ನವದೆಹಲಿ: ಗಡಿಯಲ್ಲಿ ಚೀನಾ (China) ಯುದ್ಧಕ್ಕೆ ತಯಾರಿ ನಡೆಸುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಕೇಂದ್ರ ಸರ್ಕಾರ ಅದನ್ನು ಒಪ್ಪಿಕೊಳ್ಳುತ್ತಿಲ್ಲ. ನಿದ್ರಿಸುತ್ತಿದೆ ಎಂದು ಟೀಕಿಸಿದ್ದ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಗೆ (Rahul Gandhi) ಇದು ನೆಹರೂ (Jawaharlal Nehru) ಭಾರತವಲ್ಲ ಮೋದಿ ಭಾರತ ಎಂದು ಬಿಜೆಪಿ (BJP) ತಿರುಗೇಟು ನೀಡಿದೆ.
Advertisement
ಭಾರತ್ ಜೋಡೋ ಯಾತ್ರೆ (Bharat Jodo Yatra) ವೇಳೆ ಮಾಧ್ಯಮಗೋಷ್ಠಿ ನಡೆಸಿ ರಾಹುಲ್ ಗಾಂಧಿ, ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‍ನಲ್ಲಿ ಉಭಯ ದೇಶಗಳ ಸೈನಿಕರು ಕಾದಾಡಿದ ಬಳಿಕ ಈ ಬಗ್ಗೆ ಆತಂಕ ಮೂಡುತ್ತಿದೆ. ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ. ಅತಿಕ್ರಮಣಕ್ಕೆ ಅಲ್ಲ, ಯುದ್ಧಕ್ಕಾಗಿ ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಅವರ ಬಳಿ ಇರುವ ಅಸ್ತ್ರಗಳ ಮಾದರಿ ನೋಡಿ. ಅವರು ಯುದ್ಧಕ್ಕೆ ತಯಾರಿ ನಡೆಸುತ್ತಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತಿದೆ. ಆದರೆ ಇದನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ. ನಮ್ಮ ಸರ್ಕಾರ ಯುದ್ಧ ಸನ್ನಿವೇಶವನ್ನು ಅಲ್ಲಗಳೆಯುತ್ತಿದೆ. ಇದನ್ನು ಮುಚ್ಚಿಟ್ಟು ಪ್ರಯೋಜನವಿಲ್ಲ ಎಂದು ಟೀಕಿಸಿದ್ದರು. ಇದನ್ನೂ ಓದಿ: ಚೀನಾ ಯುದ್ಧ ತಯಾರಿ ನಡೆಸುತ್ತಿದೆ – ನಮ್ಮ ಕೇಂದ್ರ ಸರ್ಕಾರ ನಿದ್ರಿಸುತ್ತಿದೆ: ರಾಹುಲ್ ಗಾಂಧಿ
Advertisement
Advertisement
