ಬೆಂಗಳೂರು: ರಾಜ್ಯ ಸರ್ಕಾರ ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳಿಗೆ ಇಂದು ಪರಿಹಾರ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಜನ ಬಸ್‍ಗಳ ಮೂಲಕ ಗುಂಪು, ಗುಂಪಾಗಿ ಆಗಮಿಸಿದ್ದು, ಕೊರೊನಾ ನಿಯಮವನ್ನು ಉಲ್ಲಂಘನೆ ಮಾಡಲಾಗಿದೆ.
Advertisement
ಬಸವಗುಡಿ ಮೈದಾನದಲ್ಲಿ ಇಂದು ಬೆಳಗ್ಗೆ 11:30ಕ್ಕೆ ಸರ್ಕಾರ ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ನೂರಾರು ಮಂದಿ ಬಸ್ ಏರಿ ಬಂದಿದ್ದರು. ಅಲ್ಲದೇ ಈ ವೇಳೆ ಎಲ್ಲರೂ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಕೊರೊನಾ ನಿಯಮವನ್ನು ಉಲ್ಲಂಘಿಸಿದ್ದಾರೆ.
Advertisement
Advertisement
ಪಬ್, ಬಾರ್‌ಗಳಲ್ಲಿ ಶೇ.50 ರಷ್ಟು ಜನರಿಗೆ ಮಾತ್ರ ಅನುಮತಿ ನೀಡಲಾಗಿದೆ. ಆದರೆ ಈ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರವೇ ಪಾಲನೆ ಆಗುತ್ತಿಲ್ಲ. ಜನರ ಮದುವೆ ಇತ್ಯಾದಿ ಕಾರ್ಯಕ್ರಮಗಳಿಗೆ ಮಾತ್ರ ಸರ್ಕಾರದ ನಿಯಮ ಪಾಲನೆಯಾಗಬೇಕು. ಸರ್ಕಾರಿ ಕಾರ್ಯಕ್ರಮಗಳಿಗೆ ನಿಮಯ ಪಾಲನೆ ಯಾಕಿಲ್ಲ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ವೈರಸ್‍ಗೆ ಬೆಚ್ಚಿಬಿದ್ದ ಜನ – ಡಿಸೆಂಬರ್‌ನಲ್ಲಿ ಹೆಚ್ಚು ವ್ಯಾಕ್ಸಿನೇಷನ್
Advertisement
ಸದ್ಯ ಕೋವಿಡ್‍ನಿಂದ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರದಿಂದ ತಲಾ 50 ಸಾವಿರ ರೂ. ಪರಿಹಾರ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 1 ಲಕ್ಷ ರೂ. ಪರಿಹಾರ ನೀಡುವ ಮೂಲಕ ಒಟ್ಟು 1.50 ಲಕ್ಷ ರೂ. ವಿತರಣೆ ಮಾಡಲಾಗಿದೆ.
ಈ ಯೋಜನೆಯನ್ನು ಕೊರೊನಾ ಎರಡನೇ ಅಲೆ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಅವರು ಘೋಷಿಸಿದ್ದರು. ಆದರೆ ಈ ಯೋಜನೆ ತಡವಾಗಿದ್ದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಳೆಗಾಲ ಅಧಿವೇಶದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಧ್ವನಿಎತ್ತಿದ್ದರು. ಇದೀಗ ಏಳು ತಿಂಗಳ ಬಳಿಕ ಈ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವ ರಾಜ್ಯದ 23,733 ಸಾವಿರ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 50 ಸಾವಿರ ರೂ. ಪರಿಹಾರ ನೀಡಿದ್ದು, ರಾಜ್ಯ ಸರ್ಕಾರ 12,276 ಬಿಪಿಎಲ್ ಕುಟುಂಬಗಳಿಗೆ 1 ಲಕ್ಷ ರೂ ಪರಿಹಾರ ನೀಡಿದೆ.
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸರ್ಕಾರ ಡಿಸೆಂಬರ್ 28 ರಿಂದ ನೈಟ್ ಕರ್ಫ್ಯೂ ಜಾರಿಗೊಳಿಸಿದೆ. ಅಲ್ಲದೇ ಬಸವರಾಜ ಬೊಮ್ಮಾಯಿ ಅವರು ಜನರ ಆರೋಗ್ಯ ಆರೋಗ್ಯ ದೃಷ್ಟಿಯಿಂದ ನೈಟ್ ಕರ್ಫ್ಯೂ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇದರಿಂದಾಗಿ ಜನ ತಮ್ಮ ದುಡಿಮೆಯ ಮೇಲೆ ಹೊಡೆತ ಬಿದ್ದಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಮಧ್ಯೆ ಸಿಎಂ ಕಾರ್ಯಕ್ರಮದಲ್ಲಿಯೇ ಕೊರೊನಾ ನಿಯಮ ಪಾಲನೆ ಉಲ್ಲಂಘನೆ ಆಗಿರುವ ಬಗ್ಗೆ ಇದೀಗ ಪ್ರಶ್ನಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ನನಗೆ ಮೂರು ಬಾರಿ ಕಚ್ಚಿತು : ಹಾವು ಕಡಿತದ ಬಗ್ಗೆ ವಿವರಿಸಿದ ಸಲ್ಲು