ಐಶ್ವರ್ಯ ರೈ, ಸೋನಂ ಕಪೂರ್ ಸೇರಿದಂತೆ ಬಾಲಿವುಡ್ ನಟ-ನಟಿಯರಿಂದ ಶ್ರೀದೇವಿ ಅಂತಿಮ ದರ್ಶನ

ಮುಂಬೈ: ಅನೇಕ ಬಾಲಿವುಡ್ ನಟ ನಟಿಯರು ಹಾಗೂ ಚಿತ್ರರಂಗದವರು ನಟಿ ಶ್ರೀದೇವಿಯ ಅಂತಿಮ ದರ್ಶನ ಪಡೆದಿದ್ದಾರೆ.

ಮುಂಬೈನ ಲೋಖಂಡ್ವಾಲಾದ ಸೆಲೆಬ್ರೇಷನ್ ಸ್ಪೋರ್ಟ್ಸ್ ಕ್ಲಬ್‍ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಟಿ ಐಶ್ವರ್ಯಾ ರೈ ಬಚ್ಚನ್, ಜಯಾ ಬಚ್ಚನ್, ಜಯಪ್ರದಾ, ತಬು, ಸುಶ್ಮಿತಾ ಸೇನ್, ಮಾಧುರಿ ದೀಕ್ಷಿತ್, ಶ್ರೀದೇವಿಯ ಸೋದರ ಸೊಸೆ ಸೋನಂ ಕಪೂರ್, ಕಾಜೋಲ್, ಅಜಯ್ ದೇವಗನ್ ಮುಂತಾದ ಬಾಲಿವುಡ್ ನಟ ನಟಿಯರು ಸೇರಿದಂತೆ ಇತರೆ ಗಣ್ಯರು ಹಾಗೂ ಅಭಿಮಾನಿಗಳು ಶ್ರೀದೇವಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಇಂದು ಮಧ್ಯಾಹ್ನ 2 ಗಂಟೆಗೆ ಶ್ರೀದೇವಿಯ ಅಂತಿಮ ಯಾತ್ರೆ ಆರಂಭವಾಗಲಿದ್ದು, 3.30ರ ವೇಳೆಗೆ ವಿಲೆ ಪಾರ್ಲೆ ವೆಸ್ಟ್‍ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಸಂಬಂಧಿಕರ ಮದುವೆಗೆಂದು ದುಬೈಗೆ ತೆರಳಿದ್ದ ವೇಳೆ ಕಳೆದ ಶನಿವಾರ ಶ್ರೀದೇವಿ ಮೃತಪಟ್ಟಿದ್ದರು. ವೈದ್ಯಕೀಯ ಹಾಘೂ ಕಾನೂನು ಪ್ರಕ್ರಿಯೆ ಮುಗಿದ ಬಳಿಕ ಶ್ರೀದೇವಿ ಅವರ ಪಾರ್ಥೀವ ಶರೀರವನ್ನು ಮಂಗಳವಾರ ರಾತ್ರಿ ಮುಂಬೈಗೆ ತರಲಾಗಿತ್ತು.

ಆಕಸ್ಮಿಕವಾಗಿ ಬಾತ್‍ಟಬ್‍ನಲ್ಲಿ ಮುಳುಗಿ ಶ್ರೀದೇವಿ ಸಾವನ್ನಪ್ಪಿದ್ದಾರೆಂದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಹೇಳಲಾಗಿದೆ.

Leave a Reply

Your email address will not be published. Required fields are marked *