ತಿರುವನಂತಪುರಂ: ಮಕರ ಸಂಕ್ರಾಂತಿಯಂದು (Makarasankranthi Festival) ಕೇರಳದ ಶಬರಿಮಲೆಯಲ್ಲಿ ಉದ್ಭವಿಸುವ ಮಕರ ಜ್ಯೋತಿಯನ್ನು (ಮಕರವಿಳಕ್ಕು) (Makara Jyothi) ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡರು. ಐತಿಹಾಸಿಕ ಶಬರಿಮಲೆ ದೇಗುಲದಲ್ಲಿ ಮಕರಜ್ಯೋತಿ ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಭಕ್ತಸಾಗರ ನೆರೆದಿತ್ತು.
Advertisement
ಅಯ್ಯಪ್ಪನ ಭಕ್ತಿಗೀತೆ ಗುಣಗಾನ ಮಾಡುತ್ತಾ ಲಕ್ಷಾಂತರ ಭಕ್ತರು ಮಕರ ಜ್ಯೋತಿ ದರ್ಶನ ಪಡೆದರು. ಸಂಜೆ 6.50ರ ಸುಮಾರಿಗೆ ಅಯ್ಯಪ್ಪ (Swamy Ayyappa) ದೇಗುಲದ ಎದುರಿನ ಪೊನ್ನಂಬಲಮೇಡುವಿನಲ್ಲಿ ಜ್ಯೋತಿ ದರ್ಶನವಾಯಿತು. ಇದನ್ನೂ ಓದಿ: ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣಗೆ ಶ್ರದ್ಧಾಂಜಲಿ
Advertisement
Advertisement
ಕೇರಳದ ಶಬರಿಮಲೆ (Sabarimala) ಅಯ್ಯಪ್ಪ ದೇಗುಲದಲ್ಲಿ ಶನಿವಾರ ಮಕರ ಸಂಕ್ರಾಂತಿ ಪ್ರಯುಕ್ತ ವಿಶೇಷ ಪೂಜೆ-ಪುನಸ್ಕಾರಗಳು ಆಯೋಜನೆಗೊಂಡಿದ್ದವು. ಪಂದಳ ರಾಜಮನೆತನದಿಂದ ಆಭರಣಗಳನ್ನು ತಂದು ಆಯ್ಯಪ್ಪ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಇದನ್ನೂ ಓದಿ: ಎಲ್ಲರ ಜಾತಕ ನನ್ನ ಬಳಿ ಇದೆ ಹುಷಾರ್ – ಪೊಲೀಸರಿಗೇ ಅವಾಜ್ ಬಿಟ್ಟ ಸ್ಯಾಂಟ್ರೋ ರವಿ..!
Advertisement
ಭಕ್ತ ಸಮೂಹದ ನಿರ್ವಹಣೆ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದೇವಾಲಯ ಮತ್ತು ಅದರ ಸುತ್ತಮುತ್ತ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k