ತ್ರಿಶಾ ಕೃಷ್ಣನ್ (Trisha Krishnan) ಸದ್ಯ ದಕ್ಷಿದ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. 40 ವರ್ಷದ ಈ ಸುಂದರಿಗೆ ಟಾಪ್ ಹೀರೋಗಳ ಜೊತೆ ನಟಿಸಲು ಭಾರೀ ಬೇಡಿಕೆ ಇದೆ. ಹೀಗಿರುವಾಗ ಬಾಲಿವುಡ್ ಚಿತ್ರಗಳಲ್ಲಿ ಯಾಕೆ ನಟಿಸಲ್ಲ ಎಂದು ತ್ರಿಶಾ ತಿಳಿಸಿದ್ದಾರೆ. ಇದನ್ನೂ ಓದಿ:ಮಂಜುನಾಥನ ಸನ್ನಿಧಿಯಲ್ಲಿ ನೆರವೇರಿತು ‘ಗಾಡ್ ಪ್ರಾಮಿಸ್’ ಚಿತ್ರದ ಸ್ಕ್ರೀಪ್ಟ್ ಪೂಜೆ
‘ಪೊನ್ನಿಯನ್ ಸೆಲ್ವನ್’ ಚಿತ್ರದ ಸಕ್ಸಸ್ ನಂತರ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ತ್ರಿಶಾ ತೊಡಗಿಸಿಕೊಂಡಿದ್ದಾರೆ. ಇದೀಗ ಸೌತ್‌ನ ಸಾಕಷ್ಟು ನಟಿಯರು ಬಾಲಿವುಡ್‌ನಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ತ್ರಿಶಾ ಈಗಾಗಲೇ ಒಂದು ಹಿಂದಿ ಸಿನಿಮಾದಲ್ಲಿ ನಟಿಸಿದ್ದಾರೆ. ಅದಾದ ನಂತರ ಅವರು ಹಿಂದಿ ಚಿತ್ರಗಳಲ್ಲಿ ಕಾಣಿಸಿಕೊಳ್ಳಲೇ ಇಲ್ಲ.

ಸದ್ಯ ‘ವಿಶ್ವಾಂಭರ’ (Vishwambara) ಸಿನಿಮಾದಲ್ಲಿ ಮೆಗಾಸ್ಟಾರ್ ಚಿರಂಜೀವಿಗೆ (Megastar Chiranjeevi) ತ್ರಿಶಾ ನಾಯಕಿಯಾಗಿದ್ದಾರೆ. ಚಿತ್ರೀಕರಣ ಭರದಿಂದ ಸಾಗುತ್ತಿದೆ.


