ಮಡಿಕೇರಿ: ಕೊಡಗು (Kodagu) ಲೋಕಸಭಾ ಕ್ಷೇತ್ರವಾದರೆ ತಾನು ಬಿಜೆಪಿಯಿಂದ (BJP) ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಶಾಸಕ ಅಪ್ಪಚ್ಚು ರಂಜನ್(Appachu Ranjan) ಹೇಳಿದ್ದಾರೆ.
ಮೈಸೂರು ಕೊಡಗು ಲೋಕಸಭಾ ಚುನಾವಣೆಗೆ ಕೆಲ ತಿಂಗಳುಗಳಷ್ಟೇ ಬಾಕಿ ಇದೆ. ಈಗಾಗಲೇ ಮೈಸೂರು (Mysuru) ಕೊಡಗು ಸಂಸದ ಪ್ರತಾಪ್ ಸಿಂಹ (Pratap Simha) ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ತಾನು ಕೂಡ ಈ ಬಾರಿ ಲೋಕಸಭಾ ಚುನಾವಣೆ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಈ ಕುರಿತು ರಾಜ್ಯ ರಾಷ್ಟ್ರ ನಾಯಕರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಅಪ್ಪಚ್ಚು ರಂಜನ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ, ಸೋನಿಯಾ ಗಾಂಧಿಯವರಿಗೂ ಹೀಗೆ ಮಾತಾಡಿದ್ದಾರಾ?: ಛಲವಾದಿ ನಾರಾಯಣಸ್ವಾಮಿ
Advertisement
Advertisement
ಕೊಡಗು ಜಿಲ್ಲೆಯನ್ನು ಪ್ರತ್ಯೇಕ ಲೋಕಸಭಾ ಕ್ಷೇತ್ರವನ್ನಾಗಿ ಮಾಡಬೇಕು ಎಂಬ ಕೂಗು ಇದೆ. ಕೊಡಗಿನವರಿಗೆ ಲೋಕಸಭಾ ಅಭ್ಯರ್ಥಿ ಮಾಡಬೇಕು ಎಂಬ ಮಾತುಗಳು ಇವೆ. ಇವರೆಗೂ ಕೊಡಗು ಜಿಲ್ಲೆ, ಮಂಗಳೂರು-ಕೊಡಗೂ ಲೋಕಸಭಾ ಕ್ಷೇತ್ರವಾಗಿತ್ತು. ಬಳಿಕ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರವಾಗಿತ್ತು. ಈ ಬಾರಿ ಕೊಡಗಿಗೆ ಪ್ರತ್ಯೇಕವಾಗಿ ಲೋಕಸಭಾ ಕ್ಷೇತ್ರ ಬೇಕು ಎಂಬುವುದು ಜಿಲ್ಲೆಯ ಜನರ ಅಭಿಪ್ರಾಯವಾಗಿದೆ. ಒಂದು ವೇಳೆ ಕೊಡಗು ಲೋಕಸಭಾ ಕ್ಷೇತ್ರವಾದರೆ ತಾನು ಆಕಾಂಕ್ಷಿಯಾಗಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿಗಳಿಗೆ ಅಗೌರವ ತೋರುವುದು ಸಿಎಂಗೆ ಶೋಭೆ ತರಲ್ಲ: ಭೋಜೇಗೌಡ
Advertisement
Advertisement
ಬಿಜೆಪಿಯಿಂದ ಹಲವಾರು ಆಕಾಂಕ್ಷಿಗಳು ಇದ್ದಾರೆ. ಅದರೆ ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅದಕ್ಕೆ ನಾವು ಬದ್ಧವಾಗಿ ಇರುತ್ತೇವೆ. ಅದರಿಂದ ಚುನಾವಣೆಗೆ ತಯಾರಿ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಜೊತೆಗೆ ರಾಜ್ಯ ಹಾಗೂ ರಾಷ್ಟçನಾಯಕರ ಹೆಸರುಗಳನ್ನು ಸದ್ಯದ ಪರಿಸ್ಥಿತಿಯಲ್ಲಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜಕೀಯ ಮಾಡೋದು ಬಿಟ್ಟು ಜನರ ಭಾವನೆಗಳಿಗೆ ಬೆಲೆ ಕೊಡಲಿ: ಅಶ್ವಥ್ ನಾರಾಯಣ್
ಕೊಡಗಿನವರಿಗೆ ಆದ್ಯತೆ ನೀಡಬೇಕು ಎಂದು ರಂಜನ್ ಪರವಾಗಿ ಮಾಜಿ ಜಿಲ್ಲಾಧ್ಯಕ್ಷರು ಹಾಗೂ ಹಾಲಿ ಜಿಲ್ಲಾಧ್ಯಕ್ಷರು ಮನವಿ ಮಾಡಿದ್ದಾರೆ. ಅಲ್ಲದೇ ಅವರಿಗೆ ಈ ಬಾರಿ ಟಿಕೆಟ್ ನೀಡಿದರೆ 100ಕ್ಕೆ 100 ರಷ್ಟು ಗೆಲುವು ಸಾಧಿಸುವುದಾಗಿ ಹೇಳಿದ್ದಾರೆ. ಜನರು ಮತಗಳನ್ನ ಮೋದಿಯವರಿಗೆ ಹಾಕುವುದು, ಅಪ್ಪಚ್ಚು ರಂಜನ್‌ಗಲ್ಲ. ಮೋದಿ ಅವರು ಇನ್ನೊಂದು ಬಾರಿ ಪ್ರಧಾನಿ ಅಗಬೇಕು ಎಂಬುದು ಇಡೀ ದೇಶದ ಜನರ ಅಸೆಯಾಗಿದೆ. ಅದು ಈಡೆರುತ್ತದೆ ಎಂದು ಇಚ್ಛಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಶಿಷ್ಟಾಚಾರಗೆಟ್ಟ ಮುಖ್ಯಮಂತ್ರಿ: ಹೆಚ್‌ಡಿಕೆ ವಾಗ್ದಾಳಿ