ತಾಪಮಾನ ಹೆಚ್ಚಾಗುತ್ತಿದ್ದಂತೆ ನಿಮ್ಮ ಆರೋಗ್ಯದ ಮೇಲೆ ಕಾಳಜಿ ವಹಿಸುವುದು ಅಗತ್ಯವಾಗಿರುತ್ತೆ. ಅದರಲ್ಲೂ ಕರುಳಿನ ಬಗ್ಗೆ ವಿಶೇಷ ಗಮನ ಕೊಡಬೇಕು. ಬೇಸಿಗೆಯಲ್ಲಿ ನಿಮ್ಮ ಕರುಳಿನ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಲು ಚೆನ್ನಾಗಿ ತಿನ್ನುವುದು ಹಾಗೂ ಆಹಾರದಲ್ಲಿ ನಿರ್ದಿಷ್ಟ ಪದಾರ್ಥಗಳನ್ನು ಸೇವಿಸಬೇಕಾಗುತ್ತದೆ. ಕರುಳಿನ ಆರೋಗ್ಯದಿಂದ ಮಾನಸಿಕ ಆರೋಗ್ಯ, ಮನಸ್ಥಿತಿ, ಸಣ್ಣ ಪುಟ್ಟ ಕಾಯಿಲೆಗಳು, ಹಾರ್ಮೋನ್‍ನಲ್ಲಿ ವ್ಯತ್ಯಾಸ, ಚರ್ಮದ ಪರಿಸ್ಥಿತಿಗಳು ಸುಧಾರಿಸುತ್ತವೆ.
Advertisement
ನೀರನ್ನು ಹೆಚ್ಚಾಗಿ ಕುಡಿಯಿರಿ: ಬೇಸಿಗೆಯಲ್ಲಿ ಉಳಿದ ದಿನಗಳಿಗಿಂತ ಹೆಚ್ಚಾಗಿ ನೀರು ಕುಡಿಯುವುದು ಆರೋಗ್ಯಕ್ಕೆ ಮುಖ್ಯವಾಗಿರುತ್ತದೆ. ನೀರಿನ ಜೊತೆಗೆ ಮಜ್ಜಿಗೆ, ಎಳೆನೀರನ್ನು ಅಧಿಕವಾಗಿ ಸೇವಿಸಿ. ಇದರಿಂದಾಗಿ ನಿಮ್ಮ ದೇಹದಲ್ಲಿ ಆಯಾಸವಾಗುವುದು ಸ್ವಲ್ಪ ಮಟ್ಟಿಗೆ ಕಡಿಮೆ ಆಗುತ್ತದೆ. ಜೊತೆಗೆ ಕರುಳಿನ ಆರೋಗ್ಯದಲ್ಲೂ ಸುಧಾರಣೆ ಕಾಣುತ್ತದೆ. ಅಷ್ಟೇ ಅಲ್ಲದೇ ಸೂರ್ಯನ ಶಾಖದಿಂದ ನಿಮ್ಮನ್ನು ರಕ್ಷಿಸಿ ನಿಮ್ಮ ತ್ವಚೆಯನ್ನು ಸುಂದರವಾಗಿಟ್ಟುಕೊಳ್ಳಲು ಸಹಾಯ ಮಾಡುತ್ತದೆ
Advertisement
Advertisement
ಹಸಿರು ತರಕಾರಿಯನ್ನು ಹೆಚ್ಚಾಗಿ ಸೇವಿಸಿ: ನೀವು ಪ್ರತಿನಿತ್ಯ ಸೇವಿಸುವ ಆಹಾರವನ್ನು ಸೇವಿಸುವಾಗ ಹಸಿರು ತರಕಾರಿ ಹಾಗೂ ತಾಜಾ ಹಣ್ಣನ್ನು ತಿನ್ನುವುದು ಉತ್ತಮ. ಇದರಿಂದ ಕರುಳಿನ ಆರೋಗ್ಯ ಉತ್ತಮವಾಗಲು ಸಹಾಯವಾಗುತ್ತದೆ. ಇದರ ಜೊತೆಗೆ ಮಸಾಲೆಯುಕ್ತ ಹಾಗೂ ಅತಿ ಹೆಚ್ಚು ಊಟ ಮಾಡುವುದರಿಂದ ಆದಷ್ಟು ದೂರವಿರಿ. ಇದನ್ನೂ ಓದಿ: ಔಷಧಿ ಗುಣಗಳಿರುವ ಏಲಕ್ಕಿ ಸೇವನೆಯಿಂದ ಸಿಗುತ್ತೆ ಈ ಪ್ರಯೋಜನ!
Advertisement
ಮೊಸರನ್ನು ಸೇವಿಸಿ: ಮೊಸರಿನಂತಹ ನೈಸರ್ಗಿಕ ಪ್ರೋಟಿನ್‍ಯುಕ್ತ ಆಹಾರವನ್ನು ಸೇವಿಸಿ. ಇದರಿಂದ ನಿಮ್ಮ ಕರುಳನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಬಿಸಿಲಿನ ಬೇಗೆಯಿಂದ ನಿಮ್ಮ ಆಯಾಸವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಸರಿಯಾಗಿ ನಿದ್ದೆ ಮಾಡಿ: ಪ್ರತಿಯೊಬ್ಬರಿಗೂ ಪ್ರತಿನಿತ್ಯ ಕನಿಷ್ಠ 7ರಿಂದ 8 ತಾಸುಗಳ ಕಾಲ ನಿದ್ದೆ ಬೇಕಾಗುತ್ತದೆ. ಇದರಿಂದಾಗಿ ಜೀರ್ಣಕ್ರಿಯೆಯೂ ಸರಿಯಾಗಿ ಆಗುತ್ತದೆ. ಜೊತೆಗೆ ಕರುಳಿನ ಆರೋಗ್ಯದ ಉತ್ತಮವಾಗಿಡುತ್ತದೆ. ಜೊತೆಗೆ ನಿಮ್ಮ ಇಡೀ ದಿನ ಫ್ರೆಶ್ ಆಗಿರುತ್ತದೆ. ಇದನ್ನೂ ಓದಿ: ಮಾವಿನ ಹಣ್ಣು ಎಂದರೆ ಇಷ್ಟಾನಾ- ಅದರ ಪ್ರಯೋಜನಗಳ ಬಗ್ಗೆ ತಿಳಿದಿದ್ಯಾ?