Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗಳೂರಿನ ಸೌಲಭ್ಯ ಬಳಸಿಕೊಂಡು ಬೆಳೆದವರು ಟೀಕೆ, ಟ್ವೀಟ್ ಮಾಡುತ್ತಿದ್ದಾರೆ: ಡಿಕೆಶಿ

Public TV
Last updated: October 19, 2025 3:39 pm
Public TV
Share
8 Min Read
DK Shivakumar 2 5
SHARE

-ಬೆಂಗಳೂರಿನ ಅಭಿವೃದ್ಧಿಗೆ 1.04 ಲಕ್ಷ ಕೋಟಿ ಮೊತ್ತದ ಯೋಜನೆಗಳು
-ಜನರ ಕಲ್ಯಾಣ ಯೋಜನೆಗಳಿಗೆ ಪ್ರತಿ ವರ್ಷ 1 ಲಕ್ಷ ಕೋಟಿ ವೆಚ್ಚ

ಬೆಂಗಳೂರು: ಬೆಂಗಳೂರಿನ (Bengaluru) ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮ ಆರಂಭಿಸಿ ದೊಡ್ಡ ಮಟ್ಟಕ್ಕೆ ಬೆಳೆದವರು ಈಗ ಬೆಂಗಳೂರಿನ ಬಗ್ಗೆ ಟೀಕೆ ಮಾಡಿ ಟ್ವೀಟ್ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಬೆಂಗಳೂರಿನ ಘನತೆಗೆ ಚ್ಯುತಿ ತರುತ್ತಿರುವವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಬೆಂಗಳೂರಿನ ಕೋರಮಂಗಲದ (Koramangala) ವೀರ ಯೋಧ ಉದ್ಯಾನವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಬೆಂಗಳೂರು ನಡಿಗೆ’ (Bengaluru Nadige) ಅಭಿಯಾನದ ಅಂಗವಾಗಿ ‘ನಾಗರಿಕರೊಂದಿಗೆ ಸಂವಾದ’ ನಡೆಸಿ, ಅವರ ಅಹವಾಲುಗಳನ್ನು ಆಲಿಸಿ ಡಿಸಿಎಂ ಅವರು ಮಾತನಾಡಿದರು. ಬೆಂಗಳೂರಿಗೆ ಬಂದು ಬೆಳೆದಿರುವವರು ಹಿಂದೆ ಹೇಗಿದ್ದೆವು, ಪ್ರಸ್ತುತ ಹೇಗಿದ್ದೇವೆ ಎಂಬುದನ್ನು ಮರೆತು ಟ್ವೀಟ್ ಮಾಡುತ್ತಿದ್ದಾರೆ. ನಾವು ನಮ್ಮ ಮೂಲವನ್ನು ಮರೆಯಬಾರದು. ಮೂಲವನ್ನು ಮರೆತರೆ ಯಶಸ್ಸು ಸಾಧಿಸುವುದಿಲ್ಲ ಎಂದು ನಾನು ನಂಬಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಈಗಲೇ ಯಾಕೆ ಪಥ ಸಂಚಲನ ಮಾಡಬೇಕು? ಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇ- ಆರ್‌ಎಸ್‌ಎಸ್‌ಗೆ ಪ್ರಿಯಾಂಕ್‌ ಪ್ರಶ್ನೆ

ನಗರದಾದ್ಯಂತ ಎಲ್ಲೆಲ್ಲಿ ರಸ್ತೆಗುಂಡಿಗಳಿವೆ ಎಂಬುದನ್ನು ಸಾರ್ವಜನಿಕರೇ ಫೋಟೋ ತೆಗೆದು ಅದನ್ನು ಮೊಬೈಲ್ ಆಪ್ ಮೂಲಕ ಸರ್ಕಾರದ ಗಮನಕ್ಕೆ ತರುವ ವ್ಯವಸ್ಥೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ನಾವು ರೂಪಿಸಿದ್ದೇವೆ. ಮಾಧ್ಯಮಗಳೂ ಸಹ ಸುದ್ದಿ ಮಾಡುತ್ತಿವೆ. ನಾನು ಟೀಕೆ ಹಾಗೂ ವಿಮರ್ಶೆಗಳನ್ನು ಸ್ವಾಗತಿಸುತ್ತೇನೆ. ಟೀಕೆಗಳು ಇದ್ದಾಗಲೇ ಪ್ರಜಾಪ್ರಭುತ್ವಕ್ಕೆ ಹೆಚ್ಚು ಮೌಲ್ಯ ಇರುತ್ತದೆ. ಆದರೆ ಕೆಲವರು ವಿಕೋಪಕ್ಕೆ ಹೋಗಿ ಟೀಕೆ ಮಾಡುತ್ತಿದ್ದಾರೆ. ಅಂತಹವರ ಟೀಕೆ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಜನ ನಮಗೆ ಅವಕಾಶ ನೀಡಿದ್ದು, ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿ: ಜಾತಿಗಣತಿಗೆ ತೆರಳಿದ್ದಾಗ ಕಾರು, ಬೈಕ್‌ ನಡುವೆ ಅಪಘಾತ – ಶಿಕ್ಷಕನ ಕಾಲು ಮುರಿತ, ಸಹ ಶಿಕ್ಷಕಿಗೆ ಗಾಯ

