ಬೆಂಗಳೂರು: ಇದೇ ನನ್ನ ಕೊನೆ ಚುನಾವಣೆ. ಮುಂದಿನ ಚುನಾವಣೆಯಿಂದ ನಾನು ಸ್ಪರ್ಧಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ತಮ್ಮ ಆಪ್ತರಿಗೆ ತಿಳಿಸಿದ್ದಾರೆ ಎಂದು ಹೇಳಲಾಗ್ತಿದೆ.
ಪರಮೇಶ್ವರ್ ಅವರು ರಾಜಕೀಯಕ್ಕೆ ಗುಡ್ ಬೈ ಹೇಳಿ ಶಿಕ್ಷಣ ಸಂಸ್ಥೆಗಳನ್ನು ನೋಡಿಕೊಳ್ಳಲು ನಿರ್ಧಾರ ತೆಗೆದುಕೊಂಡಿದ್ದಾರೆ. 2018ರಲ್ಲಿ ನಡೆಯುವ ಚುನಾವಣೆಯಲ್ಲಿ ಕೊರಟಗೆರೆಯಿಂದಲೇ ಸ್ಪರ್ಧಿಸಿ, 2023ಕ್ಕೆ ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಲಿದ್ದೇನೆ ಎಂದು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
Advertisement
Advertisement
ಅತ್ತ ಎಐಸಿಸಿ ಅಧ್ಯಕ್ಷ ಗಾದಿಗೆ ಏರೋ ರಾಹುಲ್ ಗಾಂಧಿ ಕನಸು ದೀಪಾವಳಿ ಬಳಿಕ ನನಸಾಗುವ ಲಕ್ಷಣ ಕಾಣಿಸ್ತಾ ಇದೆ. ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಅಕ್ಟೋಬರ್ 24 ರಂದು ನಡೆಯಲಿದ್ದು, ಇದೇ ಸಭೆಯಲ್ಲಿ ರಾಹುಲ್‍ಗೆ ಪಟ್ಟಾಭಿಷೇಕ ಘೋಷಣೆಯಾಗುವ ಸಾಧ್ಯತೆ ಇದೆ. ಪಕ್ಷದ ಹಲವು ಘಟಕಗಳಿಗೆ ಆಂತರಿಕ ಚುನಾವಣಾ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈ ಪ್ರಕಿಯೆಗಳನ್ನು ಡಿಸೆಂಬರ್ ಒಳಗಾಗಿ ಮುಗಿಸುವಂತೆ ಚುನಾವಣಾ ಆಯೋಗ ಸೂಚಿಸಿದೆ. ಹಿಮಾಚಲ ಪ್ರದೇಶ ಹಾಗೂ ಗುಜರಾತ್ ವಿಧಾನಸಭಾ ಚುನಾವಣೆಗೂ ಮುನ್ನ ರಾಹುಲ್‍ಗೆ ಪಕ್ಷದ ಅಧ್ಯಕ್ಷ ಗಾದಿ ನೀಡಿ ಚುನಾವಣೆ ಎದುರಿಸಲು ಕಾಂಗ್ರೆಸ್ ಗಂಭೀರ ಚಿಂತನೆ ನಡೆಸಿದೆ.
Advertisement
ಶೀಘ್ರದಲ್ಲೇ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದರೆ ಎಂದು ಸ್ವತಃ ಸೋನಿಯಾ ಗಾಂಧಿ ಕಳೆದ ವಾರ ಹೇಳಿದ್ದರು.