ಶಿವಮೊಗ್ಗ: ಶರಾವತಿ ಕಣಿವೆ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ಹಿನ್ನೆಲೆ ಶರಾವತಿ ನದಿಗೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿದ್ದು, ಸಾಗರ ತಾಲೂಕಿನಲ್ಲಿರುವ ಜೋಗ ಜಲಪಾತಕ್ಕೆ ಜೀವಕಳೆ ಬಂದಿದೆ.
ಧುಮ್ಮಿಕ್ಕಿ ಹರಿಯುತ್ತಿರುವ ಜೋಗ ಜಲಪಾತವನ್ನು ನೋಡಲು ಪ್ರವಾಸಿಗರ ದಂಡೇ ಬರುತ್ತಿದೆ. ಇಂದು ಭಾನುವಾರವಾಗಿರುವುದರಿಂದ ಜೋಗಕ್ಕೆ ಸಾವಿರಾರು ಪ್ರವಾಸಿಗರು ಆಗಮಿಸಿದ್ದಾರೆ. ಶನಿವಾರ ಸಹ ಸಾವಿರಾರು ಮಂದಿ ಪ್ರವಾಸಿಗರು ಭೇಟಿ ನೀಡಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ತೀವ್ರ ಬರದ ಛಾಯೆ – ತುಂಗಾ ಡ್ಯಾಂ ನೀರು ನಂಬಿ ಬೆಳೆ ಬೆಳೆಯದಂತೆ ಮನವಿ
ಮಳೆ ಹಾಗೂ ಮಂಜಿನಾಟದ ನಡುವೆ ಜೋಗದ ಸಿರಿಯನ್ನು ಪ್ರವಾಸಿಗರು ಕಣ್ತುಂಬಿಕೊಳ್ಳುತ್ತಿದ್ದಾರೆ. ರಾಜ, ರಾಣಿ, ರೋರರ್, ರಾಕೆಟ್ ಫಾಲ್ಸ್‌ನಲ್ಲಿ ಹಾಲ್ನೊರೆಯಂತೆ ನೀರು ಉಕ್ಕಿ ಹರಿಯುತ್ತಿದೆ. ಇದನ್ನೂ ಓದಿ: ಮಲೆನಾಡಲ್ಲಿ ಮಳೆಯಬ್ಬರ – ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಜೀವಕಳೆ

