– ಮೀಸಲಾತಿ ವಿಚಾರ; ಬಿಜೆಪಿಗೆ ಡಿಕೆಶಿ 9 ಪ್ರಶ್ನೆಗಳು
– ಲಿಂಗಾಯತರಿಗೆ ಕೊಟ್ಟ 2 ಪರ್ಸೆಂಟ್ ಮೀಸಲಾತಿ ರದ್ದಾಗುತ್ತೆ
– ಮೇ 13ಕ್ಕೆ ಬಿಜೆಪಿ ಶವ ಆಚರಣೆ ಆಗುತ್ತೆ
ಮೈಸೂರು: ನಾನು ನಿಮಗೆ ರಕ್ತದಲ್ಲಿ ಬರೆದುಕೊಡ್ತೀನಿ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಅಧಿಕಾರ ಮಾಡುತ್ತೆ. ಬಿಜೆಪಿ 40 ಸೀಟಿಗೆ ನಿಲ್ಲುತ್ತದೆ. ನಾವು 150 ಸೀಟು ಗೆದ್ದೇ ಗೆಲ್ಲುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಶಪಥ ಮಾಡಿದ್ದಾರೆ.
Advertisement
ಮೈಸೂರಿನಲ್ಲಿ ಕಾಂಗ್ರೆಸ್ (Congress) ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, `ಬಿಜೆಪಿ ಅಧಿಕಾರಕ್ಕೆ ಬರುತ್ತೆ, ರಕ್ತದಲ್ಲಿ ಬರೆದುಕೊಡ್ತೀನಿ’ ಎಂಬ ಬಿ.ಎಸ್ ಯಡಿಯೂರಪ್ಪ (BS Yediyurappa) ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಈ ಬಾರಿ ಬಿಜೆಪಿ 40 ಪರ್ಸೆಂಟ್‌ನಂತೆ 40 ಸೀಟುಗಳನ್ನ ಗೆಲ್ಲಲಿದೆ ಎಂದು ಕುಟುಕಿದ್ದಾರೆ.
Advertisement
ಡಬಲ್ ಎಂಜಿನ್ ಸರ್ಕಾರದ ಮೀಸಲಾತಿಯ ಮೋಸದಾಟ ಬಯಲಾಗಿದೆ. ಬಿಜೆಪಿ ವಿಶ್ವಾಸ ದ್ರೋಹಿ ಪಾರ್ಟಿ ಅನ್ನೋದು ಸುಪ್ರೀಂ ಕೋರ್ಟ್ನಲ್ಲಿ ತಿಳಿದಿದೆ. ಚುನಾವಣಾ ವೇಳೆ ಜೇನುಗೂಡಿಗೆ ಕೈ ಹಾಕಿ ಮೋಸ ಮಾಡಿದ್ದಾರೆ. ಮೃತ್ಯುಂಜಯ ಸ್ವಾಮೀಜಿಗಳು ಹೇಳಿದಂತೆ ತಲೆ ಮೇಲೆ ತುಪ್ಪ ಇಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ರದ್ದು ನಿರ್ಧಾರ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ
Advertisement
Advertisement
ಅಮಿತ್ ಶಾ (Amit Shah) ಅವರೇ ನಿಮಗೆ ಬದ್ಧತೆ ಇದೆಯೇ? ಮೋಸ ಮಾಡಿಕೊಂಡು ಸುಳ್ಳು ಹೇಳಿಕೊಂಡು ಕಾಲ ಕಳೆಯುತ್ತಿದ್ದೀರಾ? ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಾ? ನೀವು ಲಿಂಗಾಯತರು, ಒಕ್ಕಲಿಗರಿಗೆ ಕೊಟ್ಟಿರೋ 2 ಪರ್ಸೆಂಟ್ ವಿತ್ ಡ್ರಾ ಆಗಿದೆ. ಮೇ 13 ತಾರೀಖು ಬಿಜೆಪಿಯ ಶವ ಆಚರಣೆ ಆಗಲಿದೆ. ನಾವು ಸರ್ವರಿಗೂ ಸಮಪಾಲು ಸಮಬಾಳು ಅನ್ನೋದನ್ನ ಹೇಳಿದ್ದೇವೆ. ಅದರಂತೆಯೇ ನಡೆದುಕೊಳ್ತೇವೆ ಎಂದು ಹೇಳಿದ್ದಾರೆ. ಇದೇ ವೇಳೆ 9 ಪ್ರಶ್ನೆಗಳನ್ನ ಬಿಜೆಪಿ ಮುಂದಿಟ್ಟಿದ್ದಾರೆ. ಇದನ್ನೂ ಓದಿ: ಮೈಲಾರಿ ಹೋಟೆಲ್‌ನಲ್ಲಿ ತಾನೇ ದೋಸೆ ಹಾಕಿ ರುಚಿಗೆ ಫಿದಾ ಆದ ಪ್ರಿಯಾಂಕಾ ಗಾಂಧಿ
ಇವೇ ಆ 9 ಪ್ರಶ್ನೆಗಳು:
1. ನೀವು ಲಿಂಗಾಯತರು, ಒಕ್ಕಲಿಗರು, ಎಸ್ಸಿ-ಎಸ್ಟಿಗಳ ಮೇಲೆ ಮೀಸಲಾತಿಯ (Reservation ವಂಚನೆ ಆಟ ಏಕೆ ಆಡಿದ್ದೀರಿ?
