ಲಕ್ನೋ: ಸಮಾಜವಾದಿ ಟೋಪಿ ವಿಚಾರವಾಗಿ ಟೀಕಿಸಿದವರೇ ಇಂದು ಟೋಪಿ ಧರಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.
ಬುಧವಾರ 42ನೇ ಸಂಸ್ಥಾಪನಾ ದಿನದಂದು ಬಿಜೆಪಿ ನಾಯಕರು ಮತ್ತು ನರೇಂದ್ರ ಮೋದಿ ಅವರು ಕ್ಯಾಪ್ ಧರಿಸಿದ್ದರು. ಇನ್ನೂ ಈ ಫೋಟೋ ವೈರಲ್ ಆಗುತ್ತಿದ್ದಂತೆಯೇ ಸಮಾಜವಾದಿ ಪಕ್ಷದ ವಿರುದ್ಧ ಕಾಮೆಂಟ್ ಮಾಡುತ್ತಿದ್ದ ಮೋದಿ ಹಾಗೂ ಬಿಜೆಪಿ ಅವರೇ ಇಂದು ಕೆಂಪು ಟೋಪಿ ಹಾಕಿಕೊಂಡು ಕುಳಿತುಕೊಂಡಿದ್ದಾರೆ ಎಂದು ಅಖಿಲೇಶ್ ಯಾದವ್ ಬಿಜೆಪಿ ನಾಯಕರ ಕಾಲೆಳೆದಿದ್ದಾರೆ. ಇದನ್ನೂ ಓದಿ: ಗರ್ಲ್‍ಫ್ರೆಂಡ್, ಮಾಜಿ ಪತ್ನಿ ಜೊತೆ ಗೋವಾದಲ್ಲಿ ಪಾರ್ಟಿ ಮಾಡಿದ ಹೃತಿಕ್ ರೋಷನ್
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆ ವೇಳೆ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಸದಸ್ಯರು ರೆಡ್ ಕ್ಯಾಪ್ ಧರಿಸಿದ್ದರು. ಈ ವಿಚಾರ ತೀವ್ರ ಟೀಕೆಗೆ ಒಳಗಾಗಿತ್ತು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಇದಕ್ಕೆ ರೆಡ್ ಅಲರ್ಟ್ ಎಂದು ವ್ಯಂಗ್ಯವಾಡಿದ್ದರು. ಇದನ್ನೂ ಓದಿ: ನಾನು ನಿಮ್ಮವಳು, ಕೆಟ್ಟದ್ದಾಗಿ ಮಾತನಾಡಬೇಡಿ ಎಂದ ರಾಶಿ ಖನ್ನಾ
ಕೆಂಪು ಟೋಪಿ ಧರಿಸಿರುವವರು ವಂಚನೆಯನ್ನು ಮಾಡಲು, ತಮ್ಮ ಬೊಕ್ಕಸವನ್ನು ತುಂಬಲು, ಅಕ್ರಮವಾಗಿ ಸಂಪನ್ಮೂಲವನ್ನು ದೋಚುವ ಮತ್ತು ಮಾಫಿಯಾಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲು ಅಧಿಕಾರವನ್ನು ಬಯಸುತ್ತಾರೆ ಎಂದು ಸಮಾಜವಾದಿ ಪಕ್ಷದ ನರೇಂದ್ರ ಮೋದಿ ಅವರು ಆರೋಪಿಸಿದ್ದರು.