ಇದೀಗ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಸಂಸದ ರಾಜ್ಯವರ್ಧನ್ ಸಿಂಗ್ ರಾಥೋಡ್ (Rajyavardhan Singh Rathore) ತಿರುಗೇಟು ನೀಡಿದ್ದು, ರಾಹುಲ್ ಗಾಂಧಿ ಅವರ ಅಜ್ಜ ಮಲಗಿದ್ದರು. ಅವರು ನಿದ್ದೆ ಮಾಡುವಾಗ ಭಾರತದ 37 ಸಾವಿರ ಚದರ ಕಿ.ಮೀ. ಪ್ರದೇಶ ಚೀನಾ ಪಾಲಾಗಿತ್ತು. ಆ ನಂತರ ರಾಹುಲ್ ಗಾಂಧಿ ಚೀನಾದೊಂದಿಗೆ ಸ್ನೇಹ ಬೆಳೆಸಬೇಕು ಎಂದು ಭಾವಿಸಿದ್ದರು. ಈಗ ಸ್ನೇಹವು ಅದೆಷ್ಟು ಆಳವಾಗಿದೆ ಎಂದರೆ, ಚೀನಾ ಏನು ಮಾಡುತ್ತಿದೆ ಎಂಬುದು ಅವರಿಗೆ ಮೊದಲೇ ಗೊತ್ತಿದೆ. ರಾಜೀವ್ ಗಾಂಧಿ ಫೌಂಡೇಶನ್ ಚೀನಾದ ಕಮ್ಯುನಿಸ್ಟ್ ಪಕ್ಷದಿಂದ 1.35 ಕೋಟಿ ರೂ. ದೇಣಿಗೆ ಸ್ವೀಕರಿಸಿತ್ತು. ಆದರೆ ಈಗ ಮೊದಲಿನಂತಿಲ್ಲ, ಭಾರತ ಬದಲಾಗಿದೆ. ಇದು ನೆಹರೂ ಭಾರತ ಅಲ್ಲ.. ಮೋದಿ ಭಾರತ. ದೇಶವನ್ನು ರಕ್ಷಿಸಲು ಸೇನೆಗೆ ಮುಕ್ತ ಅವಕಾಶವಿದೆ. ನಮ್ಮ ಸೈನ್ಯವು ಆಕ್ರಮಣ ನಡೆಸಿದರೆ ಸುಮ್ಮನಿರಲ್ಲ. 2014ರ ಬಳಿಕ ನಮ್ಮ ಸೈನ್ಯ ಗಡಿಯ ಭದ್ರತೆಯನ್ನು ಬಹಳ ಕಟ್ಟುನಿಟ್ಟಿನಿಂದ ಮಾಡುತ್ತಿದೆ. ಸರ್ಕಾರ ಸೈನ್ಯಕ್ಕೆ ಸಂಪೂರ್ಣ ಅವಕಾಶ ನೀಡುತ್ತಿದೆ ಎಂದರು. ಇದನ್ನೂ ಓದಿ: 2024ರ ಅಂತ್ಯದ ವೇಳೆಗೆ ದೇಶದ ರಸ್ತೆ ಅಮೆರಿಕದ ರಸ್ತೆಗಳಂತೆ ಆಗುತ್ತವೆ: ಗಡ್ಕರಿ
Advertisement
ರಾಹುಲ್ ಗಾಂಧಿ ಗಡಿ ಘರ್ಷಣೆ ಕುರಿತು ಮಾತನಾಡುತ್ತಾ, ಚೀನಾ ನಮ್ಮ ದೇಶದ ಮೇಲೆ ದಾಳಿ ನಡೆಸಲು ಸಿದ್ಧವಾಗುತ್ತಿದೆ. ಚೀನಿ ಯೋಧರು ನಮ್ಮ ಯೋಧರಿಗೆ ಹೊಡೆಯುತ್ತಿದ್ದಾರೆ. ಇದರಿಂದ ಚೀನಾದ ಬೆದರಿಕೆ ನಮಗೆ ಸ್ಪಷ್ಟವಾಗಿ ತಿಳಿಯುತ್ತಿದೆ. ಆದರೆ ಸರ್ಕಾರ ಅದನ್ನು ನಿರ್ಲಕ್ಷಿಸುತ್ತಿದೆ. ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾ ದಾಳಿಗೆ ತಯಾರಿ ನಡೆಸುತ್ತಿದೆ. ಭಾರತ ಸರ್ಕಾರ ನಿದ್ದೆ ಮಾಡುತ್ತಿದೆ. ಈಗಾಗಲೇ 300ಕ್ಕೂ ಹೆಚ್ಚು ಚೀನಿ ಸೈನಿಕರು 17,000 ಅಡಿ ಎತ್ತರದ ಶಿಖರದ ತುದಿಗೆ ಪ್ರವೇಶಿಸಲು ಪ್ರಯತ್ನಿಸಿ, ಭಾರತೀಯ ಪೋಸ್ಟ್ ಅನ್ನು ಕಿತ್ತುಹಾಕಲು ಯತ್ನಿಸಿದ್ದಾರೆ ಇದನ್ನು ಗಂಭೀರವಾಗಿ ಪರಿಗಣಿಸಿ ಎಂದು ಎಚ್ಚರಿಕೆ ನೀಡಿದ್ದರು.