ಕಲಬುರಗಿ: ಜಿಲ್ಲೆಯಾದ್ಯಂತ ಜುಲೈ 10 ರಂದು ಶಾಂತಿಯುತ ಬಕ್ರೀದ್ ಹಬ್ಬ ಆಚರಣೆಗೆ ಕರೆ ನೀಡಲಾಗಿದೆ.
ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿಸಿ ಯಶವಂತ ವಿ. ಗುರುಕರ್ ಅಧ್ಯಕ್ಷತೆಯಲ್ಲಿ ನಡೆದ ಶಾಂತಿ ಸಮಿತಿ ಸಭೆಯಲ್ಲಿ ಶಾಂತಿಯುತ ಆಚರಣೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಟೈಲರ್ ಶಿರಚ್ಛೇದನ ಮಾಡಿದ ಮುಸ್ಲಿಂ ಯುವಕರು ಕೆಲವೇ ಗಂಟೆಗಳಲ್ಲಿ ಅರೆಸ್ಟ್
Advertisement
Advertisement
ಬಕ್ರೀದ್ ಹಬ್ಬ ದಿನದಂದು ಯಾವುದೇ ಮೆರವಣಿಗೆ ನಡೆಸುವಂತಿಲ್ಲ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020 ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕಾರಣ ಗೋಹತ್ಯೆ ಮಾಡುವಂತಿಲ್ಲ. ಜೊತೆಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಿಲ್ಲ ಶಾಂತಿಯುತವಾಗಿ ಬಕ್ರೀದ್ ಹಬ್ಬ ಆಚರಣೆ ಮಾಡುವಂತೆ ಸೂಚನೆ ಜಿಲ್ಲಾಧಿಕಾರಿ ನೀಡಿದ್ದಾರೆ. ಇದನ್ನೂ ಓದಿ: ಒಬ್ಬ ಹೇಡಿ ಮಾಡಿದ ಕೃತ್ಯಕ್ಕೆ ಇಡೀ ಸಮುದಾಯವನ್ನು ವಿರೋಧಿಸುವುದು ಸರಿಯಲ್ಲ: ಅಬ್ದುಲ್ ರಜಾಕ್
Advertisement
Advertisement
ತಾಲೂಕು ಮಟ್ಟದಲ್ಲಿ ಪೊಲೀಸ್ ಇಲಾಖೆಯಿಂದ ಅನಧಿಕೃತ ಪ್ರಾಣಿ ವಧೆ, ಸಾಗಾಟ ತಡೆಗೆ ಸ್ಕ್ವಾರ್ಡ್ ಸಮಿತಿ ರಚಿಸಿದ್ದು, ಎಲ್ಲಾ ಮುಂಜಾಗ್ರತೆ ಕೈಗೊಳ್ಳಲಾಗಿದೆ. ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಕಲ್ಪಿಸುವಂತೆ ನಿರ್ದೇಶನ ನೀಡಿದ್ದಾರೆ.
ಸಭೆಯಲ್ಲಿ ಎಸ್‌ಪಿ ಇಶಾ ಪಂತ್, ಹೆಚ್ಚುವರಿ ಎಸ್‌ಪಿ ಪ್ರಸನ್ನ ದೇಸಾಯಿ ಸೇರಿದಂತೆ ಶಾಂತಿ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.