ಜೆಡಿಎಸ್ ನಲ್ಲಿ ಹಣ ನೀಡಿದವರಿಗೆ ಮಾತ್ರ ಟಿಕೆಟ್ : ಬಳ್ಳಾರಿ ಟಿಕೆಟ್ ಆಕಾಂಕ್ಷಿ

Public TV
1 Min Read
BLY JDS

ಬಳ್ಳಾರಿ: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ ಅಸಮಾಧಾನ ಹೊಗೆ ಕಾಣಿಸಿಕೊಂಡಿತ್ತು. ಈಗ ಜೆಡಿಎಸ್ ನಲ್ಲೂ ಟಿಕೆಟ್ ಹಂಚಿಕೆ ವೇಳೆ ಅಸಮಾಧಾನ ಭುಗಿಲೆದ್ದಿದೆ.

HDK BLY

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಅವರು ಭಾಗವಹಿಸಿದ್ದ ವಿಕಾಸ ಪರ್ವ ಕಾರ್ಯಕ್ರಮದಲ್ಲೇ ಈ ಹೈಡ್ರಾಮಾ ನಡೆದಿದೆ. ಬಳ್ಳಾರಿ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಗಣಿ ಉದ್ಯಮಿ ಕಾಂಗ್ರೆಸ್ ಮುಖಂಡರಾಗಿದ್ದ ಇಕ್ಬಾಲ್ ಹೊತ್ತೂರರ ಹೆಸರನ್ನು ವಿಧಾನ ಪರಿಷತ್ ಸದಸ್ಯ ಶರವಣ ಅವರು ಘೋಷಣೆ ಮಾಡುತ್ತಿದ್ದಂತೆ ಮತ್ತೊಬ್ಬ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಜೆಡಿಎಸ್ ಜಿಲ್ಲಾಧ್ಯಕ್ಷ ಕುಡತಿನಿ ಶ್ರೀನಿವಾಸ್ ಅಸಮಾಧಾನವನ್ನು ಹೊರಹಾಕಿ ವೇದಿಕೆಯಿಂದ ಹೊರನಡೆದಿದ್ದಾರೆ.

ಈ ವೇಳೆ ಪಕ್ಷದ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಜೆಡಿಎಸ್ ನಲ್ಲಿ ಪಕ್ಷಕ್ಕೆ ದುಡಿದವರಿಗೆ ಬೆಲೆಯಿಲ್ಲದಾಗಿದೆ. ನನಗೆ ಎಚ್ ಡಿ ದೇವೇಗೌಡರು ಟಿಕೆಟ್ ನೀಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಇದೀಗ ಹಣ ಕೊಟ್ಟವರಿಗೆ ಟಿಕೆಟ್ ಮಾರಾಟ ಮಾಡಿದ್ದಾರೆಂದು ಗಂಭೀರ ಆರೋಪ ಮಾಡಿದರು.

vlcsnap 2018 04 11 22h36m21s94

Share This Article
Leave a Comment

Leave a Reply

Your email address will not be published. Required fields are marked *