DK Shivakumar 1 4

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು. ಇತಿಹಾಸ ಗಮನಿಸಿದರೆ ನಾವು ಮಾಡಿದಷ್ಟು ತೀರ್ಮಾನಗಳನ್ನು ಯಾರೂ ಸಹ ಮಾಡಿಲ್ಲ. ನಾವು ಮಾಡಿದ ಕೆಲಸಗಳ ಬಗ್ಗೆ ಸಾರ್ವಜನಿಕರಿಗೆ, ವಿರೋಧ ಪಕ್ಷದವರಿಗೆ ಎಲ್ಲರಿಗೂ ತಿಳಿದಿದೆ. ಇಡೀ ದೇಶದಲ್ಲಿ ಸಮಸ್ಯೆಯಿದೆ. ಅವರೆಲ್ಲಾ ಮಾಧ್ಯಮಗಳನ್ನು ನಿಯಂತ್ರಣ ಮಾಡುತ್ತಿದ್ದಾರೆ. ನಾವು ಮುಕ್ತವಾಗಿ ಬಿಟ್ಟಿದ್ದೇವೆ. ದೆಹಲಿ, ಮುಂಬೈ ಸೇರಿದಂತೆ ಎಲ್ಲಿಗೆ ಬೇಕಾದರೂ ಕರೆದುಕೊಂಡು ಹೋಗಿ ರಸ್ತೆಗಳ ಸಮಸ್ಯೆಗಳನ್ನು ನಾವು ತೋರಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಆರ್‌ಎಸ್‌ಎಸ್‌ Vs ಸರ್ಕಾರ – ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಒಪ್ಪಿದ ಲಾಯರ್‌ | ಹೈಕೋರ್ಟ್‌ನಲ್ಲಿ ಏನಾಯಿತು?

ಜಿಬಿಎ ಮಾಡುವಾಗ ವಿರೋಧ ಪಕ್ಷದವರೂ ಸಹಕಾರ ನೀಡಿದರು. ಈ ಮೊದಲು 198 ವಾರ್ಡ್‌ಗಳಿದ್ದವು. ಈಗ ಐದು ಪಾಲಿಕೆಗಳಿಂದ 369 ವಾರ್ಡ್ಗಳಾಗಿವೆ. ಇಷ್ಟು ಬೇಗ ಪಾಲಿಕೆ ವಿಭಜನೆಯಿಂದ ಹಿಡಿದು ಎಲ್ಲಾ ಕೆಲಸಗಳನ್ನು ಮಾಡಲು ಸಾಧ್ಯವೇ ಎಂದು ದೇಶದಾದ್ಯಂತ ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದು ನುಡಿದರು.

