ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಜುಲೈ 2ರಂದು 45ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ನೆಚ್ಚಿನ ನಟನ ಜೊತೆ ಹುಟ್ಟುಹಬ್ಬ (Birthday) ಸೆಲೆಬ್ರೇಟ್ ಮಾಡಿಕೊಳ್ಳೋಕೆ ಫ್ಯಾನ್ಸ್ ಕಾಯುತ್ತಿದ್ದಾರೆ. ಹೀಗಿರುವಾಗ ಹುಟ್ಟುಹಬ್ಬ ಈ ವರ್ಷ ಆಚರಿಸಿಕೊಳ್ತಿಲ್ಲ ಎಂದು ಫ್ಯಾನ್ಸ್‌ಗೆ ಗಣೇಶ್ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:ಹ್ಯಾಟ್ರಿಕ್ ಹೀರೋ ಶಿವಣ್ಣ ಫ್ಯಾನ್ಸ್‌ಗೆ ಸಿಹಿಸುದ್ದಿ- ಏನದು?
ನನ್ನ ಆತ್ಮೀಯ ಅಭಿಮಾನಿಗಳೇ, ಜುಲೈ 2ರಂದು ನಾನು ನನ್ನ ಬೆಂಗಳೂರು ನಿವಾಸದಲ್ಲಿ ಲಭ್ಯನಿಲ್ಲ. ಆದೇಕೋ ತಮ್ಮೊಂದಿಗೆ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕೆಂಬ ನನ್ನ ಹಂಬಲ ಈ ಬಾರಿಯೂ ಕೈಗೂಡುತ್ತಿಲ್ಲ. ಹೀಗಾಗಿ ನನ್ನ ಪ್ರೀತಿಯ ಅಭಿಮಾನಿಗಳು ಮನೆಯ ಬಳಿ ಬಾರದೇ ತಾವು ಇದ್ದಲ್ಲಿಂದಲೇ ನನ್ನನ್ನು ಹರಸಿ, ಆಶೀರ್ವದಿಸಿ ಎಂದು ಬರೆದುಕೊಂಡಿದ್ದಾರೆ. ಮುಂದಿನ ವರ್ಷ ಖಂಡಿತ ಒಟ್ಟಿಗೆ ಹುಟ್ಟುಹಬ್ಬ ಆಚರಿಸೋಣ. ಅನಾನುಕೂಲಕ್ಕೆ ಕ್ಷಮೆಯಿರಲಿ ಎಂದಿದ್ದಾರೆ. ಎಂದಿನ ತಮ್ಮ ಅಭಿಮಾನದ ನಿರೀಕ್ಷೆಯೊಂದಿಗೆ ನಿಮ್ಮವ ಎಂದು ನಟ ಗಣೇಶ್ ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್‌ಗೆ ಮನವಿ ಮಾಡಿದ್ದಾರೆ. ಇದು ಫ್ಯಾನ್ಸ್‌ಗೆ ನಿರಾಸೆ ಮೂಡಿಸಿದೆ.
ಅಂದಹಾಗೆ, ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಹಾಡುಗಳು ಸೂಪರ್ ಹಿಟ್ ಆಗಿವೆ. ಚಿತ್ರದ ಬಗ್ಗೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆ ಮೂಡಿಸಿದೆ. ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ.