ಮೈಸೂರು: ರಾಜ್ಯಾದ್ಯಂತ ಮಳೆಯ ಕೊರತೆ ಉಂಟಾಗಿ ಬರ ವ್ಯಾಪಿಸಿರುವ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು (Mysuru Dasara 2023) ಈ ಬಾರಿ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ (HC Mahadevappa) ತಿಳಿಸಿದ್ದಾರೆ.
Advertisement
ಈ ಕುರಿತು ಟ್ವಿಟ್ಟರ್ (X) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯದಲ್ಲಿ ಮಳೆಯ (Rain) ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ (Farmers) ವರ್ಗವು ಸಂಕಷ್ಟದಲ್ಲಿದೆ. ಆದ್ದರಿಂದ ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಿಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ. ಇದನ್ನೂ ಓದಿ: ನಾಡದೇವಿ ಚಾಮುಂಡೇಶ್ವರಿ ಹಬ್ಬಕ್ಕೆ ದಿನಗಣನೆ – ಮೈಸೂರು ದಸರಾಕ್ಕೆ ಬಹಿಷ್ಕಾರ ಹಾಕಿದ ಮಾವುತ ಕಾವಾಡಿಗಳು
Advertisement
Advertisement
2021ರಲ್ಲಿ ಕೋವಿಡ್ ಕಾರಣದಿಂದಾಗಿ ಸರಳ ದಸರಾ ಆಚರಿಸಲಾಗಿತ್ತು. ಜಂಬೂ ಸವಾರಿ ಮೆರವಣಿಗೆ ನಡೆದರೂ ಅರಮನೆ ಆವರಣಕ್ಕೆ ಮಾತ್ರ ಸೀಮಿತಗೊಳಿಸಲಾಗಿತ್ತು. ಕಳೆದ ವರ್ಷ ಅದ್ಧೂರಿ ದಸರಾ ಆಚರಣೆ ಮಾಡಲಾಗಿತ್ತು, ಆದರೆ ಈ ಬಾರಿ ಮಳೆ ಕೊರತೆಯಿಂದಾಗಿ ಬರ ವ್ಯಾಪಿಸಿರುವುದರಿಂದ ಸರಳ ದಸರಾ ಆಚರಣೆಗೆ ಸರ್ಕಾರ ನಿರ್ಧರಿಸಿದೆ. ಇದನ್ನೂ ಓದಿ: ಮೈಸೂರು ದಸರಾದಲ್ಲಿ ವಿಶೇಷ ಏರ್ ಶೋ ನಡೆಸಲು ಸಿಎಂ ಮನವಿ
Advertisement
Web Stories