ಜನರ ಬಳಿಗೆ ಸರ್ಕಾರ ಹೋಗಬೇಕು ಎಂದು ಐದು ಪಾಲಿಕೆಗಳನ್ನು ಮಾಡಲಾಗಿದೆ. ಬಿ ಖಾತಾದಿಂದ ಎ ಖಾತೆಗೆ ಬದಲಾವಣೆ ಮಾಡಿಕೊಳ್ಳಲು ಸರ್ಕಾರ ಅತ್ಯುತ್ತಮ ಅವಕಾಶ ನೀಡಿದೆ. ಸಿಎ ನಿವೇಶನಗಳ ಬಗ್ಗೆಯೂ ಪ್ರತ್ಯೇಕ ನೀತಿ ತರಲಾಗುತ್ತಿದೆ. ಗೊಂದಲ ಉಂಟಾಗುವುದು ಬೇಡವೆಂದು ನಗರ ಯೋಜನೆ ಕೆಲಸವನ್ನು ಬಿಡಿಎಯಿಂದ ಜಿಬಿಎಗೆ ನೀಡಲಾಗಿದೆ. ದೊಡ್ಡ ಯೋಜನೆಗಳನ್ನು ಸರ್ಕಾರ ಮಾಡಿದರೆ. ಚಿಕ್ಕ ಕೆಲಸಗಳನ್ನು ಪಾಲಿಕೆಗಳು ಮಾಡುತ್ತವೆ ಎಂದರು. ಇದನ್ನೂ ಓದಿ: ಮನೆ ಮುಂದೆ ಹಚ್ಚಿದ ದೀಪದಿಂದ ಅಗ್ನಿ ಅವಘಡ – 3 ಬೈಕ್‌ ಭಸ್ಮ, 7 ಮಂದಿಗೆ ಗಾಯ

DK Shivakumar 3 3

ನಗರದಲ್ಲಿ ನಿತ್ಯ ಮೂರು ಸಾವಿರ ವಾಹನಗಳು ನೋಂದಣಿಯಾಗುತ್ತಿವೆ. ಜನಸಂಖ್ಯೆ 1.40 ಕೋಟಿ ಮುಟ್ಟಿದೆ. 70 ಲಕ್ಷ ಮಂದಿ ಪ್ರತಿದಿನ ಹೊರಗಿನಿಂದ ಬಂದು ಹೋಗುತ್ತಿದ್ದಾರೆ. ಉದ್ಯೋಗ, ಶಿಕ್ಷಣ, ವಹಿವಾಟು, ಉದ್ದಿಮೆ ಹೀಗೆ ಅನೇಕ ಕೆಲಸಗಳಿಗಾಗಿ ಬೆಂಗಳೂರನ್ನು ಅವಲಂಭಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾದ ಆರ್‌ ಅಶೋಕ್‌

ಐದು ಪಾಲಿಕೆಗಳು ಸೇರಿ 50 ಕೋಟಿ ಮೊತ್ತದ ಕೆಲಸಗಳಿಗೆ ನೇರ ಅನುಮೋದನೆ ನೀಡುವ ಅವಕಾಶ ಕಲ್ಪಿಸಲಾಗಿದೆ. ಟೆಂಡರ್ ಇಲ್ಲದೇ ಪ್ರತಿ ಪಾಲಿಕೆಯ ಕೌನ್ಸಿಲ್ 10 ಕೋಟಿ ಮೊತ್ತದ ಕಾಮಗಾರಿಗಳಿಗೆ ಹಾಗೂ ಪಾಲಿಕೆ ಆಯುಕ್ತರು 3 ಕೋಟಿ ರೂಪಾಯಿ ಖರ್ಚು ಮಾಡಲು ಅವಕಾಶ ನೀಡಲಾಗಿದೆ. ಬಿಬಿಎಂಪಿ ಇದ್ದಾಗ 10 ಕೋಟಿ ಖರ್ಚು ಮಾಡಬಹುದಾಗಿತ್ತು. ಪಾಲಿಕೆ ಆಯುಕ್ತರ ವೆಚ್ಚ ಮಿತಿಯನ್ನು 1ರಿಂದ 3 ಕೋಟಿಗೆ, ಸ್ಥಾಯಿ ಸಮಿತಿ ವೆಚ್ಚ ಮಿತಿಯನ್ನು 3ರಿಂದ 5 ಕೋಟಿಗೆ, ಪಾಲಿಕೆ ಮೇಯರ್ ವೆಚ್ಚ ಮಿತಿಯನ್ನು 5ರಿಂದ 10 ಕೋಟಿಗೆ ಏರಿಸಲಾಗಿದೆ. ಆಮೂಲಕ ಪಾಲಿಕೆಗಳಿಗೆ ಆರ್ಥಿಕ ಉತ್ತೇಜನ ನೀಡಲಾಗಿದೆ. ನಮ್ಮ ಈ ನಿರ್ಧಾರದಿಂದ ಬಿಜೆಪಿ ನಾಯಕರು ಸಂತೋಷಗೊಂಡಿದ್ದು, ಅದನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಿಲ್ಲ. ನೀವು ನಮಗೆ ಸಹಕಾರ ನೀಡಿ ಎಂದರು. ಇದನ್ನೂ ಓದಿ: ಇಂದು ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ – ಯಾರಿಗೆ ಒಲಿಯಲಿದೆ ಗದ್ದುಗೆ?

