು ಅಪಖ್ಯಾತಿ ಹೊಂದಿದ್ದೀರಿ. ನಿಮ್ಮಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi), ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Advertisement
ಗುಜರಾತ್ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರಚಾರದ ಭರಾಟೆ ಜೋರಾಗಿದೆ. ಬಿಜೆಪಿ ಕೇಂದ್ರ ಸಚಿವ ಅಮಿತ್ ಶಾ (Amit Shah) ಕಾಂಗ್ರೆಸ್ (Congress) ವಿರುದ್ಧ ಸತತವಾಗಿ ಹರಿಹಾಯುತ್ತಿದ್ದಾರೆ. ಶುಕ್ರವಾರ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ `2002ರಲ್ಲಿ ಹಿಂಸಾಚಾರದಲ್ಲಿ ತೊಡಗಿದ್ದ ಶಕ್ತಿಗಳಿಗೆ ಬಿಜೆಪಿ (BJP) ತಕ್ಕ ಪಾಠ ಕಲಿಸಿತು’ ಎಂದಿದ್ದ ಶಾ ಹೇಳಿಕೆ ವಿರುದ್ಧ ಓವೈಸಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್‌ನಲ್ಲಿ ಡೀಸೆಲ್ ಖಾಲಿ – ದಾರಿ ಮಧ್ಯೆ ಅಸುನೀಗಿದ ಬಡ ಜೀವ
Advertisement
Advertisement
ಗುಜರಾತಿನ ಜುಹಾಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಓವೈಸಿ, ಅಮಿತ್ ಶಾ ಅವರೇ ನಮಗೆ ಏನು ಪಾಠ ಕಲಿಸಿದ್ದೀರಿ? ಬಿಲ್ಕಿಸ್‌ನ ಅತ್ಯಾಚಾರಿಗಳನ್ನು ಬಿಡುಗಡೆ ಮಾಡೋದು ಪಾಠವೇ? ಬಿಲ್ಕಿಸ್‌ನ 3 ವರ್ಷದ ಮಗಳನ್ನು ಕಣ್ಣೆದುರೇ ಹೊಡೆದು ಕೊಂದವರನ್ನು ಬಿಡುಗಡೆ ಮಾಡುವುದು ಪಾಠವೇ? ಎಹ್ಸಾನ್ ಜಾಫ್ರಿ ಕೊಲ್ಲುವಂತಹ ಪಾಠ ಕಲಿಸಿದ್ದೀರಿ, ಇವೆಲ್ಲವೂ ಪಾಠವೇ? ಇಡೀ ದೇಶದಲ್ಲಿ ನೀವು ಅಪಖ್ಯಾತಿ ಹೊಂದಿದ್ದೀರಿ. ದೆಹಲಿಯಲ್ಲಿ ಕೋಮುಗಲಭೆಗಳು ನಡೆಯುತ್ತಿವೆ. ನೀವು ಯಾವ ಪಾಠ ಕಲಿಸಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಪಾದಯಾತ್ರೆಯಲ್ಲಿ ಮುಗ್ಗರಿಸಿ ಬಿದ್ದ ದಿಗ್ವಿಜಯ್ ಸಿಂಗ್
Advertisement
2022ರ ಕೋಮು ದ್ವೇಷದಿಂದ ಬೆಸ್ಟ್ ಬೇಕರಿಯನ್ನು ಸುಟ್ಟುಹಾಕಲಾಯಿತು. ಅದು ಸಾವಿರಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿತು. `ಮಿಸ್ಟರ್ ಅಮಿತ್ ಶಾ ಅವರೇ, ನಿಮ್ಮ ಇಂತಹ ಎಷ್ಟು ಪಾಠಗಳನ್ನು ನಾವು ನೆನಪಿನಲ್ಲಿಟ್ಟುಕೊಂಡಿದ್ದೇವೆ. ನಿಮ್ಮಿಂದ ಪಾಠ ಕಲಿಯೋದು ಏನೂ ಇಲ್ಲ. ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸಿದಾಗ ಮಾತ್ರ ನಿಜವಾದ ಶಾಂತಿ ಬಲಗೊಳ್ಳುತ್ತದೆ ಎಂದು ಸಲಹೆ ನೀಡಿದ್ದಾರೆ.
