ಗಾಂಧೀನಗರ: ಗುಜರಾತ್ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳಷ್ಟೇ ಬಾಕಿ ಇದೆ. ಈ ನಡುವೆ ಬಿಜೆಪಿಯಿಂದ ತೃಪ್ತಿ ಹೊಂದದವರು ನಮಗೆ ಮತ ಹಾಕಬೇಕಿ ಅಂತ ಗುಜರಾತ್ ಜನತೆಗೆ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.
ಅಹಮದಾಬಾದ್‍ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಾವು ಕೊಳಕು ರಾಜಕೀಯ ಅಥವಾ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡು ಇಲ್ಲಿಯವರೆಗೂ ಬಂದಿಲ್ಲ. ಜನರಿಗೆ ಸಹಾಯ ಮಾಡುವ ಉದ್ದೇಶದಿಂದ ನಾವು ಇಲ್ಲಿಗೆ ಬಂದಿದ್ದೇವೆ. ನಾವು ದೆಹಲಿ ಮತ್ತು ಪಂಜಾಬ್‍ನಲ್ಲಿ ಉತ್ತಮ ಕೆಲಸ ಮಾಡುತ್ತಿದ್ದೇವೆ. ನಿಮ್ಮ ಮತವನ್ನು ಕಾಂಗ್ರೆಸ್‍ಗೆ ವ್ಯರ್ಥ ಮಾಡಬೇಡಿ. ಬಿಜೆಪಿಯಿಂದ ತೃಪ್ತಿ ಕಾಣದವರು ನಮಗೆ ಮತ ನೀಡಬೇಕು ಎಂದು ಹೇಳಿದ್ದಾರೆ.
Advertisement
Advertisement
ಗುಜರಾತ್ ಜನತೆ ಬದಲಾವಣೆಯನ್ನು ಬಯಸುತ್ತಿದ್ದಾರೆ. ಜನ ಎಎಪಿ ಜೊತೆ ಕೈಜೋಡಿಸುತ್ತಿದ್ದಾರೆ. ಗುಜರಾತ್‍ನಲ್ಲಿ ಕಾಂಗ್ರೆಸ್ ಪದಾಧಿಕಾರಿಗಳು ಅಥವಾ ಸ್ವಯಂಸೇವಕರು ಇಲ್ಲ. ಆದರೆ ಎಎಪಿಯ ಲಕ್ಷಾಂತರ ಜನರು ಒಂದು ತಿಂಗಳೊಳಗೆ ಬಿಜೆಪಿಯವರಿಗಿಂತ ಉತ್ತಮ ಸ್ಥಾನದಲ್ಲಿರುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತಮಿಳುನಾಡಿಗೆ ಸಂಪೂರ್ಣ ಸ್ವಾಯತ್ತತೆ ನೀಡಿ – CM ನೇತೃತ್ವದಲ್ಲೇ ಕೇಂದ್ರಕ್ಕೆ ಸಂಸದ ಎ.ರಾಜಾ ಒತ್ತಾಯ
Advertisement
Advertisement
2022ರ ಗುಜರಾತ್ ಚುನಾವಣೆಯಲ್ಲಿ ಎಎಪಿ ಬೃಹತ್ ದೊಡ್ಡ ಮಟ್ಟದಲ್ಲಿ ಗೆಲ್ಲುತ್ತದೆ. 27 ವರ್ಷಗಳ ಬಿಜೆಪಿ ಆಡಳಿತದಿಂದ ಜನರು ಬೇಸತ್ತಿದ್ದಾರೆ. ಕಾಂಗ್ರೆಸ್ ಅವರನ್ನು ಬದಲಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ತಿಳಿದಿದೆ. ಹಾಗಾಗಿ ಬಿಜೆಪಿ ಅವರು ಅಹಂಕಾರವನ್ನು ಬೆಳೆಸಿಕೊಂಡಿದ್ದಾರೆ. ಈ ಬಾರಿ ಎಎಪಿ ಕಡೆಗೆ ಜನರು ಭರವಸೆಯಿಂದ ಎದುರು ನೋಡುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: `ಲತ್ತಿಯ’ ಚಿತ್ರೀಕರಣದ ವೇಳೆ ನಟ ವಿಶಾಲ್‌ಗೆ ಗಾಯ