ಇಂದು ಸುಮಾರು 180 ಜನರು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ. ಶಾಂತಿನಗರ ಹೌಸಿಂಗ್ ಸೊಸೈಟಿ, ಸ್ಯಾನಿಟರಿ ಲೈನ್, ಮಳೆ ನೀರು ಪ್ರವಾಹದಿಂದ ತೊಂದರೆಗೆ ಒಳಗಾದ ಪ್ರದೇಶಗಳ ಸಮಸ್ಯೆಗಳು, ಕೋರಮಂಗಲ ಮೆಟ್ರೋ ಮಾರ್ಗ, ಏರ್‌ಪೋರ್ಟ್‌ಗೆ ನೇರ ಬಸ್ ವ್ಯವಸ್ಥೆ, ಎಸ್‌ಟಿಪಿ ಅಳವಡಿಕೆ, ಬೆಳ್ಳಂದೂರು ಕೆರೆ ಸಮಸ್ಯೆ, ಪಾದಚಾರಿ ಮಾರ್ಗ, ಸಿಎ ನಿವೇಶನ, ಸಸಿ ನೆಡುವಿಕೆ ಹೀಗೆ ಹಲವಾರು ವಿಚಾರಗಳ ಬಗ್ಗೆ ನಾಗರಿಕರು ಗಮನ ಸೆಳೆದಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಭಕ್ತಸಾಗರ – ಕ್ರಮವಹಿಸದೇ ಅಹಿತಕರ ಘಟನೆಯಾದ್ರೆ ನಮ್ಮ ಇಲಾಖೆ ಜವಾಬ್ದಾರಿಯಲ್ಲ ಡಿಸಿಗೆ ಎಸ್‌ಪಿ ಪತ್ರ

ಜನರು ಸರ್ಕಾರದೊಂದಿಗೆ ಕೈ ಜೋಡಿಸಿದರೆ ಮಾತ್ರ ಯಾವುದೇ ಕೆಲಸವನ್ನು ಸರ್ಕಾರ ಪರಿಣಾಮವಾಗಿ ಮಾಡಲು ಸಾಧ್ಯ. ಬೆಂಗಳೂರನ್ನು ನಾನು ಹಾಗೂ ರಾಮಲಿಂಗಾ ರೆಡ್ಡಿ ಅವರು ಮಾತ್ರ ಬದಲಾಯಿಸಲು ಆಗುವುದಿಲ್ಲ. ಸಾರ್ವಜನಿಕರು ನಮಗೆ ಸಹಕಾರ ನೀಡಬೇಕು. ಕಸ ವಿಲೇವಾರಿಯಿಂದ ಹಿಡಿದು ಎಲ್ಲಾ ವಿಚಾರದಲ್ಲೂ ಸರ್ಕಾರದ ಜೊತೆ ಕೈ ಜೋಡಿಸಬೇಕು ಎಂದರು. ಇದನ್ನೂ ಓದಿ: ಕಾನೂನು ಸುವ್ಯವಸ್ಥೆ ಹಾಳಾಗಬಹುದು – ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ಇಲ್ಲ

ಬೆಂಗಳೂರಿನ ಅಭಿವೃದ್ಧಿಗೆ 1.04 ಲಕ್ಷ ಕೋಟಿ ಮೊತ್ತದ ಯೋಜನೆ:
ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಟನಲ್ ರಸ್ತೆ, ಎಲಿವೆಟೆಡ್ ಕಾರಿಡಾರ್, ಡಬಲ್ ಡೆಕ್ಕರ್, ಬಫರ್ ರಸ್ತೆ, ನಗರ ಸೌಂದರ್ಯ ಹೆಚ್ಚಿಸಲು ದೀಪಾಲಂಕಾರ, ಬೀದಿ ದೀಪಗಳಿಗೆ ಎಲ್‌ಇಡಿ ಬಲ್ಬ್ ಅಳವಡಿಕೆ ಸೇರಿದಂತೆ, ಮುಂದಿನ ನಾಲ್ಕೈದು ವರ್ಷಗಳಲ್ಲಿ 1.04 ಲಕ್ಷ ಕೋಟಿಯಷ್ಟು ಅಭಿವೃದ್ಧಿ ಯೋಜನೆ ರೂಪಿಸಿದ್ದೇವೆ ಎಂದರು. ಇದನ್ನೂ ಓದಿ: ಪ್ರಿಯಾಂಕ್‌ ಕ್ಷೇತ್ರ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ – 12 ಪ್ರಶ್ನೆ ಕೇಳಿದ ಸರ್ಕಾರ

