ಚಿಕ್ಕಬಳ್ಳಾಪುರ: ಉಪಚುನಾವಣೆಗೆ ಮುನ್ನ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿ ಡಾ.ಕೆ ಸುಧಾಕರ್ ಮನವಿಗೆ ಮಣಿದು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದ ನೂತನ ಮಂಚೇನಹಳ್ಳಿ ತಾಲೂಕಿಗೆ ತೂಬಗೆರೆ ಹೋಬಳಿ ಸೇರ್ಪಡೆಗೆ ಕಾಂಗ್ರೆಸ್ ಶಾಸಕ ವೆಂಕಟರಮಣಯ್ಯ ವಿರೋಧ ವ್ಯಕ್ತಪಡಿಸಿ ಹೋರಾಟಕ್ಕಿಳಿದಿದ್ದಾರೆ.
ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಹೋಬಳಿ ಕೇಂದ್ರವನ್ನು ಸಿಎಂ ಯಡಿಯೂರಪ್ಪ ನೂತನ ತಾಲೂಕು ಕೇಂದ್ರವಾಗಿ ಘೋಷಣೆ ಮಾಡಿದರು. ಈ ನೂತನ ಮಂಚೇನಹಳ್ಳಿ ತಾಲೂಕಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯನ್ನು ಸೇರ್ಪಡೆ ಮಾಡಲು ಸರ್ಕಾರ ಮುಂದಾಗಿದೆ. ಹೀಗಾಗಿ ಸರ್ಕಾರದ ನಡೆಯನ್ನು ಖಂಡಿಸಿರುವ ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಯ್ಯ ಉಪಚುನಾವಣೆ ಮುಗಿದ ಬೆನ್ನಲ್ಲೆ ಯಡಿಯೂರಪ್ಪ ಸರ್ಕಾರದ ವಿರುದ್ಧ ಹೋರಾಟಕ್ಕಿಳಿದಿದ್ದಾರೆ.
Advertisement
Advertisement
ದೊಡ್ಡಬಳ್ಳಾಪುರದಿಂದ ದೇವನಹಳ್ಳಿ ತಾಲೂಕು ಚಪ್ಪರದಕಲ್ಲು ಬಳಿಯ ನೂತನ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಎದುರು ವೆಂಕಟರಮಣಯ್ಯ ಪ್ರತಿಭಟನಾ ಧರಣಿ ನಡೆಸಿದರು. ಧರಣಿಯಲ್ಲಿ ತೂಬಗೆರೆ ಹೋಬಳಿ ಹಿತರಕ್ಷಣಾ ಸಮಿತಿಯ ಸದಸ್ಯರು ಸೇರಿ ಸಾವಿರಾರು ಮಂದಿ ಸಾರ್ವಜನಿಕರು ಭಾಗಿಯಾಗಿದರು. ಪ್ರತಿಭಟನೆಯಲ್ಲಿ ಯಾವುದೇ ಕಾರಣಕ್ಕೂ ತೂಬಗೆರೆ ಹೋಬಳಿಯನ್ನು ಮಂಚೇನಹಳ್ಳಿ ತಾಲೂಕಿಗೆ ಸೇರ್ಪಡೆ ಮಾಡಬಾರದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ರವೀಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
Advertisement
Advertisement
ಮಂಚೇನಹಳ್ಳಿ ನೂತನ ತಾಲೂಕು ಘೋಷಣೆ ವಿಚಾರ ಉಪಚುನಾವಣಾ ಕಣದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಸುಧಾಕರ್ ಮನವಿಗೆ ಸ್ಪಂದಿಸಿದ ಸಿಎಂ ಯಡಿಯೂರಪ್ಪ ಮಂಚೇನಹಳ್ಳಿ ತಾಲೂಕು ಘೋಷಣೆ ಮಾಡಿದರು. ಆದರೆ ಇದಕ್ಕೆ ಚುನಾವಣೆಗೆ ಮುನ್ನವೇ ಘೋಷಣೆಯಾದ ದಿನದಿಂದಲೇ ಗೌರಿಬಿದನೂರು ಶಾಸಕ ಹಾಗೂ ಮಾಜಿ ಸಚಿವ ಎನ್.ಎಚ್ ಶಿವಶಂಕರರೆಡ್ಡಿ ವಿರೋಧ ವ್ಯಕ್ತಪಡಸಿದುರು.
ಮಂಚೇನಹಳ್ಳಿ ತಾಲೂಕಿಗೆ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಹೋಬಳಿಯ ಸೇರಿದಂತೆ ಗೌರಿಬಿದನೂರಿನ ಯಾವುದೇ ಹಳ್ಳಿಗಳನ್ನು ಸೇರ್ಪಡೆ ಮಾಡಬಾರದು ಎಂದು ಹೋರಾಟ ನಡೆಸಿದ್ದರು. ಮಂಚೇನಹಳ್ಳಿ ನೂತನ ತಾಲೂಕಿಗೆ ಗೌರಿಬಿದನೂರಿನ ಹಳ್ಳಿಗಳನ್ನು ಸೇರಿಸಿದ್ದೇ ಆದರೆ ಕೈ ಕತ್ತರಿಸುವ ಕೆಲಸ ಮಾಡುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದರು. ಪಾಕಿಸ್ತಾನ-ಇಂಡಿಯಾ ವಿಭಜನೆಯ ಸಮಯದಲ್ಲಾದ ರೀತಿಯಲ್ಲೇ ರಕ್ತಪಾತ ಆಗುವ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದರು. ಚುನಾವಣೆಗೂ ಮುನ್ನ ಶಿವಶಂಕರರೆಡ್ಡಿ ಹೋರಾಟ ನಡೆಸಿದರೆ ಈಗ ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಯ್ಯ ಸರದಿ ಎಂಬಂತಾಗಿದೆ.