ಮಡಿಕೇರಿ: ಖ್ಯಾತ ಉದ್ಯಮಿ, ಟಾಟಾ ಸಂಸ್ಥೆಯ ಮುಖ್ಯಸ್ಥ ರತನ್ ಟಾಟಾ (Ratan Tata) ನಿಧನರಾಗಿದ್ದಾರೆ. ಕೊಡಗಿನಲ್ಲಿ (Kodagu) ರತನ್ ಟಾಟಾ ಅವರ ಒಡೆತನದಲ್ಲಿ ಸಾವಿರ ಎಕರೆ ಕಾಫಿ ಹಾಗೂ ಚಹಾ ತೋಟವಿದೆ.
ಪ್ರಸಿದ್ಧ ಟಾಟಾ ಸಂಸ್ಥೆ ಕೊಡಗು ಸೇರಿ ಹಾಸನ, ಚಿಕ್ಕಮಗಳೂರು, ಪಕ್ಕದ ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಸುಮಾರು 33 ಸಾವಿರ ಎಕರೆ ಕೃಷಿ ಭೂಮಿ ಹೊಂದಿದ್ದು, ಇಲ್ಲಿ ಕಾಫಿ ಹಾಗೂ ಚಹಾ ಬೆಳೆಯನ್ನು ಪ್ರಮುಖವಾಗಿ ಬೆಳೆಯಲಾಗುತ್ತಿದೆ. ಇಲ್ಲಿ ಸಾವಿರಾರು ಮಂದಿ ಕೆಲಸ ಮಾಡಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ.ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಹತ್ತರ ಬದಲಾವಣೆ: ಜೈಲನ್ನು 3 ವಿಭಾಗ ಮಾಡಲಿರುವ ಗೃಹ ಇಲಾಖೆ
ಟಾಟಾ ಕಾಫಿ ಸಂಸ್ಥೆ ಟಾಟಾ ಸಮೂಹದ ಒಂದು ಭಾಗ. ಟಾಟಾ ಕಾಫಿ ವಿಶ್ವದ ಅತಿದೊಡ್ಡ ಸಮಗ್ರ ಕಾಫಿ ಕೃಷಿ ಮತ್ತು ಸಂಸ್ಕರಣಾ ಕಂಪನಿಗಳಲ್ಲಿ ಒಂದಾಗಿದೆ. ಭಾರತೀಯ ಮೂಲದ ಕಾಳು ಮೆಣಸು ಉತ್ಪಾದಿಸುವ ಅತಿದೊಡ್ಡ ಸಂಸ್ಥೆಯಾಗಿದೆ. ಕನ್ಸಲ್ಟೆಂಟ್ ಕಾಫಿ ಸಂಸ್ಥೆಯೊಂದಿಗೆ 2000 ಇಸವಿಯಲ್ಲಿ ಕೊಡಗು ಸೇರಿ ಹಲವು ಕಡೆ ಟಾಟಾ ಸಂಸ್ಥೆ ಕಾಫಿ ತೋಟವನ್ನು ಖರೀದಿಸಿತ್ತು.
ಕೊಡಗಿನಲ್ಲಿ ಸುಮಾರು 13 ಕಾಫಿ ತೋಟಗಳನ್ನು ಹೊಂದಿದ್ದು, 18 ಸಾವಿರ ಎಕರೆ ಜಮೀನನ್ನು ಸಂಸ್ಥೆ ಹೊಂದಿದೆ ಎನ್ನಲಾಗುತ್ತಿದೆ. ಟಾಟಾ ಸಂಸ್ಥೆಯಿಂದ ಜಿಲ್ಲೆಯಲ್ಲಿ ಅರೇಬಿಕಾ ಹಾಗೂ ರೊಬೆಸ್ಟಾ ಕಾಫಿಯನ್ನು ಬೆಳೆಯಲಾಗುತ್ತಿದ್ದು, ಟಾಟಾ ಕಾಫಿಯ ಅರೇಬಿಕಾ ಕಾಫಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರಿ ಬೇಡಿಕೆಯಿದೆ.
ಕುಶಾಲನಗರದಲ್ಲಿ ಕಾಫಿ ಕ್ಯೂರಿಂಗ್ ಮಾಡಲಾಗುತ್ತಿದ್ದು, ಜಿಲ್ಲೆಯ ವಿವಿಧೆಡೆ ಕೊಯ್ಲು ಮಾಡಿದ ಕಾಫಿಯನ್ನು ಇಲ್ಲಿ ಕ್ಯೂರಿಂಗ್ ಮಾಡಲಾಗುತ್ತದೆ. ಟಾಟಾ ಕಾಫಿ ತೋಟದಲ್ಲಿ ಗೆಸ್ಟ್ ಹೌಸ್ ಕೂಡ ಇದೆ. ಇನ್ನೂ ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿಯಲ್ಲಿರುವ ಟೀ ಎಸ್ಟೇಟ್ ಸರ್ಕಾರದಿಂದ ಲೀಸ್‌ಗೆ ಪಡೆಯಲಾಗಿದೆ. ಟಾಟಾ ಕಾಫಿಯಲ್ಲಿ ಕೂರ್ಗ್ ಫೌಂಡೇಷನ್ ಸ್ಥಾಪನೆ ಮಾಡಲಾಗಿದ್ದು, ಸಿಆರ್‌ಎಸ್ ಫಂಡ್ ಮೂಲಕ ಆರೋಗ್ಯ ಶಿಬಿರ ಸೇರಿ ಹಲವು ಚಟುವಟಿಕೆ ನಡೆಸಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ರತನ್ ಟಾಟಾ ತಮ್ಮದೇ ಆದ ಪಾಲುದಾರ ಟಾಟಾ ಕಾಫಿ ಸಂಸ್ಥೆಯ ಸಾವಿರಾರು ಎಕರೆ ಕಾಫಿ ತೋಟವನ್ನು ಹೊಂದಿದ್ದರೂ, ತಮ್ಮ ಸಂಸ್ಥೆಗೆ ಯಾವತ್ತೂ ಭೇಟಿ ನೀಡಿರಲಿಲ್ಲ.ಇದನ್ನೂ ಓದಿ: ಡಿಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ ಟೀಂ ಇಂಡಿಯಾ ವೇಗಿ ಸಿರಾಜ್