ಜನರ ಬಳಿಗೆ ಸರ್ಕಾರವನ್ನು ಕರೆದೊಯ್ಯಬೇಕು ಎಂಬ ಕಾರಣಕ್ಕೆ ನಾವು ನಗರದಲ್ಲಿ ಐದು ಪಾಲಿಕೆ ರಚಿಸಿದ್ದೇವೆ. ನೀವು ಇಂದು ಕೊಟ್ಟಿರುವ ಅಹವಾಲು ಹಾಗೂ ಸಲಹೆಗಳನ್ನು ನಮ್ಮ ಅಧಿಕಾರಿಗಳು ದಾಖಲಿಸಿಕೊಂಡಿದ್ದು, ಅವರು ನಿಮ್ಮನ್ನು ಸಂಪರ್ಕಿಸಲಿದ್ದಾರೆ. ನಿಮ್ಮ ಅಹವಾಲು ಏನೇ ಇದ್ದರು 1533 ಸಹಾಯವಾಣಿಗೆ ಕರೆ ಮಾಡಿ ಎಂದು ತಿಳಿಸಿದರು. ಇದನ್ನೂ ಓದಿ: ಚಿಕ್ಕಮಗಳೂರು | ಬಿಂಡಿಗ ದೇವಿರಮ್ಮನ ದರ್ಶನಕ್ಕೆ ಕಾದು ನಿಂತ ಸಾವಿರಾರು ಭಕ್ತರಿಗೆ ಮಳೆ ಸವಾಲು

ಖಾತೆ ಮಾಡಿಸಿಕೊಳ್ಳುವ ಅವಕಾಶ ಕಳೆದುಕೊಳ್ಳಬೇಡಿ:
ನಿಮ್ಮ ಆಸ್ತಿ ದಾಖಲೆ ಸರಿ ಮಾಡಿಸಿಕೊಳ್ಳಲು ಸರ್ಕಾರ ಉತ್ತಮ ಅವಕಾಶ ಕಲ್ಪಿಸಿದ್ದು, ಎಲ್ಲರೂ ಇ ಖಾತಾ ಮಾಡಿಸಿಕೊಳ್ಳಿ. ಸರ್ಕಾರ ಬಿ ಖಾತೆಯಿಂದ ಎ ಖಾತಾಗೆ ಪರಿವರ್ತನೆ ಮಾಡಲು ಅವಕಾಶ ಕಲ್ಪಿಸಿದ್ದು ಈ ಅವಕಾಶವನ್ನು ಯಾರೂ ಕಳೆದುಕೊಳ್ಳಬೇಡಿ ಎಂದರು. ಇದನ್ನೂ ಓದಿ: ಬೆಂಗಳೂರು | 8 ದಿನ ಪ್ರೇಯಸಿ ಜೊತೆಯಿದ್ದ ಯುವಕ ಲಾಡ್ಜ್‌ನಲ್ಲಿ ಸಾವು

DK Shivakumar 1 5

ಸಿಎ ನಿವೇಶನದ ಬಗ್ಗೆ ಸಾರ್ವಜನಿಕರು ಪ್ರಸ್ತಾಪ ಮಾಡಿದ್ದು, ಸರ್ಕಾರ ಈ ವಿಚಾರದಲ್ಲಿ ಪ್ರತ್ಯೇಕ ನೀತಿ ರೂಪಿಸುತ್ತಿದೆ. ಈ ಹಿಂದೆ ಬಿಡಿಎ ನಿಭಾಯಿಸುತ್ತಿದ್ದ ಯೋಜನಾ ಪ್ರಾಧಿಕಾರದ ಜವಾಬ್ದಾರಿಯನ್ನು ಜಿಬಿಎಗೆ ವರ್ಗಾವಣೆ ಮಾಡಿದ್ದೇನೆ. ಬೆಂಗಳೂರಿನಲ್ಲಿ ದೊಡ್ಡ ಯೋಜನೆಗಳನ್ನು ಜಿಬಿಎ ನಿಭಾಯಿಸಲಿದ್ದು, ಉಳಿದ ಸಣ್ಣ ಯೋಜನೆಗಳನ್ನು ಪಾಲಿಕೆಗಳು ಮಾಡಲಿವೆ ಎಂದು ನುಡಿದರು. ಇದನ್ನೂ ಓದಿ: ಅರ್ಹರಿಗೆ ಪ್ರಶಸ್ತಿ ಕೊಡ್ಬೇಕು ಅಂತ ಮಾಡಿದ್ದೇ ಮೋದಿ ಅಂತ ಜಗ್ಗೇಶ್ ಹೇಳಿದ್ರು: ‘ಪದ್ಮಭೂಷಣ’ ಬಗ್ಗೆ ಅನಂತ್ ನಾಗ್ ಮಾತು

