ಜೈಪುರ: ರಾಜಸ್ಥಾನದ (Rajasthan) ಕೋಟಪುತ್ಲಿ ಬಳಿಯ ದೆಹಲಿ-ಜೈಪುರ ಹೆದ್ದಾರಿಯಲ್ಲಿ (Delhi-Jaipur Highway) ಸಾವಿರಾರು ಲೀಟರ್ ಹಾಲು ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಜನರು ಹಾಲು ತುಂಬಿಕೊಳ್ಳಲು ಮುಗಿಬಿದ್ದಿದ್ದಾರೆ.
ಟ್ಯಾಂಕರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಪರಿಣಾಮ ಸಾವಿರಾರು ಲೀಟರ್ ಹಾಲು ರಸ್ತೆಯುದ್ದಕ್ಕೂ ಕ್ಷೀರ ಸಾಗರದಂತೆ ಹರಿದಿದೆ. ಟ್ಯಾಂಕರ್ ಪಲ್ಟಿಯಾದ ವಿಷಯ ತಿಳಿದ ಸುತ್ತಮುತ್ತಲಿನ ಗ್ರಾಮಸ್ಥರು ಬಕೆಟ್, ಬಿಂದಿಗೆ, ಪ್ಲಾಸ್ಟಿಕ್ ಬಾಟಲಿ ಹಾಗೂ ಕ್ಯಾನ್‌ಗಳೊಂದಿಗೆ ಸ್ಥಳಕ್ಕೆ ಧಾವಿಸಿ, ಚೆಲ್ಲುತ್ತಿದ್ದ ಹಾಲನ್ನು ತುಂಬಿಸಿಕೊಳ್ಳಲು ಮುಗಿಬಿದ್ದಿದ್ದಾರೆ. ಇದರಿಂದ ಹೆದ್ದಾರಿಯಲ್ಲಿ ಕೆಲಕಾಲ ತೀವ್ರ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಇದನ್ನೂ ಓದಿ: ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಭಾಗಿ
ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗಿದ್ದು, ಪಲ್ಟಿಯಾದ ವಾಹನದಿಂದ ಚೆಲ್ಲುತ್ತಿರುವ ಹಾಲು ಹಾಗೂ ಜನರು ಸಿಕ್ಕಸಿಕ್ಕ ಪಾತ್ರೆಗಳಲ್ಲಿ ಹಾಲನ್ನು ತುಂಬಿಸಿಕೊಳ್ಳುತ್ತಿರುವ ದೃಶ್ಯ ಕಂಡುಬಂದಿದೆ. ಕುತೂಹಲದಿಂದ ವಾಹನ ಸವಾರರು ಸ್ಥಳದಲ್ಲಿ ನಿಂತಿದ್ದ ಪರಿಣಾಮ ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
A milk tanker overturned on the Delhi-Jaipur Highway near Rajasthan’s Kotputli, spilling thousands of litres of milk onto the road and drawing crowds of people who rushed to collect it in buckets, bottles and other containers.
The accident took place near the Highway King Hotel… pic.twitter.com/gpoDSMcgop
— IndiaToday (@IndiaToday) June 27, 2026
ಇನ್ನೂ ಘಟನೆಯಲ್ಲಿ ಟ್ಯಾಂಕರ್ ಚಾಲಕನಿಗೆ ತೀವ್ರ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣವೇ ಅವರನ್ನು ವಾಹನದಿಂದ ಹೊರತೆಗೆದು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ಮಾಹಿತಿ ತಿಳಿದ ಪೊಲೀಸರು ಮತ್ತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಜನರನ್ನು ಚದುರಿಸಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದ್ದು, ಅಪಘಾತಕ್ಕೆ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಇದನ್ನೂ ಓದಿ: ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ – ನಾಲ್ವರು ಅರೆಸ್ಟ್