2. ನೀವು ಸುಪ್ರೀಂ ಕೋರ್ಟ್‌ನಲ್ಲಿ ಮೀಸಲಾತಿಯನ್ನು ಏಕೆ ಸಮರ್ಥಿಸಲಿಲ್ಲ?
3. ಮೀಸಲಾತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಲು ಬೊಮ್ಮಾಯಿ-ಮೋದಿ ಸರ್ಕಾರ ಏಕೆ ವಿಫಲವಾಯಿತು?
4. ಮಾರ್ಚ್ 14 ರಂದು ಸಂಸತ್ತಿನ ನೆಲದ ಮೇಲೆ ಎಸ್ಸಿ-ಎಸ್ಟಿಗಳಿಗೆ ಹೆಚ್ಚಿದ ಮೀಸಲಾತಿಯನ್ನು ಮೋದಿ ಸರ್ಕಾರ ಏಕೆ ತಿರಸ್ಕರಿಸಿತು?
5. ಎಸ್ಸಿ-ಎಸ್ಟಿ ಗಾಗಿ ಹೆಚ್ಚಿದ ಮೀಸಲಾತಿ ಕಾನೂನನ್ನು ಕೇಂದ್ರ ಸರ್ಕಾರವು ಸಂವಿಧಾನದ 9ನೇ ಶೆಡ್ಯೂಲ್‌ನಲ್ಲಿ ಏಕೆ ಹಾಕಲಿಲ್ಲ?
6. ಎಸ್ಸಿ-ಎಸ್ಟಿಗಳ ಆಕಾಂಕ್ಷೆಗಳನ್ನು ಪೂರೈಸಲು ನೀವು ಮೀಸಲಾತಿಯ ಶೇ.50 ಸೀಲಿಂಗ್ ಅನ್ನು ಹೆಚ್ಚಿಸಲು ಏಕೆ ನಿರಾಕರಿಸುತ್ತಿದ್ದೀರಿ?
7. ಧ್ರುವೀಕರಣಕ್ಕಾಗಿ ನೀವು ಏಕೆ ಅನ್ಯಾಯವಾಗಿ ಅಲ್ಪಸಂಖ್ಯಾತರ ಮೀಸಲಾತಿ ಗುರಿಯಾಗಿಸಿಕೊಂಡಿದ್ದೀರಿ?
8. ಬೊಮ್ಮಾಯಿ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಹೇಳಿಕೆ ನೀಡುವ ಮೂಲಕ ಮೀಸಲಾತಿ ಕುರಿತಾದ ತನ್ನದೇ ಸರ್ಕಾರದ ಆದೇಶವನ್ನ ಏಕೆ ತಡೆಹಿಡಿದಿದೆ?
9. ಲಿಂಗಾಯತರು, ಒಕ್ಕಲಿಗರು ಮತ್ತು ಇತರರು ಮೀಸಲಾತಿ ಹೆಸರಿನಲ್ಲಿ ಬಿಜೆಪಿ ಮಾಡಿದ ದ್ರೋಹಕ್ಕಾಗಿ ಪ್ರಧಾನಮಂತ್ರಿಯವರು ಎಸ್ಸಿ-ಎಸ್ಟಿ ಸಮುದಾಯಗಳಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸುತ್ತಾರಾ?