ಜನರ ಕಲ್ಯಾಣಕ್ಕೆ ಪ್ರತಿ ವರ್ಷ 1 ಲಕ್ಷ ಕೋಟಿ ವೆಚ್ಚ:
ಜನರ ಹೊಟ್ಟೆ ತುಂಬಿಸಬೇಕು. ಬೆಲೆ ಏರಿಕೆ ಸಮಸ್ಯೆಯಿಂದ ಜನರನ್ನು ರಕ್ಷಿಸಬೇಕು ಎಂದು ಐದು ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ. ಪ್ರತಿ ವರ್ಷ ಇದಕ್ಕೆ 52 ಸಾವಿರ ಕೋಟಿ ವೆಚ್ಚ ಮಾಡುತ್ತಿದ್ದೇವೆ. ಇದರ ಜೊತೆಗೆ ರೈತರಿಗೆ ಉಚಿತ ವಿದ್ಯುತ್ ನೀಡಲು ನಾವು ಪ್ರತಿ ವರ್ಷ 20 ಸಾವಿರ ಕೋಟಿ ನೀಡುತ್ತಿದ್ದೇವೆ. ಹೀಗೆ ಜನರ ಕಲ್ಯಾಣ ಕಾರ್ಯಕ್ರಮಗಳಿಗೆ 1 ಲಕ್ಷ ಕೋಟಿಯಷ್ಟು ಮೀಸಲಿಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ರಿಷಬ್‌ಗೆ ಆಕ್ಸಿಡೆಂಟ್‌ ಆಗಿತ್ತು, ಜ್ವರ ಇದ್ರೂ ಸೆಟ್‌ಗೆ ಗಾಬರಿಯಿಂದ ಬಂದಿದ್ದೆ: ಪ್ರಗತಿ ಶೆಟ್ಟಿ

ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದ್ದು, ನೀವೆಲ್ಲರೂ ಅದರಲ್ಲಿ ಭಾಗವಹಿಸಬೇಕು. ಇದು ಎಲ್ಲ ಸಮಾಜದ ಭವಿಷ್ಯಕ್ಕಾಗಿ ಮಾಡುತ್ತಿದ್ದೇವೆ. ನೀವು ಅಗತ್ಯವಾದ ಮಾಹಿತಿ ನೀಡಿ, ಅನಗತ್ಯ ಎನಿಸಿದ ಪ್ರಶ್ನೆಗಳನ್ನು ನಿರ್ಲಕ್ಷಿಸಿ ಎಂದು ಹೇಳಿದರು. ಇದನ್ನೂ ಓದಿ: RSS ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕೆ PDO ಅಮಾನತು – ಸರ್ಕಾರದ ಕ್ರಮ ಖಂಡಿಸಿ ಆದೇಶ ಹಿಂಪಡೆಯುವಂತೆ ಬಿಜೆಪಿ ಶಾಸಕ ಒತ್ತಾಯ