ಅಧಿಕಾರದ ಅಮಲಿನಲ್ಲಿ ಇಂದು ಗೃಹ ಸಚಿವರು ನಾವು ತಕ್ಕ ಪಾಠ ಕಲಿಸಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ ಅಧಿಕಾರ ಯಾವತ್ತೋ ಒಬ್ಬರ ಬಳಿಯೇ ಇರಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಕುಟುಕಿದ್ದಾರೆ. ಇದನ್ನೂ ಓದಿ: BJP ಸರ್ಕಾರ ಕರ್ನಾಟಕಕ್ಕೆ `ಕಳಂಕಿತ ರಾಜ್ಯ’ ಅನ್ನೋ ಬಿರುದು ತಂದುಕೊಟ್ಟಿದೆ – ಡಿಕೆಶಿ
ಗುಜರಾತ್ ವಿಧಾನಸಭಾ ಚುನಾವಣೆಯು ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆಯಲಿದೆ. ವಿಧಾನಸಭೆ ಚುನಾವಣೆಯಲ್ಲಿ ಎಐಎಂಐಎಂ ತನ್ನ 14 ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಮೊದಲ ಹಂತದಲ್ಲಿ 89 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಉಳಿದ 93 ವಿಧಾನಸಭಾ ಸ್ಥಾನಗಳಿಗೆ 2ನೇ ಹಂತದ ಮತದಾನ ನಡೆಯಲಿದೆ.
ಅಮಿತ್ ಶಾ ಹೇಳಿದ್ದೇನು?
ಗುಜರಾತ್ ಚುನಾವಣಾ ಪ್ರಚಾರದ ರ‍್ಯಾಲಿಯಲ್ಲಿದ್ದ ಅಮಿತ್ ಶಾ, 2002ರ ಹಿಂಸಾಚಾರದ ಕುರಿತು ಮಾತನಾಡಿದ್ದರು. ಕಾಂಗ್ರೆಸ್ ಪಕ್ಷದ ಸರ್ಕಾರ ಇದ್ದಾಗ ಆಗಾಗ ಕೋಮುಗಲಭೆಗಳು ನಡೆಯುತ್ತಿದ್ದವು. ಆಗಾಗ ಕರ್ಫ್ಯೂ ಹೇರಲಾಗುತ್ತಿತ್ತು, ಕಾನೂನು ಸುವ್ಯವಸ್ಥೆ ಸರಿ ಇರಲಿಲ್ಲ. ಕಾಂಗ್ರೆಸ್ ಆಳ್ವಿಕೆ ಇದ್ದಾಗ ಕೋಮು ಹಿಂಸೆ ನಡೆಯುತ್ತಿತ್ತೆ ಇಲ್ಲವೇ ಹೇಳಿ? 2002ರಲ್ಲಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಆಗಿದ್ದಾಗ ಹಿಂಸಾಚಾರದ ಪ್ರಯತ್ನ ನಡೆಯಿತು. ಆಗ ಅವರಿಗೆ ಸರಿಯಾದ ಪಾಠ ಕಲಿಸಲಾಯಿತು. ಅದಾದ ಬಳಿಕ ಒಂದೇ ಒಂದು ಕೋಮು ಹಿಂಸಾಚಾರ ನಡೆದಿಲ್ಲ. ಹಿಂಸೆಯಲ್ಲಿ ತೊಡಗಿದ್ದವರನ್ನು ಉಚ್ಚಾಟಿಸಲಾಯಿತು. ಕರ್ಫ್ಯೂರಹಿತ ಗುಜರಾತ್ ಅನ್ನು ಬಿಜೆಪಿ ಸ್ಥಾಪಿಸಿದೆ ಎಂದು ಶಾ ಹೇಳಿದ್ದರು.