ರಾಮಲಿಂಗಾ ರೆಡ್ಡಿ ಅವರ ಬಗ್ಗೆ ನೀವು ಅಪಾರ ವಿಶ್ವಾಸ ವ್ಯಕ್ತಪಡಿಸಿದ್ದೀರಿ. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅವರು ಹೆಚ್ಚು ಬದ್ಧತೆಯಿಂದ ಕೆಲಸ ಮಾಡುತ್ತಿದ್ದಾರೆ. ಇಂತಹ ಹಿರಿಯ ನಾಯಕರನ್ನು ಹೊಂದಿರುವುದು ನಿಮ್ಮ ಭಾಗ್ಯ. ನೀವು 8 ಬಾರಿ ಅವರನ್ನು ಆಯ್ಕೆ ಮಾಡಿದ್ದು, ಬೆಂಗಳೂರನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ನಮಗೆ ಮಾರ್ಗದರ್ಶನ ನೀಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಯಾದಗಿರಿ | ಅನ್ನಭಾಗ್ಯ ಅಕ್ಕಿ ಬಳಿಕ ಜೋಳ, ಅವಧಿ ಮೀರಿದ ಹಾಲಿನ ಪೌಡರ್ ಪ್ಯಾಕೆಟ್ ಸೇರಿ ಅಕ್ರಮ ಜಾಲ ಪತ್ತೆ

ಪ್ರಶ್ನೋತ್ತರ:
ಬೆಂಗಳೂರು ನಡಿಗೆ ಕಾರ್ಯಕ್ರಮದ ಬಗ್ಗೆ ಕೇಳಿದಾಗ, ಜನರ ಅಭಿಪ್ರಾಯ, ಸಲಹೆ, ಅಹವಾಲು ಕೇಳಬೇಕು. ಉತ್ತಮ ಆಡಳಿತ ನೀಡಬೇಕು ಎಂದು ನಾನೇ ಜನರ ಬಳಿಗೆ ತಲುಪುತ್ತಿದ್ದೇನೆ. ಜನರಿಂದಲೂ ಉತ್ತಮ ಸಹಕಾರ ನೀಡುತ್ತಿದ್ದು, ನನಗೂ ಇದು ಹೊಸ ಅನುಭವ ನೀಡಿದೆ. ಜನರ ಅಹವಾಲನ್ನು ಅಧಿಕಾರಿಗಳು ಬಗೆಹರಿಸಲಿದ್ದಾರೆ ಎಂದರು. ಇದನ್ನೂ ಓದಿ: ಆರೆಸ್ಸೆಸ್, ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಯಾಕೆ ಲಾಠಿ, ಗನ್ ಟ್ರೈನಿಂಗ್ ಕೊಡ್ತಿಲ್ಲ?: ಶಾಸಕ ಮಂಜುನಾಥ ಭಂಡಾರಿ

ಖಾತಾ ಪರಿವರ್ತನೆಗೆ 5% ಹಣ ಪಾವತಿ ಬಗ್ಗೆ ಕೇಳಿದಾಗ, ಜನರು ತಮ್ಮ ಆಸ್ತಿ ದಾಖಲೆ ಸರಿ ಮಾಡಿಕೊಳ್ಳಲು ಇದು ದೊಡ್ಡ ಮೊತ್ತವಲ್ಲ. ಖಾತಾ ಪರಿವರ್ತನೆಯಿಂದ ಅವರ ಆಸ್ತಿ ಮೌಲ್ಯ ದುಪ್ಪಟ್ಟಾಗಲಿದೆ. ಅನೇಕರು ಕಂದಾಯ ನಿವೇಶನ ಖರೀದಿ ಮಾಡಿದ್ದು, ನಾವು ಎಲ್ಲರಿಗೂ ಸಮನಾದ ಸೇವೆ ನೀಡಬೇಕು. ಹೀಗಾಗಿ ಅವರ ಸಹಕಾರ ಬೇಕಾಗಿದೆ. ಈ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲಿದ್ದು, ಯಾರೂ ಲಂಚ ನೀಡುವ ಅಗತ್ಯವಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: 7ನೇ ಕ್ಲಾಸ್ ವಿದ್ಯಾರ್ಥಿನಿಯ ರೇಪ್ ಮಾಡಿದ ಟ್ಯೂಷನ್ ಟೀಚರ್‌ಗೆ 10 ವರ್ಷ ಜೈಲು – ತೆಲಂಗಾಣ ಕೋರ್ಟ್ ಆದೇಶ

ಆರ್‌ಎಸ್‌ಎಸ್ ನಿರ್ಬಂಧ ವಿಚಾರವಾಗಿ ಕೇಳಿದಾಗ, ಆರ್‌ಎಸ್‌ಎಸ್ ವಿಚಾರದಲ್ಲಿ ನಾವು ಹೊಸ ನಿಯಮ ರೂಪಿಸಿಲ್ಲ. ಬಿಜೆಪಿ ಸರ್ಕಾರದ ಆದೇಶವನ್ನೇ ಹೊರಡಿಸಿದ್ದೇವೆ. 2013ರಲ್ಲಿ ಜಗದೀಶ್ ಶೆಟ್ಟರ್ ಅವರ ಸರ್ಕಾರದ ಆದೇಶವನ್ನು ಮತ್ತೆ ಜಾರಿಗೊಳಿಸುತ್ತಿದ್ದೇವೆ ಎಂದರು. ಇದನ್ನೂ ಓದಿ: ಕಳೆದ ಅಕ್ಟೋಬರ್‌ನಿಂದಲೇ ಹತ್ಯೆಗೆ ಸ್ಕೆಚ್‌, ಮರಣೋತ್ತರ ಪರೀಕ್ಷೆಯನ್ನ ನಾನು ನೋಡಬೇಕು ಎಂದಿದ್ದ ಮಹೇಂದ್ರ ರೆಡ್ಡಿ

TAGGED:bengalurucongressDK Shivakumarkoramangalaಕಾಂಗ್ರೆಸ್ಕೋರಮಂಗಲಡಿಕೆ ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Ashwini Gowda Gilli
ಮಾಜಿ ಸ್ಪರ್ಧಿಗಳೆದುರು ಗಿಲ್ಲಿ ಬೆನ್ನಿಗೆ ನಿಂತ ಅಶ್ವಿನಿ ಗೌಡ
Cinema Latest Sandalwood Top Stories
Tiger Shroff Cinema Bollywood
ಮಸ್ತಿ-4 ನಿರ್ದೇಶಕನ ಜೊತೆ ಕೈಜೋಡಿಸಿದ ಟೈಗರ್ ಶ್ರಾಫ್?
Bollywood Cinema Latest Top Stories
Devara
ಜೂ.ಎನ್‌ಟಿಆರ್ ನಟನೆಯ ದೇವರ ಪಾರ್ಟ್-2 ನಿಂತೋಯ್ತಾ..?
Bollywood Cinema Districts Karnataka Latest Top Stories
pawan kalyan OG
ಪವನ್‌ ಕಲ್ಯಾಣ್ ಸಿನಿಮಾಗಳು ಸಾಲು ಸಾಲು ಸೋಲು – ಓಜಿ ಪಾರ್ಟ್-2ಗೆ ಸ್ಟಾರ್ಟ್ ಆಗಲ್ವಾ?
Cinema Latest Top Stories

You Might Also Like

Udupi Modi
Districts

ಉಡುಪಿಗೆ ಇಂದು ಪ್ರಧಾನಿ ಮೋದಿ ಆಗಮನ – ಕಾರ್ಯಕ್ರಮ 40 ನಿಮಿಷ ಪ್ರೀಪೋನ್‌

Public TV
By Public TV
8 minutes ago
Udupi Pm Modi
Karnataka

ಇಂದು ಕೃಷ್ಣನಗರಿ ಉಡುಪಿಗೆ ಮೋದಿ – ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ

Public TV
By Public TV
19 minutes ago
Mysuru Tiger Attack
Districts

Mysuru | ಹುಣಸೂರು ತಾಲೂಕಿನಲ್ಲೂ ಶುರುವಾಯ್ತು ಹುಲಿ ಕಾಟ; ಇಬ್ಬರು ರೈತರ ಮೇಲೆ ದಾಳಿ

Public TV
By Public TV
32 minutes ago
METRO GIRL
Latest

ಮುಗುಳ್ನಗೆಯಲ್ಲಿ ಹೃದಯ ದೋಚಿ ಹೋದವಳಿಗೊಂದು ಪತ್ರ..!

Public TV
By Public TV
48 minutes ago
2019 Public tv old video viral Legal action against miscreants
Bengaluru City

ಕಾಂಗ್ರೆಸ್ ಪ್ರಸ್ತುತ ಬೆಳವಣಿಗೆ: ಪಬ್ಲಿಕ್ ಟಿವಿಯ 2019ರ ವಿಡಿಯೋ ಲಿಂಕ್ ಮಾಡಿ ವೈರಲ್- ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ

Public TV
By Public TV
8 hours ago
Bulls survive leopard attack Hosapete Ballari
Bellary

ಚಿರತೆ ದಾಳಿಯಿಂದ ಜೀವ ಉಳಿಸಿಕೊಂಡ ಎತ್ತುಗಳು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?